ಜಮ್ಮು-ಕಾಶ್ಮೀರದಲ್ಲಿ ಉಗ್ರರಿಗೆ ಸಹಕರಿಸಿ ಬಂಧಿತರಾಗಿದ್ದ 26 ಜನರನ್ನು ಆಗ್ರಾ ಜೈಲಿಗೆ ಕಳುಹಿಸಲು ಸಿದ್ಧತೆ

Jammu and Kashmir ಭಯೋತ್ಪಾದಕರಿಗೆ ನೆರವು ನೀಡಿ ಜೈಲಿನಲ್ಲಿರುವ ವ್ಯಕ್ತಿಗಳನ್ನು ಜಮ್ಮು ಮತ್ತು ಕಾಶ್ಮೀರದ ವಿವಿಧ ಜೈಲುಗಳಿಂದ ಉತ್ತರ ಪ್ರದೇಶದ ಆಗ್ರಾದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಬೇಕಾಗಿದೆ" ಎಂದು ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಉಗ್ರರಿಗೆ ಸಹಕರಿಸಿ ಬಂಧಿತರಾಗಿದ್ದ 26 ಜನರನ್ನು ಆಗ್ರಾ ಜೈಲಿಗೆ ಕಳುಹಿಸಲು ಸಿದ್ಧತೆ
ಪ್ರಾತಿನಿಧಿಕ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಉಗ್ರರಿಗೆ ಸಹಕರಿಸಿದ ಆರೋಪದಲ್ಲಿ ಜೈಲಿನಲ್ಲಿರುವ 26 ಮಂದಿಯನ್ನು ಕೇಂದ್ರಾಡಳಿತ ಪ್ರದೇಶದ ಹೊರಗಿನ ಜೈಲುಗಳಿಗೆ ವರ್ಗಾಯಿಸಲು ಆದೇಶಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಈ ಕೈದಿಗಳಲ್ಲಿ ಹೆಚ್ಚಿನವರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಬಂಧನಕ್ಕೊಳಗಾದವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.  “ಭಯೋತ್ಪಾದಕರಿಗೆ ನೆರವು ನೀಡಿ ಜೈಲಿನಲ್ಲಿರುವ ವ್ಯಕ್ತಿಗಳನ್ನು ಜಮ್ಮು ಮತ್ತು ಕಾಶ್ಮೀರದ ವಿವಿಧ ಜೈಲುಗಳಿಂದ ಉತ್ತರ ಪ್ರದೇಶದ ಆಗ್ರಾದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಬೇಕಾಗಿದೆ” ಎಂದು ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದು ಮುಂದಿನ ದಿನಗಳಲ್ಲಿ ಹೆಚ್ಚಿನ ಜನರನ್ನು ಕೇಂದ್ರಾಡಳಿತ ಪ್ರದೇಶದ ಹೊರಗಿನ ಜೈಲುಗಳಿಗೆ ಸ್ಥಳಾಂತರಿಸಬಹುದು ಎಂದು ಹೇಳಿದರು.

ಬಂಧಿತರನ್ನು ಭಯೋತ್ಪಾದನೆ ಕೃತ್ಯ ತೊಡಗಿಕೊಳ್ಳುವಿಕೆಯ ಆಧಾರದ ಮೇಲೆ ಪೊಲೀಸರು ವರ್ಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ. ಉದ್ದೇಶಿತ ದಾಳಿಗಳಲ್ಲಿ ನಾಗರಿಕ ಹತ್ಯೆಗಳ ಸರಣಿಯ ನಂತರ, ಪೊಲೀಸರು 500 ಕ್ಕೂ ಹೆಚ್ಚು ಜನರನ್ನು ವಶಕ್ಕೆ ತೆಗೆದುಕೊಂಡರು. ಇವರು ಉಗ್ರಗಾಮಿಗಳೊಂದಿಗೆ ಸಂಬಂಧ ಹೊಂದಿದ್ದರು ಎಂದು ಅವರು ಹೇಳಿದರು.

ಶ್ರೀನಗರದಲ್ಲಿ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡ ಪೊಲೀಸ್, ಕೆಲವು ಪ್ರದೇಶಗಳಲ್ಲಿ ಇಂಟರ್ನೆಟ್ ಸ್ಥಗಿತ

ಕೇಂದ್ರ ಗೃಹ ಸಚಿವ ಅಮಿತ್ ಶಾ ಕಣಿವೆಗೆ ಮೂರು ದಿನಗಳ ಭೇಟಿ ನೀಡುವುದಕ್ಕೆ ಒಂದು ದಿನ ಮುಂಚಿತವಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶುಕ್ರವಾರ ಶ್ರೀನಗರದಲ್ಲಿ ಹಲವಾರು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಕೆಲವು ಪ್ರದೇಶಗಳಲ್ಲಿ ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಅನೇಕ ನಿವಾಸಿಗಳು ತಮ್ಮ ದ್ವಿಚಕ್ರ ವಾಹನಗಳನ್ನು ಪೊಲೀಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು, ಅವರು ತಮ್ಮ ದಾಖಲೆಗಳನ್ನು ಪರಿಶೀಲಿಸಲಿಲ್ಲ ಎಂದು ಪಿಟಿಐ ವರದಿ ಮಾಡಿದೆ. ಅಕ್ಟೋಬರ್ 26 ರ ನಂತರ ನಿವಾಸಿಗಳು ತಮ್ಮ ವಾಹನಗಳನ್ನು ಪೊಲೀಸರಿಂದ ಪಡೆದುಕೊಳ್ಳುವಂತೆ ಹೇಳಲಾಗಿದೆ.

ಇದನ್ನೂ ಓದಿ: 57ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಗೃಹಮಂತ್ರಿ ಅಮಿತ್​ ಶಾ; ಪ್ರಧಾನಿ ಮೋದಿ ಸೇರಿ ಹಲವು ಗಣ್ಯರಿಂದ ಶುಭಾಶಯ

Click on your DTH Provider to Add TV9 Kannada