ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಗುಲ್ಮಾರ್ಗ್‌ನಲ್ಲಿ ಸಂಭವಿಸಿದ ಭಾರೀ ಹಿಮಕುಸಿತದಲ್ಲಿ (Heavy snowfall in Gulmarg) ಸಿಲುಕಿ ಇಬ್ಬರು ಸಾವನ್ನಪ್ಪಿದ್ದು, ಓರ್ವನಿಗೆ ಗಂಭೀರ ಗಾಯಗಳಾಗಿವೆ. ಹಿಮಪಾತದ ನಂತರ ಇಬ್ಬರು ವಿದೇಶಿಗರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಸದ್ಯ ಹಿಮಪಾತ ಪ್ರದೇಶದಲ್ಲಿ ರಕ್ಷಣಾ ಪಡೆಗಳು ಬೀಡುಬಿಟ್ಟಿದ್ದು, ಹಿಮದಡಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ವರದಿಗಳ ಪ್ರಕಾರ, ಗುಲ್ಮಾರ್ಗ್ ಸ್ಕೀಯಿಂಗ್ ರೆಸಾರ್ಟ್‌ನ ಮೇಲ್ಭಾಗದಲ್ಲಿ ಹಿಮಕುಸಿತ ಸಂಭವಿಸಿದೆ.
ಶುಕ್ರವಾರ (ಜನವರಿ 27) ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ದೂರದ ಪದ್ದರ್ ಪ್ರದೇಶದಲ್ಲಿ ಹಿಮಕುಸಿತ ಸಂಭವಿಸಿತ್ತು. ಆದರೆ, ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ. ಇಂದು ಗುಲ್ಮಾರ್ಗ್‌ನಲ್ಲಿ ಹಿಮಪಾತ ಉಂಟಾಗಿದ್ದು, ಎಚ್ಚೆತ್ತ ಅಧಿಕಾರಿಗಳು, ಜಮ್ಮು ಮತ್ತು ಕಾಶ್ಮೀರದ ವಿವಿಧ ಪ್ರದೇಶಗಳಲ್ಲಿ ಹಿಮಕುಸಿತದ ಎಚ್ಚರಿಕೆ ನೀಡಿದ್ದಾರೆ. ಮೆಚೈಲ್ ಬೆಲ್ಟ್‌ನ ಕುಗ್ರಾಮದ ಬಳಿ ಹಿಮಪಾತ ಸಂಭವಿಸಿದೆ. ಆದರೆ ಗ್ರಾಮವು ಹಿಮಪಾತ ಪ್ರದೇಶದಿಂದ ದೂರವಿರುವುದರಿಂದ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಿ…
Published On - 2:38 pm, Wed, 1 February 23