Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜೌರಿ ಎನ್​ಕೌಂಟರ್​: ಸೈನಿಕರನ್ನು ರಕ್ಷಿಸಲು ಹೋಗಿ ಉಗ್ರರ ಗುಂಡೇಟಿಗೆ ಬಲಿಯಾದ ಶ್ವಾನ ಕೆಂಟ್

ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಭಾರತೀಯ ಸೇನೆಯ ಶ್ವಾನ ಮೃತಪಟ್ಟಿದೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಯೋಧನನ್ನು ರಕ್ಷಿಸುವ ವೇಳೆ ಕೆಂಟ್ ಎಂಬ ಆರು ವರ್ಷದ ಭಾರತೀಯ ಸೇನೆಯ ಶ್ವಾನ ಸಾವನ್ನಪ್ಪಿದೆ. ಸೈನಿಕರೊಂದಿಗೆ ತೆರಳುತ್ತಿದ್ದ ಶ್ವಾನ ಭಾರಿ ಗುಂಡಿನ ದಾಳಿಯ ನಡುವೆ ಸಿಕ್ಕಿಬಿದ್ದಿತ್ತು. ನಾರ್ಲಾ ಗ್ರಾಮದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದೆ.

ಸೇನಾ ಶ್ವಾನ ಕೆಂಟ್
Follow us
ನಯನಾ ರಾಜೀವ್
|

Updated on: Sep 13, 2023 | 8:50 AM

ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಭಾರತೀಯ ಸೇನೆಯ ಶ್ವಾನ ಮೃತಪಟ್ಟಿದೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಯೋಧನನ್ನು ರಕ್ಷಿಸುವ ವೇಳೆ ಕೆಂಟ್ ಎಂಬ ಆರು ವರ್ಷದ ಭಾರತೀಯ ಸೇನೆಯ ಶ್ವಾನ ಸಾವನ್ನಪ್ಪಿದೆ. ಸೈನಿಕರೊಂದಿಗೆ ತೆರಳುತ್ತಿದ್ದ ಶ್ವಾನ ಭಾರಿ ಗುಂಡಿನ ದಾಳಿಯ ನಡುವೆ ಸಿಕ್ಕಿಬಿದ್ದಿತ್ತು. ನಾರ್ಲಾ ಗ್ರಾಮದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದೆ.

ಕೆಂಟ್ 21 ನೇ ಆರ್ಮಿ ಡಾಗ್ ಯುನಿಟ್‌ನ ಹೆಣ್ಣು ಲ್ಯಾಬ್ರಡಾರ್ ತಳಿಯ ನಾಯಿಯಾಗಿದ್ದು, ತನ್ನ ಹ್ಯಾಂಡ್ಲರ್ ಅನ್ನು ಉಳಿಸಲು ತನ್ನ ಪ್ರಾಣವನ್ನು ತ್ಯಾಗ ಮಾಡಿದೆ. ಕೆಂಟ್ ಕೊನೆಯುಸಿರೆಳೆಯುವ ಮುನ್ನ ಉಗ್ರರ ಜಾಡು ಹಿಡಿದು ಸೈನಿಕರನ್ನು ಅತ್ತ ಕರೆದೊಯ್ಯುತ್ತಿತ್ತು.

ಸೇನಾ ಶ್ವಾನ ಕೆಂಟ್ ಆಪರೇಷನ್ ಸುಜಲಿಗಾಲದಲ್ಲಿ ಮುಂಚೂಣಿಯಲ್ಲಿತ್ತು, ಏತನ್ಮಧ್ಯೆ, ರಜೌರಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಶಂಕಿತ ಪಾಕಿಸ್ತಾನಿ ಭಯೋತ್ಪಾದಕ ಸಾವನ್ನಪ್ಪಿದ್ದು ಓರ್ವ ಯೋಧ ಹುತಾತ್ಮರಾಗಿದ್ದಾರೆ. ಗುಂಡಿನ ಚಕಮಕಿಯಲ್ಲಿ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ಮತ್ತಷ್ಟು ಓದಿ: ಗುಂಡೇಟು ಬಿದ್ದರೂ ಉಗ್ರರ ಜೊತೆ ಕಾದಾಡಿದ ಭಾರತೀಯ ಸೇನೆಯ ಶ್ವಾನ; ವೈರಲ್ ವಿಡಿಯೋ ಇಲ್ಲಿದೆ

ನಾರ್ಲಾ ಗ್ರಾಮದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ

ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ

ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ

ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ

ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?

ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ

ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ