- TV9 Kannada National News Jammu and kashmir Low intensity earthquake measuring 3.9 on Richter scale jolts Bandipora
Jammu Kashmir Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪ: 3.9 ತೀವ್ರತೆ ದಾಖಲು
ಜಮ್ಮು ಮತ್ತು ಕಾಶ್ಮೀರದಲ್ಲಿ 3.9 ತೀವ್ರತೆಯ ಭೂಕಂಪ ದಾಖಲಾಗಿದೆ. ಜಮ್ಮು ಕಾಶ್ಮೀರದ ಬಂಡೀಫೊರಾದಲ್ಲಿ ಭೂಕಂಪ ಸಂಭವಿಸಿದೆ.

Updated on:Mar 05, 2023 | 3:31 PM
ಜಮ್ಮು ಮತ್ತು ಕಾಶ್ಮೀರದಲ್ಲಿ 3.9 ತೀವ್ರತೆಯ ಭೂಕಂಪ ದಾಖಲಾಗಿದೆ. ಜಮ್ಮು ಕಾಶ್ಮೀರದ ಬಂಡೀಫೊರಾದಲ್ಲಿ ಭೂಕಂಪ ಸಂಭವಿಸಿದೆ. ಬಂಡೀಪೋರಾದಲ್ಲಿ ಬೆಳಗ್ಗೆ 6.57ರ ಸುಮಾರಿಗೆ ಭೂಕಂಪ ಸಂಭವಿಸಿದೆ, ಭೂಕಂಪನವು ಭೂಮಿಯ ಹೊರಪದರದೊಳಗೆ 10 ಕಿಲೋಮೀಟರ್‌ಗಳಷ್ಟು ಅಕ್ಷಾಂಶ 34.42 ಡಿಗ್ರಿ ಉತ್ತರ ಮತ್ತು ರೇಖಾಂಶ 74.88 ಡಿಗ್ರಿ ಪೂರ್ವದಲ್ಲಿ ಸಂಭವಿಸಿದೆ.
ಎಲ್ಲಿಯೂ ಆಸ್ತಿಪಾಸ್ತಿ ನಷ್ಟದ ಕುರಿತು ವರದಿಯಾಗಿಲ್ಲ. ಉತ್ತರಾಖಂಡದ ಉತ್ತರಕಾಶಿಯಲ್ಲಿ ಕೂಡ ಭೂಕಂಪ ಸಂಭವಿಸಿದೆ. ರಾತ್ರಿ 12.45ರ ಸುಮಾರಿಗೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 2.5 ತೀವ್ರತೆ ದಾಖಲಾಗಿದೆ.
ಗುರುವಾರ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ 2.4 ತೀವ್ರತೆಯ ಭೂಕಂಪ ಸಂಭವಿಸಿತ್ತು. ಈ ಹಿಂದೆ 2022ರ ಡಿಸೆಂಬರ್ನಲ್ಲಿ ಉತ್ತರಕಾಶಿಯಲ್ಲಿ 3.1 ತೀವ್ರತೆಯ ಭೂಕಂಪ ಸಂಭವಿಸಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:31 pm, Sun, 5 March 23

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್ ಇಂಡಿಯಾ ಕನ್ನಡ ವೆಬ್ಸೈಟ್ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್ನಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.
Read More