Encounter: ಜಮ್ಮು ಮತ್ತು ಕಾಶ್ಮೀರದ ಗುಲ್ಗಾಮ್​ನಲ್ಲಿ ಎನ್​ಕೌಂಟರ್​, ಓರ್ವ ಉಗ್ರನ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾವ್​ನಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಕುಲ್ಗಾಮ್, ಬಂಡಿಪೋರಾ, ಶೋಪಿಯಾನ್ ಮತ್ತು ಪುಲ್ವಾಮಾದ ನಾಲ್ಕು ಜಿಲ್ಲೆಗಳ ಹನ್ನೆರಡು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ.

Encounter: ಜಮ್ಮು ಮತ್ತು ಕಾಶ್ಮೀರದ ಗುಲ್ಗಾಮ್​ನಲ್ಲಿ ಎನ್​ಕೌಂಟರ್​, ಓರ್ವ ಉಗ್ರನ ಹತ್ಯೆ
ಜಮ್ಮು ಮತ್ತು ಕಾಶ್ಮೀರ ಎನ್​ಕೌಂಟರ್
Follow us
ನಯನಾ ರಾಜೀವ್
|

Updated on: Jun 27, 2023 | 8:26 AM

ಜಮ್ಮು ಮತ್ತು ಕಾಶ್ಮೀರ(Jammu And Kashmir)ದ ಕುಲ್ಗಾವ್​ನಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಓರ್ವ ಉಗ್ರ(Terrorist)ನನ್ನು ಹತ್ಯೆ ಮಾಡಲಾಗಿದೆ. ಕುಲ್ಗಾಮ್, ಬಂಡಿಪೋರಾ, ಶೋಪಿಯಾನ್ ಮತ್ತು ಪುಲ್ವಾಮಾದ ನಾಲ್ಕು ಜಿಲ್ಲೆಗಳ ಹನ್ನೆರಡು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಕಾರ್ಯಾಚರಣೆಯಲ್ಲಿ ಒಬ್ಬ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು. ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಸೇರಿದಂತೆ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾಹಿತಿಯ ಪ್ರಕಾರ, ಈ ಎನ್‌ಕೌಂಟರ್‌ನಲ್ಲಿ ಹತನಾದ ಭಯೋತ್ಪಾದಕ ಗಡಿಯಾಚೆಯಿಂದ ಬಂದವನಲ್ಲ, ಸ್ಥಳೀಯನಾಗಿದ್ದನು ಎನ್ನುವ ಮಾಹಿತಿ ಲಭ್ಯವಾಗಿದೆ.

ಮತ್ತಷ್ಟು ಓದಿ: Uttar Pradesh: ಎನ್​ಕೌಂಟರ್​ನಲ್ಲಿ ಮೋಸ್ಟ್​ ವಾಂಟೆಡ್ ಕ್ರಿಮಿನಲ್​ ಗುಫ್ರಾನ್​ ಹತ್ಯೆ

ಇವರನ್ನು ಆದಿಲ್ ಅಹ್ಮದ್ ಲೋನ್ ಎಂದು ಗುರುತಿಸಲಾಗಿದೆ. ಬಹಿರಂಗವಾದ ಮಾಹಿತಿಯ ಪ್ರಕಾರ, ಹತ್ಯೆಗೀಡಾದ ಭಯೋತ್ಪಾದಕ ಆದಿಲ್ ಇತ್ತೀಚೆಗೆ ಅಲ್ ಬದ್ರ್ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಸ್ಥಳದಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ಹಲವು ಆಕ್ಷೇಪಾರ್ಹ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಹೌರಾ ಗ್ರಾಮದ ಮನೆಯೊಂದರಲ್ಲಿ ಭಯೋತ್ಪಾದಕ ಅಡಗಿಕೊಂಡಿದ್ದ. ಈ ಬಗ್ಗೆ ಭದ್ರತಾ ಪಡೆಗಳು ಮತ್ತು ಪೊಲೀಸರು ಮಾಹಿತಿ ಪಡೆದಿದ್ದರು. ನಂತರ ತಕ್ಷಣವೇ ಉಗ್ರರನ್ನು ಸುತ್ತುವರಿಯಲು ಕಾರ್ಯಾಚರಣೆ ನಡೆಸಲಾಯಿತು. ಪ್ರಸ್ತುತ, ಪೊಲೀಸರು ಮತ್ತು ಭದ್ರತಾ ಪಡೆಗಳ ಕಾರ್ಯಾಚರಣೆ ನಡೆಯುತ್ತಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ತನಿಖೆ ನಡೆಸಲಾಗುತ್ತಿದೆ. ಭಯೋತ್ಪಾದಕ ಅಡಗಿರುವ ಬಗ್ಗೆ ಮಾಹಿತಿ ಬಂದ ತಕ್ಷಣ ಜಂಟಿ ಕಾರ್ಯಾಚರಣೆ ನಡೆಸಲು ತೀರ್ಮಾನಿಸಲಾಗಿತ್ತು ಎಂದು ಹೇಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್