Gulmarg Avalanche: ಜಮ್ಮು ಕಾಶ್ಮೀರದ ಗುಲ್ಮಾರ್ಗ್​ನಲ್ಲಿ ಭಾರೀ ಹಿಮಕುಸಿತ, ಇಬ್ಬರು ಸಾವು, ಓರ್ವನಿಗೆ ಗಂಭೀರ ಗಾಯ

ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ಬುಧವಾರ ಭಾರೀ ಹಿಮಕುಸಿತ ಸಂಭವಿಸಿದ ನಂತರ ಹಲವಾರು ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.

Gulmarg Avalanche: ಜಮ್ಮು ಕಾಶ್ಮೀರದ ಗುಲ್ಮಾರ್ಗ್​ನಲ್ಲಿ ಭಾರೀ ಹಿಮಕುಸಿತ, ಇಬ್ಬರು ಸಾವು, ಓರ್ವನಿಗೆ ಗಂಭೀರ ಗಾಯ
ಹಿಮಪಾತImage Credit source: Twiter/Screengrab
Follow us
TV9 Web
| Updated By: Rakesh Nayak Manchi

Updated on:Feb 01, 2023 | 3:13 PM

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಗುಲ್ಮಾರ್ಗ್‌ನಲ್ಲಿ ಸಂಭವಿಸಿದ ಭಾರೀ ಹಿಮಕುಸಿತದಲ್ಲಿ (Heavy snowfall in Gulmarg) ಸಿಲುಕಿ ಇಬ್ಬರು ಸಾವನ್ನಪ್ಪಿದ್ದು, ಓರ್ವನಿಗೆ ಗಂಭೀರ ಗಾಯಗಳಾಗಿವೆ. ಹಿಮಪಾತದ ನಂತರ ಇಬ್ಬರು ವಿದೇಶಿಗರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಸದ್ಯ ಹಿಮಪಾತ ಪ್ರದೇಶದಲ್ಲಿ ರಕ್ಷಣಾ ಪಡೆಗಳು ಬೀಡುಬಿಟ್ಟಿದ್ದು, ಹಿಮದಡಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ವರದಿಗಳ ಪ್ರಕಾರ, ಗುಲ್ಮಾರ್ಗ್ ಸ್ಕೀಯಿಂಗ್ ರೆಸಾರ್ಟ್‌ನ ಮೇಲ್ಭಾಗದಲ್ಲಿ ಹಿಮಕುಸಿತ ಸಂಭವಿಸಿದೆ.

ಶುಕ್ರವಾರ (ಜನವರಿ 27) ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ದೂರದ ಪದ್ದರ್ ಪ್ರದೇಶದಲ್ಲಿ ಹಿಮಕುಸಿತ ಸಂಭವಿಸಿತ್ತು. ಆದರೆ, ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ. ಇಂದು ಗುಲ್​ಮಾರ್ಗ್​​ನಲ್ಲಿ ಹಿಮಪಾತ ಉಂಟಾಗಿದ್ದು, ಎಚ್ಚೆತ್ತ ಅಧಿಕಾರಿಗಳು, ಜಮ್ಮು ಮತ್ತು ಕಾಶ್ಮೀರದ ವಿವಿಧ ಪ್ರದೇಶಗಳಲ್ಲಿ ಹಿಮಕುಸಿತದ ಎಚ್ಚರಿಕೆ ನೀಡಿದ್ದಾರೆ. ಮೆಚೈಲ್ ಬೆಲ್ಟ್‌ನ ಕುಗ್ರಾಮದ ಬಳಿ ಹಿಮಪಾತ ಸಂಭವಿಸಿದೆ. ಆದರೆ ಗ್ರಾಮವು ಹಿಮಪಾತ ಪ್ರದೇಶದಿಂದ ದೂರವಿರುವುದರಿಂದ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಿ…

Published On - 2:38 pm, Wed, 1 February 23

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ