ಉಧಂಪುರ (Udhampur)ಜಿಲ್ಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ (Jammu and Kashmir) ಪೊಲೀಸರು ಸುಧಾರಿತ ಸ್ಫೋಟಕ ಸಾಧನವನ್ನು (IED) ನಿಷ್ಕ್ರಿಯಗೊಳಿಸುತ್ತಿರುವ ವಿಡಿಯೊ ಮಂಗಳವಾರ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ಸೋಮವಾರದಂದು IED ವಶಪಡಿಸಿಕೊಂಡ ನಂತರ ಒಂದು ‘ಪ್ರಮುಖ’ ಭಯೋತ್ಪಾದಕ ದಾಳಿಯನ್ನು ತಪ್ಪಿಸಲಾಗಿದ್ದು, ಇದರ ಜತೆಗೆ ನಿಷೇಧಿತ ಭಯೋತ್ಪಾದಕ ಗುಂಪು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಮುಖ್ಯಸ್ಥನ ಪತ್ರವನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹಿಂದೂಸ್ತಾನ್ ಟೈಮ್ಸ್‌ಗೆ ತಿಳಿಸಿದ್ದಾರೆ. ಸುದ್ದಿ ಸಂಸ್ಥೆ ಎಎನ್ಐ ಹಂಚಿಕೊಂಡ 20 ಸೆಕೆಂಡುಗಳ ವಿಡಿಯೊದಲ್ಲಿ ಅಧಿಕಾರಿಗಳು ಸ್ಫೋಟಕ ಸಾಧನವನ್ನು ಸ್ಫೋಟಿಸುತ್ತಿರುವುದು ಕಾಣುತ್ತದೆ. ಈ ಸ್ಫೋಟದಿಂದಾಗಿ ಹತ್ತಿರದ ಪ್ರದೇಶಗಳು ಹೊಗೆಯಿಂದ ಆವರಿಸಿಕೊಂಡಿವೆ. ಸಾಧನವು ಸುಮಾರು 15 ಕೆಜಿ ತೂಕವಿತ್ತು ಮತ್ತು ಸಿಲಿಂಡರಾಕಾರದ ವಸ್ತುವಿನಲ್ಲಿ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 300 ರಿಂದ 400 ಗ್ರಾಂ ಆರ್‌ಡಿಎಕ್ಸ್, ಏಳು 7.62 ಎಂಎಂ ಕಾರ್ಟ್ರಿಡ್ಜ್‌ಗಳು, ಐದು ಡಿಟೋನೇಟರ್‌ಗಳು ಮತ್ತು ಕೋಡೆಡ್ ಶೀಟ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
#WATCH | J&K: Police personnel defused IED recovered in Basantgarh area of Udhampur yesterday. pic.twitter.com/uOIyKiAdTI
— ANI (@ANI) December 27, 2022
ಸ್ಫೋಟಕಗಳು ಮತ್ತು ಇತರ ಅಪಾಯಕಾರಿ ವಸ್ತುಗಳನ್ನು ವಶಪಡಿಸಿಕೊಂಡಿರುವುದನ್ನು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಜಮ್ಮು ವಲಯ) ಮುಖೇಶ್ ಸಿಂಗ್ ಖಚಿತಪಡಿಸಿದ್ದಾರೆ. ಶಂಕಿತನನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ರಾಮನಗರ ಜಿಲ್ಲಾ ಉಪವಿಭಾಗದ ಪೊಲೀಸ್ ಅಧಿಕಾರಿ ಭೀಷ್ಮ್ ದುಬೆ ಹಿಂದೂಸ್ತಾನ್ ಟೈಮ್ಸ್‌ಗೆ ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಯುತ್ತಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:16 pm, Tue, 27 December 22