ಜಮ್ಮು ಕಾಶ್ಮೀರದ ಮಾಜಿ ಉಪ ಮುಖ್ಯಮಂತ್ರಿ ಸೇರಿದಂತೆ ಕಾಂಗ್ರೆಸ್ ಪಕ್ಷಕ್ಕೆ 50ಕ್ಕಿಂತಲೂ ಹೆಚ್ಚು ನಾಯಕರ ರಾಜೀನಾಮೆ

| Updated By: ರಶ್ಮಿ ಕಲ್ಲಕಟ್ಟ

Updated on: Aug 30, 2022 | 2:45 PM

ಚಾಂದ್ ಮತ್ತು ಮಾಜಿ ಸಚಿವರಾದ ಅಬ್ದುಲ್ ಮಜಿದ್ ವಾನಿ, ಮನೋಹರ್ ಲಾಲ್ ಶರ್ಮಾ, ಘಾರು ರಾಮ್ ಮತ್ತು ಮಾಜಿ ಶಾಸಕ ಬಲ್ವಾನ್ ಸಿಂಗ್ ಸೇರಿದಂತೆ ಹಲವರು ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಜಮ್ಮು ಕಾಶ್ಮೀರದ ಮಾಜಿ ಉಪ ಮುಖ್ಯಮಂತ್ರಿ ಸೇರಿದಂತೆ ಕಾಂಗ್ರೆಸ್ ಪಕ್ಷಕ್ಕೆ 50ಕ್ಕಿಂತಲೂ ಹೆಚ್ಚು ನಾಯಕರ ರಾಜೀನಾಮೆ
ಗುಲಾಂ ನಬಿ ಆಜಾದ್
Follow us on

ಜಮ್ಮು ಮತ್ತು ಕಾಶ್ಮೀರದ (Jammu and Kashmir) ಮಾಜಿ ಉಪ ಮುಖ್ಯಮಂತ್ರಿ ತಾರಾ ಚಂದ್ ಸೇರಿದಂತೆ ಪಕ್ಷದ 50 ಕ್ಕೂ ಹೆಚ್ಚು ಹಿರಿಯ ನಾಯಕರು ಮಂಗಳವಾರ ಗುಲಾಂ ನಬಿ ಆಜಾದ್ (Ghulam Nabi Azad) ಅವರನ್ನು ಬೆಂಬಲಿಸಿ ಕಾಂಗ್ರೆಸ್ (Congress) ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ನಾಯಕರು ಜಂಟಿ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಸಲ್ಲಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ 73 ವರ್ಷದ ಆಜಾದ್ ಅವರು ಕಳೆದ ವಾರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು ಕಾಂಗ್ರೆಸ್ ಜತೆಗಿನ ಐದು ದಶಕಗಳ ಒಡನಾಟವನ್ನು ಕೊನೆಗೊಳಿಸಿದರು. ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ನೀಡಿದ ರಾಜೀನಾಮೆ ಪತ್ರದಲ್ಲಿ, ಆಜಾದ್ ಪಕ್ಷವನ್ನು “ಸಮಗ್ರವಾಗಿ ನಾಶಪಡಿಸಲಾಗಿದೆ” ಎಂದು ಆರೋಪಿಸಿದ್ದು, ಇದಕ್ಕೆ ರಾಹುಲ್ ಗಾಂಧಿಯೇ ಕಾರಣ ಎಂದು ವಾಗ್ದಾಳಿ ನಡೆಸಿದ್ದರು. ಶೀಘ್ರದಲ್ಲೇ ಜಮ್ಮು ಮತ್ತು ಕಾಶ್ಮೀರದಿಂದ ರಾಷ್ಟ್ರೀಯ ಮಟ್ಟದ ಪಕ್ಷವನ್ನು ಪ್ರಾರಂಭಿಸುವುದಾಗಿ ಆಜಾದ್ ಹೇಳಿದ್ದಾರೆ. ಚಾಂದ್ ಮತ್ತು ಮಾಜಿ ಸಚಿವರಾದ ಅಬ್ದುಲ್ ಮಜಿದ್ ವಾನಿ, ಮನೋಹರ್ ಲಾಲ್ ಶರ್ಮಾ, ಘಾರು ರಾಮ್ ಮತ್ತು ಮಾಜಿ ಶಾಸಕ ಬಲ್ವಾನ್ ಸಿಂಗ್ ಸೇರಿದಂತೆ ಹಲವರು ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

“ನಾವು ಆಜಾದ್ ಅವರನ್ನು ಬೆಂಬಲಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜಂಟಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇವೆ” ಎಂದು ಸಿಂಗ್ ಹೇಳಿದ್ದಾರೆ.


ನೂರಾರು ಪಂಚಾಯತ್ ರಾಜ್ ಸಂಸ್ಥೆ (ಪಿಆರ್‌ಐ) ಸದಸ್ಯರು, ಮುನ್ಸಿಪಲ್ ಕಾರ್ಪೊರೇಟರ್‌ಗಳು ಮತ್ತು ಜಿಲ್ಲಾ ಮತ್ತು ಬ್ಲಾಕ್ ಮಟ್ಟದ ನಾಯಕರಲ್ಲದೆ ಮಾಜಿ ಸಚಿವರು ಮತ್ತು ಶಾಸಕರು ಸೇರಿದಂತೆ ಹನ್ನೆರಡು ಪ್ರಮುಖ ಕಾಂಗ್ರೆಸ್ ನಾಯಕರು ರಾಜೀನಾಮೆ ನೀಡಿದ ಬೆನ್ನಲ್ಲೇ ಈ ಸಾಮೂಹಿಕ ರಾಜೀನಾಮೆ ಬಂದಿದೆ.

Published On - 2:41 pm, Tue, 30 August 22