ಶ್ರೀನಗರ ಅಕ್ಟೋಬರ್ 20: ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ (Manoj Sinha) ಮತ್ತು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಅವರು ಗುರುವಾರ ಕಾಶ್ಮೀರದಲ್ಲಿ ಬಹುನಿರೀಕ್ಷಿತ ವಿಸ್ಟಾಡೋಮ್ ರೈಲು (Vistadome train)ಸೇವೆಗೆ ಚಾಲನೆ ನೀಡಿದರು. ಕೇಂದ್ರ ಸಚಿವರು ಮತ್ತು ಅಸ್ಸಾಂ ಮತ್ತು ತ್ರಿಪುರಾ ಮುಖ್ಯಮಂತ್ರಿಗಳು ವಿಡಿಯೊ ಕಾನ್ಫರೆನ್ಸ್ ಮೂಲಕ ಸಮಾರಂಭದಲ್ಲಿ ಪಾಲ್ಗೊಂಡರು. ನಂತರ, ಲೆಫ್ಟಿನೆಂಟ್ ಗವರ್ನರ್ ಶ್ರೀನಗರ ನಿಲ್ದಾಣದಿಂದ ಬನಿಹಾಲ್‌ಗೆ ಮೊದಲ ವಿಸ್ಟಾಡೋಮ್ ಕೋಚ್ ರೈಲಿಗೆ ಫ್ಲ್ಯಾಗ್‌ಆಫ್ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ರೈಲ್ವೆ ಸಚಿವರು, ಕಳೆದ ಒಂಬತ್ತು ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರವು ಬಹಳಷ್ಟು ಬದಲಾಗಿದೆ. ಆ ಬದಲಾವಣೆ ಇಲ್ಲಿ ಗೋಚರಿಸುತ್ತದೆ. 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಯು ವೇಗವಾಗಿ ಸಾಗುತ್ತಿದೆ ಎಂದು ಅವರು ಹೇಳಿದರು. ಕೇಂದ್ರಾಡಳಿತ ಪ್ರದೇಶದಲ್ಲಿ ಜಿ 20 ಸಭೆಗಳು ನಡೆದಿವೆ. ರೈಲ್ವೆಯಲ್ಲಿಯೂ ಸಹ ಜಮ್ಮು ಕಾಶ್ಮೀರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.
Flagged off the first Vistadome coach train to Banihal from Srinagar Station. Sharing my speech.https://t.co/HLL3hkZCiL pic.twitter.com/IumLQdevZa
— Office of LG J&K (@OfficeOfLGJandK) October 19, 2023
ಈ ಸಂದರ್ಭದಲ್ಲಿ ಮಾತನಾಡಿದ ಅಶ್ವಿನಿ ವೈಷ್ಣವ್, ಚೆನಾಬ್ ಸೇತುವೆ, ಅಂಜಿ ಸೇತುವೆಯ ಅಭಿವೃದ್ಧಿ ಕಾರ್ಯ ಪೂರ್ಣಗೊಂಡಿದೆ, ಕೆಲವು ಭಾಗಗಳನ್ನು ಹೊರತುಪಡಿಸಿ ಸುರಂಗಗಳು ಪೂರ್ಣಗೊಂಡಿವೆ ಎಂದು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಕೇಂದ್ರಾಡಳಿತ ಪ್ರದೇಶ ಜನರನ್ನು ಅಭಿನಂದಿಸಿದರು. ಕಾಶ್ಮೀರ ಕಣಿವೆಯಲ್ಲಿ ವಿಸ್ಟಾಡೋಮ್ ರೈಲು ಸೇವೆಯನ್ನು ಪರಿಚಯಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಅವರು, ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ಲಭ್ಯವಿರುವ ಸೌಲಭ್ಯಗಳು ಈಗ ಜಮ್ಮು ಮತ್ತು ಕಾಶ್ಮೀರದ ಜನರಿಗೆ ಲಭ್ಯವಾಗುತ್ತಿವೆ ಎಂಬುದರ ಸಂಕೇತವಾಗಿದೆ ಇದು ಎಂದು ಹೇಳಿದ್ದಾರೆ.
ಜನರು ಮತ್ತು ಪ್ರವಾಸಿಗರ ಪ್ರಯಾಣದ ಅನುಭವವನ್ನು ಹೆಚ್ಚಿಸಿದ್ದಕ್ಕಾಗಿ ಅವರು ರೈಲ್ವೆ ಸಚಿವರಿಗೆ ಕೃತಜ್ಞತೆ ಸಲ್ಲಿಸಿದರು. ವಿಸ್ಟಾಡೋಮ್ ಸೇವೆಗಳು ಪ್ರವಾಸೋದ್ಯಮದ ಮೇಲೆ ಗಂಭೀರ ಪ್ರಭಾವವನ್ನು ಬೀರುತ್ತವೆ ಮತ್ತು ಪ್ರದೇಶದ ಆರ್ಥಿಕ ಬೆಳವಣಿಗೆ ಮತ್ತು ಸಾಂಸ್ಕೃತಿಕ ಪುಷ್ಟೀಕರಣಕ್ಕೆ ಕೊಡುಗೆ ನೀಡುತ್ತವೆ ಎಂದು ಅವರು ಹೇಳಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ