ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಶುಕ್ರವಾರ ಬೆಳಗಿನ ಜಾವ ಉಗ್ರರು ಮತ್ತು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಐವರು ಉಗ್ರರನ್ನು ಹತ್ಯೆಗೈಯಲಾಗಿದೆ. ಎಲ್‌ಒಸಿ ಬಳಿಯ ಜುಮಗುಂಡ್ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಭದ್ರತಾ ಪಡೆಗಳು ನಿರ್ದಿಷ್ಟ ಮಾಹಿತಿ ಪಡೆದ ನಂತರ ಪೊಲೀಸರು ಹಾಗೂ ಸೈನಿಕರು ಉಗ್ರರ ಮೇಲೆ ಜಂಟಿ ಕಾರ್ಯಾಚರಣೆ ನಡೆಸಿ ಗುಂಡಿನ ಸುರಿಮಳೆ ಗೈದಿದ್ದಾರೆ. ಕುಪ್ವಾರಾ ಜಿಲ್ಲೆಯ ಎಲ್‌ಒಸಿಯ ಜುಮಗುಂಡ್ ಪ್ರದೇಶದಲ್ಲಿ ಕುಪ್ವಾರಾ ಪೊಲೀಸರ ನಿರ್ದಿಷ್ಟ ಪ್ರದೇಶದ ಮೇಲೆ ಭಯೋತ್ಪಾದಕರು ಮತ್ತು ಸೇನೆ ಮತ್ತು ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ.
ಜೂನ್ 13 ರಂದು ಕುಪ್ವಾರದ ಎಲ್‌ಒಸಿ ಬಳಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಕಾಶ್ಮೀರ ವಲಯ ಪೊಲೀಸರು ಈ ಸುದ್ದಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ದೋಬನಾರ್ ಮಚ್ಚಲ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಪ್ವಾರಾ ಜಿಲ್ಲೆಯ ದೋಬನಾರ್ ಮಚ್ಚಲ್ ಪ್ರದೇಶದಲ್ಲಿ (ಎಲ್‌ಒಸಿ) ಸೇನೆ ಮತ್ತು ಕುಪ್ವಾರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ತಟಸ್ಥಗೊಳಿಸಲಾಗಿದೆ. ಶೋಧ ಇನ್ನೂ ಮುಂದುವರೆದಿದೆ ಎಂದು ಟ್ವೀಟ್ ಮಾಡಿದೆ.
ಮತ್ತಷ್ಟು ಓದಿ: ಜಮ್ಮು ಕಾಶ್ಮೀರದ ಪೂಂಚ್ನಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ: 5 ಯೋಧರು ಹುತಾತ್ಮ, ಒಬ್ಬರಿಗೆ ಗಂಭೀರ ಗಾಯ
ಈ ತಿಂಗಳ ಆರಂಭದಲ್ಲಿ, ಜೂನ್ 2 ರಂದು, ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕನನ್ನು ಕೊಲ್ಲಲಾಯಿತು.
ರಜೌರಿ ಬಳಿಯ ದಸ್ಸಾಲ್ ಗುಜ್ರಾನ್ ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದ ಚಲನವಲನವನ್ನು ಗಮನಿಸಿದ ನಂತರ ಸೇನೆ ಮತ್ತು ಪೊಲೀಸರು ಜಂಟಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭಯೋತ್ಪಾದಕರು ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ ನಂತರ ಶೋಧ ಕಾರ್ಯಾಚರಣೆಯು ಎನ್‌ಕೌಂಟರ್‌ಗೆ ತಿರುಗಿತು ಎಂದು ಅವರು ಹೇಳಿದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:56 am, Fri, 16 June 23