J&K Elections: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ 3ನೇ ಹಂತದ ಮತದಾನ, 40 ಕ್ಷೇತ್ರಗಳು, 415 ಅಭ್ಯರ್ಥಿಗಳ ಸೆಣೆಸಾಟ
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮೂರನೇ ಮತ್ತು ಕೊನೆಯ ಹಂತದ ಮತದಾನ ಪ್ರಾರಂಭವಾಗಿದೆ. ಇದಕ್ಕೂ ಮುನ್ನ ಸೋಮವಾರ ಸಂಜೆ ಏಳು ಜಿಲ್ಲೆಗಳಲ್ಲಿ 20 ಸಾವಿರಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಈ ಹಂತದ ಚುನಾವಣೆಯಲ್ಲಿ ಇಬ್ಬರು ಮಾಜಿ ಉಪಮುಖ್ಯಮಂತ್ರಿಗಳಾದ ತಾರಾ ಚಂದ್ ಮತ್ತು ಮುಜಾಫರ್ ಬೇಗ್ ಸೇರಿದಂತೆ 415 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮೂರನೇ ಮತ್ತು ಕೊನೆಯ ಹಂತದ ಮತದಾನ ಪ್ರಾರಂಭವಾಗಿದೆ. ಇದಕ್ಕೂ ಮುನ್ನ ಸೋಮವಾರ ಸಂಜೆ ಏಳು ಜಿಲ್ಲೆಗಳಲ್ಲಿ 20 ಸಾವಿರಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಈ ಹಂತದ ಚುನಾವಣೆಯಲ್ಲಿ ಇಬ್ಬರು ಮಾಜಿ ಉಪಮುಖ್ಯಮಂತ್ರಿಗಳಾದ ತಾರಾ ಚಂದ್ ಮತ್ತು ಮುಜಾಫರ್ ಬೇಗ್ ಸೇರಿದಂತೆ 415 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಪರಿಸರ ಕಾಳಜಿ ಕುರಿತು ಸಂದೇಶ ಸಾರಲು 45 ಹಸಿರು ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 33 ವಿಶಿಷ್ಟ ಮತಗಟ್ಟೆಗಳಿರುತ್ತವೆ. ಮುಖ್ಯ ಚುನಾವಣಾಧಿಕಾರಿ (ಸಿಇಒ) ಪಾಂಡುರಂಗ ಕೆ. ಮಾತನಾಡಿ, ಗಡಿ ಪ್ರದೇಶಗಳ ನಿವಾಸಿಗಳಿಗಾಗಿ ಗಡಿ ನಿಯಂತ್ರಣ ರೇಖೆ ಅಥವಾ ಅಂತರರಾಷ್ಟ್ರೀಯ ಗಡಿ ಬಳಿ 29 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ, ಎಲ್ಲ ಮತಗಟ್ಟೆಗಳ ಆವರಣದಲ್ಲಿ 1.07 ಲಕ್ಷಕ್ಕೂ ಹೆಚ್ಚು ಸಸಿಗಳನ್ನು ನೆಡಲಾಗಿದೆ ಎಂದರು.
20,09,033 ಪುರುಷ ಮತದಾರರು, 19,09,130 ಮಹಿಳಾ ಮತದಾರರು ಮತ್ತು 57 ತೃತೀಯಲಿಂಗಿ ಮತದಾರರು ಸೇರಿದಂತೆ ಒಟ್ಟು 39,18,220 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ.
ಈ ಹಂತದಲ್ಲಿ 18 ರಿಂದ 19 ವರ್ಷದೊಳಗಿನ 1.94 ಲಕ್ಷ ಯುವಕರು, 35,860 ಅಂಗವಿಕಲ ಮತದಾರರು ಮತ್ತು 85 ವರ್ಷಕ್ಕಿಂತ ಮೇಲ್ಪಟ್ಟ 32,953 ವೃದ್ಧ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಬೆಳಗ್ಗೆ 7 ಗಂಟೆಗೆ ಆರಂಭವಾಗಿರುವ ಮತದಾನ ಸಂಜೆ 6ರವರೆಗೆ ನಡೆಯಲಿದೆ.
ಮತ್ತಷ್ಟು ಓದಿ: ಜಮ್ಮು ಕಾಶ್ಮೀರದಲ್ಲಿ ಬಿಜೆಪಿಗೆ ಪೂರ್ಣ ಬಹುಮತ ಖಚಿತ; ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ಮೋದಿ ವಿಶ್ವಾಸ
ಜಮ್ಮು ಮತ್ತು ಕಾಶ್ಮೀರದಲ್ಲಿ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಮತದಾರರಲ್ಲಿ ಮನವಿ ಮಾಡಿದರು. ಇಂದು ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಮೂರನೇ ಮತ್ತು ಕೊನೆಯ ಸುತ್ತಿನ ಮತದಾನವಾಗಿದೆ. ಪ್ರಜಾಪ್ರಭುತ್ವದ ಹಬ್ಬವನ್ನು ಯಶಸ್ವಿಗೊಳಿಸಲು ಎಲ್ಲಾ ಮತದಾರರು ಮುಂದೆ ಬಂದು ಮತ ಚಲಾಯಿಸುವಂತೆ ನಾನು ವಿನಂತಿಸುತ್ತೇನೆ ಎಂದು ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ.
जम्मू-कश्मीर विधानसभा चुनाव में आज तीसरे और आखिरी दौर का मतदान है। सभी मतदाताओं से मेरा अनुरोध है कि वे लोकतंत्र के उत्सव को सफल बनाने के लिए आगे आएं और अपना वोट जरूर डालें। मुझे विश्वास है कि पहली बार वोट देने जा रहे युवा साथियों के अलावा नारीशक्ति की मतदान में बढ़-चढ़कर…
— Narendra Modi (@narendramodi) October 1, 2024
ಸೆ.18ರಂದು ನಡೆದ ಮೊದಲ ಹಂತದಲ್ಲಿ ಶೇ.61.38ರಷ್ಟು ಮತದಾನ ನಡೆದಿದ್ದರೆ, ಸೆ.26ರಂದು ನಡೆದ ಎರಡನೇ ಹಂತದಲ್ಲಿ ಶೇ.57.31ರಷ್ಟು ಮತದಾನವಾಗಿತ್ತು. 2019 ರ ಆಗಸ್ಟ್‌ನಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಇಲ್ಲಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಗಳು ನಡೆಯುತ್ತಿದ್ದು, ಅದರ ಫಲಿತಾಂಶಗಳನ್ನು ಅಕ್ಟೋಬರ್ 8 ರಂದು ಪ್ರಕಟಿಸಲಾಗುವುದು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ