Terrorists Encounter: ಜಮ್ಮು ಕಾಶ್ಮೀರದ ಶೋಪಿಯಾನ್​ನಲ್ಲಿ ಎನ್​ಕೌಂಟರ್; ಇಬ್ಬರು ಎಲ್​ಇಟಿ ಉಗ್ರರ ಹತ್ಯೆ

ದಕ್ಷಿಣ ಕಾಶ್ಮೀರದ ಶೋಪಿಯಾನ್‌ನ ಅಮ್ಶಿಪೋರಾದಲ್ಲಿ ಉಗ್ರರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಭಾರತೀಯ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಬಳಿಕ ಉಗ್ರರು ಎನ್​ಕೌಂಟರ್ ನಡೆಸಿದ್ದಾರೆ.

Terrorists Encounter: ಜಮ್ಮು ಕಾಶ್ಮೀರದ ಶೋಪಿಯಾನ್​ನಲ್ಲಿ ಎನ್​ಕೌಂಟರ್; ಇಬ್ಬರು ಎಲ್​ಇಟಿ ಉಗ್ರರ ಹತ್ಯೆ
ಶೋಪಿಯಾನ್​ನಲ್ಲಿ ಭದ್ರತಾ ಪಡೆಯ ಕಾರ್ಯಾಚರಣೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Feb 25, 2022 | 1:30 PM

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ (Shopian) ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳು (Security Forces) ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಎಲ್​ಇಟಿ (LeT) ಉಗ್ರರನ್ನು ಹೊಡೆದುರುಳಿಸಲಾಗಿದೆ. ಇಂದು ಮುಂಜಾನೆ ನಡೆದ ಎನ್​ಕೌಂಟರ್​​ನಲ್ಲಿ 2 ಭಯೋತ್ಪಾದಕರು ಕೊಲ್ಲಲ್ಪಟ್ಟಿದ್ದಾರೆ. ಈ ಎನ್​ಕೌಂಟರ್ ಬಳಿಕ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ಹಲವು ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಳಿದ ಉಗ್ರರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ಮಾಹಿತಿ ನೀಡಿದ್ದಾರೆ.

ದಕ್ಷಿಣ ಕಾಶ್ಮೀರದ ಶೋಪಿಯಾನ್‌ನ ಅಮ್ಶಿಪೋರಾ ಪ್ರದೇಶದಲ್ಲಿ ಉಗ್ರರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಭಾರತೀಯ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶೋಪಿಯಾನ್‌ನ ಅಂಶಿಪೋರಾ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಎನ್​ಕೌಂಟರ್ ಕಾರ್ಯಾಚರಣೆಯನ್ನು ಮುಂದುವರೆಸಿವೆ ಎಂದು ಕಾಶ್ಮೀರ ವಲಯ ಪೊಲೀಸರು ಮಾಹಿತಿ ನೀಡಿದ್ದಾರೆ.

ಭದ್ರತಾ ಪಡೆಗಳ ಮೇಲೆ ಲಷ್ಕರ್-ಇ-ತೊಯ್ಬಾ ಉಗ್ರರು ಗುಂಡು ಹಾರಿಸಿದ ನಂತರ ಭಯೋತ್ಪಾದಕರ ಮೇಲೆ ಎನ್‌ಕೌಂಟರ್‌ ನಡೆಸಲಾಯಿತು. ಇನ್ನೂ ಗುಂಡಿನ ಚಕಮಕಿ ನಡೆಯುತ್ತಿದ್ದು, ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದು ಈ ವರ್ಷದ 16ನೇ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಾಗಿದ್ದು, ಈಗಾಗಲೇ ಉಗ್ರ ಸಂಘಟನೆಯ ಮೂವರು ಉನ್ನತ ಕಮಾಂಡರ್‌ಗಳು ಮತ್ತು 8 ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ 27 ಭಯೋತ್ಪಾದಕರನ್ನು ಹತ್ಯೆ ಮಾಡುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ. ಇದಲ್ಲದೆ, ಭದ್ರತಾ ಪಡೆಗಳು ಈ ವರ್ಷ 23 ಭಯೋತ್ಪಾದಕ ಸಹಚರರೊಂದಿಗೆ 14 ಸಕ್ರಿಯ ಭಯೋತ್ಪಾದಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಶೋಪಿಯಾನ್​ನಲ್ಲಿ ಎನ್​ಕೌಂಟರ್​​; ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದ ಭದ್ರತಾ ಪಡೆ

ಶೋಪಿಯಾನ್​​ನಲ್ಲಿ ಮುಂದುವರಿದ ಉಗ್ರರ ವಿರುದ್ಧ ಕಾರ್ಯಾಚರಣೆ; ಒಬ್ಬ ಭಯೋತ್ಪಾದಕನ ಹತ್ಯೆ ಮಾಡಿದ ಭದ್ರತಾ ಪಡೆ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್