ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ (Shopian) ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳು (Security Forces) ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಎಲ್ಇಟಿ (LeT) ಉಗ್ರರನ್ನು ಹೊಡೆದುರುಳಿಸಲಾಗಿದೆ. ಇಂದು ಮುಂಜಾನೆ ನಡೆದ ಎನ್‌ಕೌಂಟರ್‌ನಲ್ಲಿ 2 ಭಯೋತ್ಪಾದಕರು ಕೊಲ್ಲಲ್ಪಟ್ಟಿದ್ದಾರೆ. ಈ ಎನ್‌ಕೌಂಟರ್ ಬಳಿಕ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ಹಲವು ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಳಿದ ಉಗ್ರರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ಮಾಹಿತಿ ನೀಡಿದ್ದಾರೆ.
ದಕ್ಷಿಣ ಕಾಶ್ಮೀರದ ಶೋಪಿಯಾನ್‌ನ ಅಮ್ಶಿಪೋರಾ ಪ್ರದೇಶದಲ್ಲಿ ಉಗ್ರರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಭಾರತೀಯ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶೋಪಿಯಾನ್‌ನ ಅಂಶಿಪೋರಾ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಎನ್‌ಕೌಂಟರ್ ಕಾರ್ಯಾಚರಣೆಯನ್ನು ಮುಂದುವರೆಸಿವೆ ಎಂದು ಕಾಶ್ಮೀರ ವಲಯ ಪೊಲೀಸರು ಮಾಹಿತಿ ನೀಡಿದ್ದಾರೆ.
ಭದ್ರತಾ ಪಡೆಗಳ ಮೇಲೆ ಲಷ್ಕರ್-ಇ-ತೊಯ್ಬಾ ಉಗ್ರರು ಗುಂಡು ಹಾರಿಸಿದ ನಂತರ ಭಯೋತ್ಪಾದಕರ ಮೇಲೆ ಎನ್‌ಕೌಂಟರ್ ನಡೆಸಲಾಯಿತು. ಇನ್ನೂ ಗುಂಡಿನ ಚಕಮಕಿ ನಡೆಯುತ್ತಿದ್ದು, ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಇದು ಈ ವರ್ಷದ 16ನೇ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಾಗಿದ್ದು, ಈಗಾಗಲೇ ಉಗ್ರ ಸಂಘಟನೆಯ ಮೂವರು ಉನ್ನತ ಕಮಾಂಡರ್‌ಗಳು ಮತ್ತು 8 ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ 27 ಭಯೋತ್ಪಾದಕರನ್ನು ಹತ್ಯೆ ಮಾಡುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ. ಇದಲ್ಲದೆ, ಭದ್ರತಾ ಪಡೆಗಳು ಈ ವರ್ಷ 23 ಭಯೋತ್ಪಾದಕ ಸಹಚರರೊಂದಿಗೆ 14 ಸಕ್ರಿಯ ಭಯೋತ್ಪಾದಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: ಶೋಪಿಯಾನ್ನಲ್ಲಿ ಎನ್‌ಕೌಂಟರ್; ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದ ಭದ್ರತಾ ಪಡೆ
ಶೋಪಿಯಾನ್ನಲ್ಲಿ ಮುಂದುವರಿದ ಉಗ್ರರ ವಿರುದ್ಧ ಕಾರ್ಯಾಚರಣೆ; ಒಬ್ಬ ಭಯೋತ್ಪಾದಕನ ಹತ್ಯೆ ಮಾಡಿದ ಭದ್ರತಾ ಪಡೆ