ಜಮ್ಮು ಮತ್ತು ಕಾಶ್ಮೀರ Jammu And Kashmir) ದಲ್ಲಿ ಕಳೆದ ವಾರದಿಂದ ಭಾರಿ ಮಳೆಯಾಗುತ್ತಿದೆ, ಭೂಕುಸಿತ, ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ನಡುವೆ ಭೂಕಂಪ(Earthquake) ಸಂಭವಿಸಿದ್ದು, ಜನರು ಭೀತಿಗೊಳಗಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ 4.9 ತೀವ್ರತೆಯ ಭೂಕಂಪ ಸಂಭವಿಸಿದೆ. ಬೆಳಗ್ಗೆ 5.38ಕ್ಕೆ ಭೂಕಂಪ ಸಂಭವಿಸಿದೆ. ಯಾವುದೇ ಹಾನಿಯ ಬಗ್ಗೆ ತಕ್ಷಣದ ವರದಿಗಳಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭೂಕಂಪದ ಕೇಂದ್ರ ಬಿಂದು ದೋಡಾ ಪ್ರದೇಶದಲ್ಲಿ ಭೂಮಿಯ ಮೇಲ್ಮೈಯಿಂದ 10 ಕಿ.ಮೀ. ಇದು ಅಕ್ಷಾಂಶ 33.15 ಡಿಗ್ರಿ ಉತ್ತರ ಮತ್ತು ರೇಖಾಂಶ 75.68 ಡಿಗ್ರಿ ಪೂರ್ವದಲ್ಲಿ ಸಂಭವಿಸಿದೆ ಎಂದು NCS ಹೇಳಿದೆ.
ಮತ್ತಷ್ಟು ಓದಿ: New Zealand Earthquake: ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನಲ್ಲಿ 6.1 ತೀವ್ರತೆಯ ಭೂಕಂಪ
ಈ ಜೂನ್ನಿಂದ ದೋಡಾದಲ್ಲಿ 12 ಭೂಕಂಪಗಳು ಸಂಭವಿಸಿವೆ. ಜೂನ್ 13 ರಂದು ಜಿಲ್ಲೆಯಲ್ಲಿ 5.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಮನೆಗಳು ಸೇರಿದಂತೆ ಹತ್ತಾರು ಕಟ್ಟಡಗಳು ಬಿರುಕು ಬಿಟ್ಟಿವೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ