ರಿಯಾಸಿಯಲ್ಲಿ ನಡೆದ ಉಗ್ರ ದಾಳಿ ಹಿಂದಿದೆ ಪಾಕಿಸ್ತಾನದ ಈ ಭಯೋತ್ಪಾದಕ ಗುಂಪಿನ ಕೈವಾಡ

ರಿಯಾಸಿಯಲ್ಲಿ ಬಸ್​ ಮೇಲೆ ನಡೆದ ಉಗ್ರರ ದಾಳಿ ಹಿಂದೆ ಎಲ್​ಇಟಿ ಭಯೋತ್ಪಾದಕ ಗುಂಪಿನ ಕೈವಾಡವಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜಮ್ಮು ಕಾಶ್ಮೀರದ ರಿಯಾಸಿಯಲ್ಲಿ ಭಾನುವಾರ ಬಸ್​ ಮೇಲೆ ಗುಂಡಿನ ದಾಳಿ ನಡೆದಿದ್ದು, ಪರಿಣಾಮ ಬಸ್​ ಕಂದಕಕ್ಕೆ ಬಿದ್ದು ಮಕ್ಕಳು ಸೇರಿ 10 ಮಂದಿ ಸಾವನ್ನಪ್ಪಿದ್ದರು.

ರಿಯಾಸಿಯಲ್ಲಿ ನಡೆದ ಉಗ್ರ ದಾಳಿ ಹಿಂದಿದೆ ಪಾಕಿಸ್ತಾನದ ಈ ಭಯೋತ್ಪಾದಕ ಗುಂಪಿನ ಕೈವಾಡ
Follow us
ನಯನಾ ರಾಜೀವ್
|

Updated on: Jun 10, 2024 | 11:11 AM

ಜಮ್ಮು ಮತ್ತು ಕಾಶ್ಮೀರ(Jammu and Kashmir)ದ ರಿಯಾಸಿಯಲ್ಲಿ ಭಾನುವಾರ ಯಾತ್ರಾರ್ಥಿಗಳಿದ್ದ ಬಸ್​ ಮೇಲೆ ನಡೆದ ಉಗ್ರರ ದಾಳಿ(Terror Attack)ಯ ಹಿಂದೆ ಪಾಕಿಸ್ತಾನದ ಎಲ್​ಇಟಿ(LeT) ಭಯೋತ್ಪಾದಕ ಗುಂಪಿನ ಕೈವಾಡವಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಿಯಾಸಿಯಲ್ಲಿ ಬಸ್​ ಮೇಲೆ ಉಗ್ರರು 30-40 ಸುತ್ತಿನ ಗುಂಡಿನ ದಾಳಿ ನಡೆಸಿದ್ದರು. ಆ ದಾಳಿಯಲ್ಲಿ ಒಂದು ಗುಂಡು ಬಸ್​ ಚಾಲಕನಿಗೆ ತಗುಲಿದ ಕಾರಣ ಚಾಲಕ ನಿಯಂತ್ರಣ ತಪ್ಪಿ ಬಸ್​ ಕಂದಕಕ್ಕೆ ಬಿದ್ದಿತ್ತು ಪರಿಣಾಮ 10 ಮಂದಿ ಮೃತಪಟ್ಟಿದ್ದಾರೆ.

ಬಸ್​ನಲ್ಲಿ 30-40 ಮಂದಿ ಇದ್ದ ಕುರಿತು ಮಾಹಿತಿ ಲಭ್ಯವಾಗಿದೆ.ಸುಮಾರು 12 ಮಂದಿ ಉಗ್ರರು ಎರಡು ಅಥವಾ ಮೂರು ಗುಂಪುಗಳಾಗಿ ಜಮ್ಮು ಮತ್ತು ಕಾಶ್ಮೀರದ ಅರಣ್ಯ ಪ್ರದೇಶದೊಳಗೆ ಚಲಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ,. ಹಾಗಾಗಿ ಡ್ರೋನ್​ ವ್ಯವಸ್ಥೆ ಮಾಡಲಾಗಿದ್ದು, ಕಾಡಿನ ಮೇಲೆ ತೀವ್ರ ನಿಗಾವಹಿಸಲಾಗಿದೆ.

ಕಳೆದ ಐದು ವರ್ಷಗಳಲ್ಲಿ ಪೂಂಚ್ ಹಾಗೂ ರಜೌರಿಯಲ್ಲಿ ಈ ರೀತಿಯ ಹಲವು ಗುಂಡಿನ ದಾಳಿಗಳು ನಡೆದಿವೆ. ಜೂನ್​ 29ರಿಂದ ಅಮರನಾಥ ಯಾತ್ರೆ ಆರಂಭವಾಗುತ್ತಿದ್ದು, ಈ ಕುರಿತು ಗೃಹ ಸಚಿವ ಅಮಿತ್ ಶಾ ಈ ದಾಳಿಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

ಮತ್ತಷ್ಟು ಓದಿ: ಆ ಒಂದು ಬುಲೆಟ್​ನಿಂದ ಕಂದಕಕ್ಕೆ ಬಿದ್ದಿತ್ತು ಬಸ್​, ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ ನಡೆದಿದ್ದು ಹೇಗೆ?

ಭಾರತವು ರಿಯಾಸಿ ಮೇಲೆ ನಡೆದ ಉಗ್ರರ ದಾಳಿಗೆ ಸೂಕ್ತ ಪ್ರತೀಕಾರ ತೀರಿಸಿಕೊಳ್ಳುತ್ತದೆ. ಈ ಪಾಕಿಸ್ತಾನಿ ಗುಂಪನ್ನು ತಟಸ್ಥಗೊಳಿಸಲು ಜಮ್ಮು ಮತ್ತು ಕಾಶ್ಮೀರ ಪೋಲೀಸ್, ಅರೆ-ಮಿಲಿಟರಿ ಪಡೆಗಳು ಮತ್ತು ಭಾರತೀಯ ಸೇನೆಯು ಕ್ರಿಯಾಶೀಲವಾಗಿ ಕೆಲಸ ಮಾಡುತ್ತವೆ.

ಬಸ್ಸಿನ ಸುತ್ತಲಿನ ಚಿತ್ರಗಳು ಆತಂಕವನ್ನು ಸೃಷ್ಟಿಸುತ್ತದೆ. ಎಲ್ಲೆಂದರಲ್ಲಿ ಹಲವರ ಶವಗಳು ಬಿದ್ದಿರುವುದು ಕಂಡು ಬಂದಿದೆ. ಮೃತದೇಹಗಳು ಛಿದ್ರಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿವೆ. ಅವರಲ್ಲಿ ಕೆಲವು ಮಕ್ಕಳ ಶವಗಳಿದ್ದವು. ಪೌನಿ ಮತ್ತು ರಾನ್ಸು ನಡುವಿನ ಚಂಡಿ ಮೋಡ್‌ನಲ್ಲಿರುವ ದರ್ಗಾ ಬಳಿ ಭಯೋತ್ಪಾದಕರು ಗುಂಡು ಹಾರಿಸಲು ಪ್ರಾರಂಭಿಸಿದರು ಎಂದು ಹೇಳಲಾಗುತ್ತದೆ.

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯಾತ್ರಾರ್ಥಿಗಳು ಉತ್ತರ ಪ್ರದೇಶ, ದೆಹಲಿ ಮತ್ತು ರಾಜಸ್ಥಾನದಿಂದ ಬಂದವರು. ಗಾಯಗೊಂಡ ಪ್ರಯಾಣಿಕರನ್ನು ಜಿಲ್ಲಾ ಆಸ್ಪತ್ರೆ ರಿಯಾಸಿ, ನಾರಾಯಣ ಆಸ್ಪತ್ರೆ, ಕತ್ರಾ ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜು, ಜಮ್ಮುವಿಗೆ ರವಾನಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ