ಜಮ್ಮು-ಮತ್ತು ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಕಂದಕಕ್ಕೆ ಬಿದ್ದ ಪರಿಣಾಮ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ ಅಮೃತಸರದಿಂದ ಕತ್ರಾಕ್ಕೆ ಹೋಗುತ್ತಿದ್ದಾಗ ಆಳವಾದ ಕಮರಿಗೆ ಬಿದ್ದಿದೆ ಎಂದು ಜಮ್ಮು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಜಮ್ಮು ಡಿಸಿ ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಸೋಮವಾರ ನಡೆದ ಮತ್ತೊಂದು ಘಟನೆಯಲ್ಲಿ, ಕರ್ನಾಟಕದ ಮೈಸೂರಿನ ಟಿ ನರಸೀಪುರ ತಾಲೂಕಿನಲ್ಲಿ ಖಾಸಗಿ ಬಸ್‌ಗೆ ಮುಖಾಮುಖಿ ಡಿಕ್ಕಿಯಾಗಿ ಕಾರು ನುಜ್ಜುಗುಜ್ಜಾದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 10 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಳ್ಳೇಗಾಲ-ಟಿ ನರಸೀಪುರ ಮುಖ್ಯರಸ್ತೆಯ ಕುರುಬೂರು ಗ್ರಾಮದ ಬಳಿ ಘಟನೆ ನಡೆದಿದೆ. ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಲಾಯಿತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ