AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರದಲ್ಲಿ ಉಗ್ರ ಸಂಘಟನೆಗಳಿಗೆ ಆರ್ಥಿಕ ನೆರವು: ಜಮಾತ್-ಇ-ಇಸ್ಲಾಮಿ ಕಾರ್ಯಕರ್ತರ ಪ್ರದೇಶಗಳಿಗೆ ಏಕಕಾಲಕ್ಕೆ ಎನ್ಐಎ ದಾಳಿ

NIA Raids: ಪಾಕಿಸ್ತಾನದ ಆದೇಶದ ಮೇರೆಗೆ ಭಯೋತ್ಪಾದನಾ ಚಟುವಟಿಕೆಗಳನ್ನು ಬೆಂಬಲಿಸಿದ ಆರೋಪದ ಮೇಲೆ ಈ ವರ್ಷದ ಆರಂಭದಲ್ಲಿ ಜಮಾತ್ ಕಾರ್ಯಕರ್ತರು ಮತ್ತು ಪದಾಧಿಕಾರಿಗಳ ವಿರುದ್ಧ ಎನ್ಐಎ ಈ ಪ್ರಕರಣವನ್ನು ದಾಖಲಿಸಿದೆ

ಕಾಶ್ಮೀರದಲ್ಲಿ ಉಗ್ರ ಸಂಘಟನೆಗಳಿಗೆ ಆರ್ಥಿಕ ನೆರವು: ಜಮಾತ್-ಇ-ಇಸ್ಲಾಮಿ ಕಾರ್ಯಕರ್ತರ ಪ್ರದೇಶಗಳಿಗೆ ಏಕಕಾಲಕ್ಕೆ ಎನ್ಐಎ ದಾಳಿ
ಎನ್ಐಎ
TV9 Web
| Edited By: |

Updated on: Aug 08, 2021 | 3:29 PM

Share

ದೆಹಲಿ: ಕೇಂದ್ರಾಡಳಿತ ಪ್ರದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆ ಬೆಂಬಲ ಮತ್ತು ಆರ್ಥಿಕ ಸಹಾಯ ನೀಡಿದ ಆರೋಪದ ತನಿಖೆಯ ಭಾಗವಾಗಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ದಾಳಿ ನಡೆಸಿದೆ. ಭಾನುವಾರ ಜಮಾತ್-ಇ-ಇಸ್ಲಾಮಿ ಕಾರ್ಯಕರ್ತರ ನೆಲೆಗಳ ಮೇಲೆ ಎನ್ಐಎ ಏಕಕಾಲದಲ್ಲಿ ದಾಳಿ ನಡೆಸಿದೆ. ಪಾಕಿಸ್ತಾನದ ಆದೇಶದ ಮೇರೆಗೆ ಭಯೋತ್ಪಾದನಾ ಚಟುವಟಿಕೆಗಳನ್ನು ಬೆಂಬಲಿಸಿದ ಆರೋಪದ ಮೇಲೆ ಈ ವರ್ಷದ ಆರಂಭದಲ್ಲಿ ಜಮಾತ್ ಕಾರ್ಯಕರ್ತರು ಮತ್ತು ಪದಾಧಿಕಾರಿಗಳ ವಿರುದ್ಧ ಎನ್ಐಎ ಈ ಪ್ರಕರಣವನ್ನು ದಾಖಲಿಸಿದೆ ಎಂದು ಮೂಲಗಳು ತಿಳಿಸಿವೆ. ಪುಲ್ವಾಮ ಭಯೋತ್ಪಾದಕ ದಾಳಿಯಲ್ಲಿ 40 ಸಿಆರ್‌ಪಿಎಫ್ ಸಿಬ್ಬಂದಿ ಹುತಾತ್ಮರಾದ ನಂತರ ಈ ಸಂಸ್ಥೆಯನ್ನು 2019 ರಲ್ಲಿ ಕೇಂದ್ರ ಸರ್ಕಾರ ನಿಷೇಧಿಸಿತ್ತು.

ಜಮಾತ್-ಇ-ಇಸ್ಲಾಮಿ ಕಾರ್ಯಕರ್ತರ ವಸತಿ ಆವರಣದಲ್ಲಿ ಶೋಧಗಳು ಶನಿವಾರ ಮುಂಜಾನೆ ಆರಂಭಗೊಂಡಿದ್ದು ಈಗಲೂ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ. ಜಮ್ಮು ವಿಭಾಗದ ದೋಡಾ, ಕಿಶ್ತ್ವಾರ್, ರಂಬನ್ ಮತ್ತು ರಜೌರಿ ಜಿಲ್ಲೆಗಳಲ್ಲಿ ದಾಳಿ ನಡೆಸಲಾಗಿದೆ. ಅನಂತನಾಗ್ ಮತ್ತು ಶೋಪಿಯಾನ್ ಜಿಲ್ಲೆಗಳು ಸೇರಿದಂತೆ ಕಾಶ್ಮೀರದ ಹಲವು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಸ್ಥಳೀಯ ಯುವಕರ ನೇಮಕಾತಿಗೆ ಇಸ್ಲಾಮಿಕ್ ಸ್ಟೇಟ್ ಪಿತೂರಿಗೆ ಸಂಬಂಧಿಸಿದಂತೆ ಕಳೆದ ತಿಂಗಳು ಎನ್ಐಎ ಕಾಶ್ಮೀರ ಕಣಿವೆಯ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದ ನಂತರ 6 ಮಂದಿಯನ್ನು ಬಂಧಿಸಿತ್ತು. ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾವುದ್ದೀನ್ ಅವರ ಇಬ್ಬರು ಪುತ್ರರು ಸೇರಿದಂತೆ ಭಯೋತ್ಪಾದಕ ಸಂಪರ್ಕದ ಆರೋಪದಡಿ ಜಮ್ಮು ಮತ್ತು ಕಾಶ್ಮೀರ ಸರ್ಕಾರವು 11 ಉದ್ಯೋಗಿಗಳನ್ನು ವಜಾ ಮಾಡಿದ ನಂತರ ಈ ದಾಳಿಗಳು ನಡೆದಿವೆ.

ಇದನ್ನೂ ಓದಿ:  ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್  ಬೆದರಿಕೆ; ಬಿಗಿ ಭದ್ರತೆ

(Jammu and Kashmir NIA conducted raids multiple locations on the premises of Jamaat-e-Islami activists for alleged terror funding) .

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್