ಜಮ್ಮು-ಕಾಶ್ಮೀರದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ವೈದ್ಯ ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ. ಮಧ್ಯ ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯ ಗುಂಡ್ ಪ್ರದೇಶದ ಗಗಂಗೀರ್‌ನಲ್ಲಿನ ಝಡ್-ಮೋಡ್ ಸುರಂಗದ ಕ್ಯಾಂಪ್ಸೈಟ್ ಬಳಿ ಘಟನೆ ನಡೆದಿದೆ.
ಐವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ, ಸುರಂಗ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.
ಮೃತರನ್ನು ಡಾ.ಶಹನವಾಜ್, ಫಹೀಮ್ ನಜೀರ್, ಕಲೀಂ, ಮೊಹಮ್ಮದ್ ಹನೀಫ್, ಶಶಿ ಅಬ್ರೋಲ್, ಅನಿಲ್ ಶುಕ್ಲಾ ಮತ್ತು ಗುರ್ಮೀತ್ ಸಿಂಗ್ ಎಂದು ಗುರುತಿಸಲಾಗಿದೆ. ತಕ್ಷಣವೇ ಪೊಲೀಸರು, ಭದ್ರತಾ ಪಡೆಗಳು ಸ್ಥಳಕ್ಕೆ ಆಗಮಿಸಿದ್ದು, ಸ್ಥಳದಲ್ಲಿದ್ದ ಉಳಿದ ಕಾರ್ಮಿಕರನ್ನು ರಕ್ಷಿಸಿದ್ದಾರೆ.
ಆರೋಪಿಗಳನ್ನು ಗುರುತಿಸಲು ಮತ್ತು ಈ ಹಿಂಸಾತ್ಮಕ ಕೃತ್ಯದ ಹಿಂದಿನ ಉದ್ದೇಶಗಳನ್ನು ಅರ್ಥಮಾಡಿಕೊಳ್ಳಲು ಪ್ರಸ್ತುತ ತನಿಖೆಗಳು ನಡೆಯುತ್ತಿವೆ. ದಾಳಿಗೊಳಗಾದ ಕಾರ್ಮಿಕರು ಝಡ್ ಮೋರ್ಹ್ ಸುರಂಗದಲ್ಲಿ ಕೆಲಸ ಮಾಡುವ ತಂಡದ ಭಾಗವಾಗಿದ್ದರು. ಈ ಸುರಂಗ ಮಾರ್ಗವು ಗಗನೀರ್ ನಿಂದ ಮಧ್ಯ ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯ ಸೋನಾಮಾರ್ಗ್‌ಗೆ ಸಂಪರ್ಕಿಸುತ್ತದೆ.
Very sad news of a dastardly & cowardly attack on non-local labourers at Gagangir in Sonamarg region. These people were working on a key infrastructure project in the area. 2 have been killed & 2-3 more have been injured in this militant attack. I strongly condemn this attack on…
— Omar Abdullah (@OmarAbdullah) October 20, 2024
ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಸಂತಾಪ ವ್ಯಕ್ತಪಡಿಸಿದ್ದು, ಅಮಾಯಕ ಕಾರ್ಮಿಕರ ಮೇಲೆ ಹೇಡಿತನದ ದಾಳಿ ಎಂದು ಕರೆದಿದ್ದಾರೆ.
ಮತ್ತಷ್ಟು ಓದಿ: ಜಮ್ಮು ಕಾಶ್ಮೀರದ ಪೂಂಚ್ನಲ್ಲಿ ಹಲವು ದಾಳಿಗಳಲ್ಲಿ ಭಾಗಿಯಾಗಿದ್ದ ಇಬ್ಬರು ಉಗ್ರರ ಬಂಧನ
ಜಮ್ಮು ಮತ್ತು ಕಾಶ್ಮೀರದ ಗಗಂಗೀರ್‌ನಲ್ಲಿ ನಾಗರಿಕರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಇದು ಹೇಡಿತನದ ಭೀಕರ ಕೃತ್ಯ ಎಂದು ಬಣ್ಣಿಸಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ, ಈ ಘಟನೆಗೆ ಕಾರಣರಾದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಭರವಸೆ ನೀಡಿದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ