AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jammu And Kashmir Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ 5.5 ತೀವ್ರತೆಯ ಭೂಕಂಪ

ವಾಯುವ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ರಾತ್ರಿ 5.5 ತೀವ್ರತೆಯ ಭೂಕಂಪದ ಅನುಭವವಾಗಿದೆ. ಭೂಕಂಪದ ಆಳ 10 ಕಿ.ಮೀ ಇದ್ದು ಭೂಕಂಪದ ಕೇಂದ್ರ ಬಿಂದು ಲಡಾಖ್​ನ ಕಾರ್ಗಿಲ್​ನ ವಾಯುವ್ಯಕ್ಕೆ 148 ಕಿ.ಮೀ ದೂರದಲ್ಲಿದೆ.

Jammu And Kashmir Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ 5.5 ತೀವ್ರತೆಯ ಭೂಕಂಪ
ಭೂಕಂಪImage Credit source: iStock
ನಯನಾ ರಾಜೀವ್
|

Updated on: Feb 20, 2024 | 7:48 AM

Share

ಜಮ್ಮು ಮತ್ತು ಕಾಶ್ಮೀರದಲ್ಲಿ 5.5 ತೀವ್ರತೆಯ ಭೂಕಂಪ(Earthquake) ಸಂಭವಿಸಿದೆ. ವಾಯುವ್ಯ ಕಾಶ್ಮೀರದ ಕೆಲವು ಭಾಗಗಳಲ್ಲಿ ಸೋಮವಾರ ರಾತ್ರಿ 9:35 ರ ಸುಮಾರಿಗೆ 5.5 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಆಳ 10 ಕಿ.ಮೀ. ನ್ಯಾಷನಲ್ ಸೆಂಟರ್ ಫಾರ್ ಸೆಸ್ಮಾಲಜಿ (ಎನ್‌ಸಿಎಸ್) ಪ್ರಕಾರ, ಭೂಕಂಪದ ಕೇಂದ್ರಬಿಂದು ಲಡಾಖ್‌ನ ಕಾರ್ಗಿಲ್‌ನ ವಾಯುವ್ಯಕ್ಕೆ 148 ಕಿಮೀ ದೂರದಲ್ಲಿದೆ. ಕಂಪನದ ಆಳವು ಮೇಲ್ಮೈಯಿಂದ 10 ಕಿಮೀ ಕೆಳಗೆ ದಾಖಲಾಗಿದೆ. ಭೂಕಂಪನದ ಹೊರತಾಗಿಯೂ, ಯಾವುದೇ ಹಾನಿಯ ಬಗ್ಗೆ ತಕ್ಷಣದ ವರದಿಗಳಿಲ್ಲ. ಶ್ರೀನಗರದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ, ಕಂಪನದ ನಂತರ ಆ ಪ್ರದೇಶದಲ್ಲಿ ಭೀತಿ ಆವರಿಸಿದೆ.

ಪ್ರಧಾನಿ ನರೇಂದ್ರ ಮೋದಿ ಜಮ್ಮು ಭೇಟಿಗೂ ಮುನ್ನ ಭೂಕಂಪ ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 20 ರಂದು ಜಮ್ಮುವಿಗೆ ಭೇಟಿ ನೀಡಲಿದ್ದು, ಹಲವಾರು ಯೋಜನೆಗಳ ಉದ್ಘಾಟನೆ ಮತ್ತು ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಬೆಳಗ್ಗೆ 11:30ರ ಸುಮಾರಿಗೆ ಜಮ್ಮುವಿನ ಮೌಲಾನಾ ಆಜಾದ್ ಸ್ಟೇಡಿಯಂನಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು 30,500 ಕೋಟಿ ರೂ.ಗಳ ಬಹುವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ದೇಶಕ್ಕೆ ಸಮರ್ಪಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಪಿಎಂಒ ಹೇಳಿಕೆ ತಿಳಿಸಿದೆ. ಯೋಜನೆಗಳು ಆರೋಗ್ಯ, ಶಿಕ್ಷಣ, ರೈಲು, ರಸ್ತೆ, ವಿಮಾನಯಾನ, ಪೆಟ್ರೋಲಿಯಂ, ನಾಗರಿಕ ಮೂಲಸೌಕರ್ಯ ಸೇರಿದಂತೆ ಹಲವಾರು ಕ್ಷೇತ್ರಗಳಿಗೆ ಸಂಬಂಧಿಸಿವೆ.

ಮತ್ತಷ್ಟು ಓದಿ: Jammu and Kashmir Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ 3.6 ತೀವ್ರತೆಯ ಭೂಕಂಪ

ಕಾರ್ಯಕ್ರಮದಲ್ಲಿ, ಜಮ್ಮು ಮತ್ತು ಕಾಶ್ಮೀರದ ಸುಮಾರು 1500 ಹೊಸ ಸರ್ಕಾರಿ ನೇಮಕಾತಿಗಳಿಗೆ ಪ್ರಧಾನಿ ಮೋದಿ ನೇಮಕಾತಿ ಆದೇಶಗಳನ್ನು ವಿತರಿಸಲಿದ್ದಾರೆ.

ದೇಶಾದ್ಯಂತ ಶಿಕ್ಷಣ ಮತ್ತು ಕೌಶಲ್ಯ ಮೂಲಸೌಕರ್ಯಗಳನ್ನು ಮೇಲ್ದರ್ಜೆಗೇರಿಸುವ ಮತ್ತು ಅಭಿವೃದ್ಧಿಪಡಿಸುವ ಮಹತ್ವದ ಹೆಜ್ಜೆಯಲ್ಲಿ, ಪ್ರಧಾನಿಯವರು ಸುಮಾರು 13,375 ಕೋಟಿ ರೂಪಾಯಿ ಮೌಲ್ಯದ ಹಲವಾರು ಯೋಜನೆಗಳ ಉದ್ಘಾಟನೆ, ದೇಶಕ್ಕೆ ಸಮರ್ಪಿಸಲಿದ್ದಾರೆ ಮತ್ತು ಅಡಿಪಾಯ ಹಾಕಲಿದ್ದಾರೆ.

ಜನವರಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 3.6 ತೀವ್ರತೆಯ ಭೂಕಂಪ ಸಂಭವಿಸಿತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ 3.6 ತೀವ್ರತೆಯ ಭೂಕಂಪ(Earthquake) ಸಂಭವಿಸಿದೆ. ಜಮ್ಮು ಕಾಶ್ಮೀರದ ಕಿಶ್ತ್ವಾರದಲ್ಲಿ ಬೆಳಗ್ಗೆ 8.43ರ ಸುಮಾರಿಗೆ ಕಂಪನ ಸಂಭವಿಸಿದೆ. ಈ ಭೂಕಂಪದಲ್ಲಿ ಇದುವರೆಗೆ ಯಾವುದೇ ಆಸ್ತಿಪಾಸ್ತಿ ನಷ್ಟವಾಗಿಲ್ಲ, ಆದರೆ, ಭೂಕಂಪನದಿಂದ ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿರುವುದು ಕಂಡು ಬಂದಿದೆ.

ಈ ಭೂಕಂಪದ ಆಳವನ್ನು 5 ಕಿಲೋಮೀಟರ್ ಎಂದು ಅಳೆಯಲಾಗಿದೆ. ಚೀನಾದ ಜಿಜಾಂಗ್ ಪ್ರಾಂತ್ಯದಲ್ಲೂ ಬೆಳಗ್ಗೆ ಏಳು ಗಂಟೆಗೆ ಭೂಕಂಪನದ ಅನುಭವವಾಗಿದೆ. ಆ ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 3.7 ಎಂದು ಅಳೆಯಲಾಗಿದೆ. ಸೋಮವಾರ ಸಂಜೆ ಅಸ್ಸಾಂನಲ್ಲಿ 3.6 ತೀವ್ರತೆಯ ಭೂಕಂಪನದ ಅನುಭವವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ