ಕಾಶ್ಮೀರದಲ್ಲಿ ಉಗ್ರ ಸಂಘಟನೆಗಳಿಗೆ ಆರ್ಥಿಕ ನೆರವು: ಜಮಾತ್-ಇ-ಇಸ್ಲಾಮಿ ಕಾರ್ಯಕರ್ತರ ಪ್ರದೇಶಗಳಿಗೆ ಏಕಕಾಲಕ್ಕೆ ಎನ್ಐಎ ದಾಳಿ

NIA Raids: ಪಾಕಿಸ್ತಾನದ ಆದೇಶದ ಮೇರೆಗೆ ಭಯೋತ್ಪಾದನಾ ಚಟುವಟಿಕೆಗಳನ್ನು ಬೆಂಬಲಿಸಿದ ಆರೋಪದ ಮೇಲೆ ಈ ವರ್ಷದ ಆರಂಭದಲ್ಲಿ ಜಮಾತ್ ಕಾರ್ಯಕರ್ತರು ಮತ್ತು ಪದಾಧಿಕಾರಿಗಳ ವಿರುದ್ಧ ಎನ್ಐಎ ಈ ಪ್ರಕರಣವನ್ನು ದಾಖಲಿಸಿದೆ

ಕಾಶ್ಮೀರದಲ್ಲಿ ಉಗ್ರ ಸಂಘಟನೆಗಳಿಗೆ ಆರ್ಥಿಕ ನೆರವು: ಜಮಾತ್-ಇ-ಇಸ್ಲಾಮಿ ಕಾರ್ಯಕರ್ತರ ಪ್ರದೇಶಗಳಿಗೆ ಏಕಕಾಲಕ್ಕೆ ಎನ್ಐಎ ದಾಳಿ
ಎನ್ಐಎ
Edited By: ರಶ್ಮಿ ಕಲ್ಲಕಟ್ಟ

Updated on: Aug 08, 2021 | 3:29 PM

ದೆಹಲಿ: ಕೇಂದ್ರಾಡಳಿತ ಪ್ರದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆ ಬೆಂಬಲ ಮತ್ತು ಆರ್ಥಿಕ ಸಹಾಯ ನೀಡಿದ ಆರೋಪದ ತನಿಖೆಯ ಭಾಗವಾಗಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ದಾಳಿ ನಡೆಸಿದೆ. ಭಾನುವಾರ ಜಮಾತ್-ಇ-ಇಸ್ಲಾಮಿ ಕಾರ್ಯಕರ್ತರ ನೆಲೆಗಳ ಮೇಲೆ ಎನ್ಐಎ ಏಕಕಾಲದಲ್ಲಿ ದಾಳಿ ನಡೆಸಿದೆ.

ಪಾಕಿಸ್ತಾನದ ಆದೇಶದ ಮೇರೆಗೆ ಭಯೋತ್ಪಾದನಾ ಚಟುವಟಿಕೆಗಳನ್ನು ಬೆಂಬಲಿಸಿದ ಆರೋಪದ ಮೇಲೆ ಈ ವರ್ಷದ ಆರಂಭದಲ್ಲಿ ಜಮಾತ್ ಕಾರ್ಯಕರ್ತರು ಮತ್ತು ಪದಾಧಿಕಾರಿಗಳ ವಿರುದ್ಧ ಎನ್ಐಎ ಈ ಪ್ರಕರಣವನ್ನು ದಾಖಲಿಸಿದೆ ಎಂದು ಮೂಲಗಳು ತಿಳಿಸಿವೆ. ಪುಲ್ವಾಮ ಭಯೋತ್ಪಾದಕ ದಾಳಿಯಲ್ಲಿ 40 ಸಿಆರ್‌ಪಿಎಫ್ ಸಿಬ್ಬಂದಿ ಹುತಾತ್ಮರಾದ ನಂತರ ಈ ಸಂಸ್ಥೆಯನ್ನು 2019 ರಲ್ಲಿ ಕೇಂದ್ರ ಸರ್ಕಾರ ನಿಷೇಧಿಸಿತ್ತು.

ಜಮಾತ್-ಇ-ಇಸ್ಲಾಮಿ ಕಾರ್ಯಕರ್ತರ ವಸತಿ ಆವರಣದಲ್ಲಿ ಶೋಧಗಳು ಶನಿವಾರ ಮುಂಜಾನೆ ಆರಂಭಗೊಂಡಿದ್ದು ಈಗಲೂ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ. ಜಮ್ಮು ವಿಭಾಗದ ದೋಡಾ, ಕಿಶ್ತ್ವಾರ್, ರಂಬನ್ ಮತ್ತು ರಜೌರಿ ಜಿಲ್ಲೆಗಳಲ್ಲಿ ದಾಳಿ ನಡೆಸಲಾಗಿದೆ. ಅನಂತನಾಗ್ ಮತ್ತು ಶೋಪಿಯಾನ್ ಜಿಲ್ಲೆಗಳು ಸೇರಿದಂತೆ ಕಾಶ್ಮೀರದ ಹಲವು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.


ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಸ್ಥಳೀಯ ಯುವಕರ ನೇಮಕಾತಿಗೆ ಇಸ್ಲಾಮಿಕ್ ಸ್ಟೇಟ್ ಪಿತೂರಿಗೆ ಸಂಬಂಧಿಸಿದಂತೆ ಕಳೆದ ತಿಂಗಳು ಎನ್ಐಎ ಕಾಶ್ಮೀರ ಕಣಿವೆಯ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದ ನಂತರ 6 ಮಂದಿಯನ್ನು ಬಂಧಿಸಿತ್ತು. ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾವುದ್ದೀನ್ ಅವರ ಇಬ್ಬರು ಪುತ್ರರು ಸೇರಿದಂತೆ ಭಯೋತ್ಪಾದಕ ಸಂಪರ್ಕದ ಆರೋಪದಡಿ ಜಮ್ಮು ಮತ್ತು ಕಾಶ್ಮೀರ ಸರ್ಕಾರವು 11 ಉದ್ಯೋಗಿಗಳನ್ನು ವಜಾ ಮಾಡಿದ ನಂತರ ಈ ದಾಳಿಗಳು ನಡೆದಿವೆ.

ಇದನ್ನೂ ಓದಿ:  ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್  ಬೆದರಿಕೆ; ಬಿಗಿ ಭದ್ರತೆ

(Jammu and Kashmir NIA conducted raids multiple locations on the premises of Jamaat-e-Islami activists for alleged terror funding)
.

TV9 Web

TV9 Kannada

Read More
Loading...
Unable to load recommendations.
Follow Us