J-K Election 2024 Phase 2: ಇಂದು ಜಮ್ಮು ಕಾಶ್ಮೀರ ವಿಧಾನಸಭೆಯ ಎರಡನೇ ಹಂತದ ಮತದಾನ

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಎರಡನೇ ಹಂತದ ಮತದಾನ ಆರಂಭವಾಗಿದೆ. ಇಂದು 26 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಈ ಹಂತದಲ್ಲಿ ಕಾಶ್ಮೀರದ 15 ಸ್ಥಾನಗಳು ಮತ್ತು ಜಮ್ಮುವಿನ 11 ಸ್ಥಾನಗಳು ಸೇರಿವೆ. ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಮತ್ತು ಮಾಜಿ ಸಿಎಂ ಒಮರ್ ಅಬ್ದುಲ್ಲಾ, ಬಿಜೆಪಿ ಜಮ್ಮು ಮತ್ತು ಕಾಶ್ಮೀರ ಮುಖ್ಯಸ್ಥ ರವೀಂದರ್ ರೈನಾ ಅವರಂತಹ ಹೈ-ಪ್ರೊಫೈಲ್ ಮುಖಗಳ ಭವಿಷ್ಯವನ್ನು ಇಂದು ಮತದಾರರು ನಿರ್ಧರಿಸಲಿದ್ದಾರೆ.

J-K Election 2024 Phase 2: ಇಂದು ಜಮ್ಮು ಕಾಶ್ಮೀರ ವಿಧಾನಸಭೆಯ ಎರಡನೇ ಹಂತದ ಮತದಾನ
ಮತದಾನ
Follow us
ನಯನಾ ರಾಜೀವ್
|

Updated on: Sep 25, 2024 | 9:12 AM

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ.ಈ ಹಂತದಲ್ಲಿ 6 ಜಿಲ್ಲೆಗಳ 26 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ಈ ಪೈಕಿ 3 ಜಿಲ್ಲೆಗಳು ಜಮ್ಮು ವಿಭಾಗದಲ್ಲಿ ಮತ್ತು 3 ಜಿಲ್ಲೆಗಳು ಕಣಿವೆಯಲ್ಲಿವೆ. ಈ ಹಂತದ ಪ್ರಮುಖ ಅಭ್ಯರ್ಥಿಗಳಲ್ಲಿ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಜೆಕೆಪಿಸಿಸಿ ಅಧ್ಯಕ್ಷ ತಾರಿಕ್

ಹಮೀದ್ ಕರ್ರಾ ಮತ್ತು ಬಿಜೆಪಿ ಜಮ್ಮು ಮತ್ತು ಕಾಶ್ಮೀರ ಮುಖ್ಯಸ್ಥ ರವೀಂದ್ರ ರೈನಾ ಸೇರಿದ್ದಾರೆ. ಎರಡನೇ ಹಂತದ ಚುನಾವಣೆಯಲ್ಲಿ ಸುಮಾರು 25 ಲಕ್ಷ ಮತದಾರರು 239 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಚುನಾವಣಾ ಆಯೋಗವು ಮತದಾರರ ಅನುಕೂಲಕ್ಕಾಗಿ 3,502 ಮತಗಟ್ಟೆಗಳನ್ನು ಸ್ಥಾಪಿಸಿದ್ದು, ಇವುಗಳಲ್ಲಿ 1,056 ನಗರ ಮತ್ತು 2,446 ಗ್ರಾಮೀಣ ಪ್ರದೇಶದಲ್ಲಿವೆ.

ಜಮ್ಮು ಮತ್ತು ಕಾಶ್ಮೀರದ ಮತದಾರರಿಗೆ ಮತದಾನ ಮಾಡುವಂತೆ ಪ್ರಧಾನಿ ಮೋದಿ ಮನವಿ ಮಾಡಿದರು. ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಗೆ ಎರಡನೇ ಸುತ್ತಿನ ಮತದಾನ ಶುರುವಾಗಿದೆ.

ಮತ್ತಷ್ಟು ಓದಿ: Jammu and Kashmir Election 2024 Phase 1 Voting: ಇಂದು ಜಮ್ಮು ಮತ್ತು ಕಾಶ್ಮೀರ ಚುನಾವಣೆಯ ಮೊದಲ ಹಂತದ ಮತದಾನ

ಎಲ್ಲಾ ಮತದಾರರು ತಮ್ಮ ಮತ ಚಲಾಯಿಸಿ ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುವಂತೆ ನಾನು ಮನವಿ ಮಾಡುತ್ತೇನೆ. ಈ ಸಂದರ್ಭದಲ್ಲಿ, ಮೊದಲ ಬಾರಿಗೆ ಮತ ಚಲಾಯಿಸಲು ಹೊರಟಿರುವ ಎಲ್ಲಾ ಯುವ ಸ್ನೇಹಿತರಿಗೆ ನನ್ನ ಅಭಿನಂದನೆಗಳು ಎಂದು ಬರೆದಿದ್ದಾರೆ.

ಚುನಾವಣಾ ಆಯೋಗವು ಮತದಾರರ ಅನುಕೂಲಕ್ಕಾಗಿ 3,502 ಮತಗಟ್ಟೆಗಳನ್ನು ಸ್ಥಾಪಿಸಿದ್ದು, ಇವುಗಳಲ್ಲಿ 1,056 ನಗರ ಮತ್ತು 2,446 ಗ್ರಾಮೀಣ ಪ್ರದೇಶದಲ್ಲಿವೆ. ಎರಡನೇ ಹಂತದ ಚುನಾವಣೆಯಲ್ಲಿ ಸುಮಾರು 25 ಲಕ್ಷ ಮತದಾರರು 239 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.

ಮೊದಲ ಹಂತದಲ್ಲಿ ಶೇ.61.38ರಷ್ಟು ಮತದಾನವಾಗಿದೆ. ಮೂರನೇ ಹಂತ ಅಕ್ಟೋಬರ್ 1 ರಂದು ನಡೆಯಲಿದ್ದು, ಅಕ್ಟೋಬರ್ 8 ರಂದು ಮತ ಎಣಿಕೆ ನಡೆಯಲಿದೆ. ಈ ಬಾರಿ ಶ್ರೀನಗರ ಜಿಲ್ಲೆಯಲ್ಲಿ 93, ಬುದ್ಗಾಮ್ ಜಿಲ್ಲೆಯಲ್ಲಿ 46, ರಾಜೌರಿ ಜಿಲ್ಲೆಯಲ್ಲಿ 34, ಪೂಂಚ್ ಜಿಲ್ಲೆಯಲ್ಲಿ 25, ಗಂದರ್‌ಬಾಲ್ ಜಿಲ್ಲೆಯಲ್ಲಿ 21 ಮತ್ತು ರಿಯಾಸಿ ಜಿಲ್ಲೆಯಲ್ಲಿ 20 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇಂದು ಜಮ್ಮು ಮತ್ತು ಕಾಶ್ಮೀರದ 24 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.

ಇವುಗಳಲ್ಲಿ ಕಂಗನ್, ಗಂದರ್ಬಲ್, ಹಜರತ್ಬಾಲ್, ಖನ್ಯಾರ್, ಹಬ್ಬಕದಲ್, ಲಾಲ್ ಚೌಕ್, ಚನ್ನಪೋರಾ, ಜಡಿಬಲ್, ಈದ್ಗಾ, ಸೆಂಟ್ರಲ್ ಶಾಲ್ತೆಂಗ್, ಬುಡ್ಗಾಮ್, ಬೀರ್ವಾ, ಖಾನ್ಸಾಹಿಬ್, ಚರಾರ್-ಎ-ಷರೀಫ್, ಚದೂರ, ಗುಲಾಬ್ಗಢ್, ರಿಯಾಸಿ, ಶ್ರೀ ಮಾತಾ ವೈಷ್ಣೋದೇವಿ, ಕಲಾಕೋಟ್-ಎಸ್. , ನೌಶೇರಾ, ರಾಜೌರಿ, ಬುಧಾಲ್, ತನ್ನಮಂಡಿ, ಸುರನ್‌ಕೋಟೆ, ಪೂಂಚ್ ಹವೇಲಿ ಮತ್ತು ಮೆಂಧರ್ ಇದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?