Terrorist Attack: ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ; ಪೊಲೀಸ್​ ಕಾನ್​ಸ್ಟೆಬಲ್ ಸಾವು, ಅವರ ಮಗಳಿಗೆ ಗಾಯ

Terrorist Attack: ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ; ಪೊಲೀಸ್​ ಕಾನ್​ಸ್ಟೆಬಲ್ ಸಾವು, ಅವರ ಮಗಳಿಗೆ ಗಾಯ
ಸಾಂದರ್ಭಿಕ ಚಿತ್ರ

ಗಾಯಗೊಂಡಿರುವ ಪೊಲೀಸ್ ಪೇದೆಯನ್ನು ಸೈಫುಲ್ಲಾ ಖಾದ್ರಿ ಎಂದು ಗುರುತಿಸಲಾಗಿದೆ. ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

TV9kannada Web Team

| Edited By: Sushma Chakre

May 24, 2022 | 8:22 PM

ಶ್ರೀನಗರ: ಸೌರಾ (ಅಂಚಾರ್) ಪ್ರದೇಶದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ (Jammu Kashmir) ಪೋಲೀಸ್‌ನ ಮೇಲೆ ಗುಂಡು ಹಾರಿಸಲಾಗಿದೆ. ಉಗ್ರರು ಗುಂಡು ಹಾರಿಸುವಾಗ ಪೊಲೀಸ್ ಸಿಬ್ಬಂದಿಗೆ ಹಾಗೂ ಆತನ ಮಗಳಿಗೆ ಗುಂಡು ತಗುಲಿದೆ. ಈ ಘಟನೆಯಲ್ಲಿ ತಂದೆ- ಮಗಳಿಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಈ ಬಗ್ಗೆ ಜಮ್ಮು ಕಾಶ್ಮೀರದ ಪೊಲೀಸರು ಇಂದು ಸಂಜೆ ಟ್ವೀಟ್ ಮಾಡಿದ್ದಾರೆ. ಈ ಘಟನೆಯಲ್ಲಿ ಗುಂಡೇಟಿನಿಂದ ಗಾಯಗೊಂಡಿದ್ದ ಪೊಲೀಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಗಾಯಗೊಂಡಿರುವ ಪೊಲೀಸ್ ಪೇದೆಯನ್ನು ಮೊಹಮ್ಮದ್ ಸೈಯದ್ ಖಾದ್ರಿ ಅವರ ಪುತ್ರ ಸೈಫುಲ್ಲಾ ಖಾದ್ರಿ ಎಂದು ಗುರುತಿಸಲಾಗಿದೆ. ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಮಗಳಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಗ್ರರ ದಾಳಿಯ ಸುದ್ದಿಯ ಸ್ವಲ್ಪ ಸಮಯದ ನಂತರ ಜಮ್ಮು ಮತ್ತು ಕಾಶ್ಮೀರದ ಪೋಲೀಸರು ತಮ್ಮ ಗಾಯಗಳಿಂದ ಪೊಲೀಸರು ಸಾವನ್ನಪ್ಪಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ಉಗ್ರರ ಗುಂಡೇಟಿನಿಂದ ಗಾಯಗೊಂಡ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ನಾವು ಹುತಾತ್ಮರಿಗೆ ನಮ್ಮ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇವೆ. ಈ ಸಮಯದಲ್ಲಿ ನಾವು ಅವರ ಕುಟುಂಬದೊಂದಿಗೆ ನಿಲ್ಲುತ್ತೇವೆಂದು ಭರವಸೆ ನೀಡುತ್ತೇವೆ ಎಂದು ಟ್ವೀಟ್ ಮಾಡಲಾಗಿದೆ.

ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗ ಕುಸಿತ , 4 ಜನರಿಗೆ ಗಾಯ

ಅಧಿಕಾರಿಗಳ ಪ್ರಕಾರ, ಪೊಲೀಸ್ ಸಿಬ್ಬಂದಿಯ ಮಗಳ ಸ್ಥಿತಿ ಸ್ಥಿರವಾಗಿದೆ. ಬದ್ಗಾಮ್ ಜಿಲ್ಲೆಯ ಚದೂರದಲ್ಲಿ ಸರ್ಕಾರಿ ನೌಕರ ರಾಹುಲ್ ಭಟ್ ಭಯೋತ್ಪಾದಕರ ಗುಂಡಿಗೆ ಬಲಿಯಾದ ಕೆಲವು ದಿನಗಳ ನಂತರ ಇಂದಿನ ದಾಳಿ ನಡೆದಿದೆ. ಪಾಕ್ ಮೂಲದ ಮತ್ತು ಜಾಗತಿಕವಾಗಿ ನಿಷೇಧಿತ ಜೈಶ್-ಎ-ಮೊಹಮ್ಮದ್‌ಗೆ ಸೇರಿದ ಭಯೋತ್ಪಾದಕರು ಈ ಹತ್ಯೆಯಲ್ಲಿ ಭಾಗಿಯಾಗಿರುವ ಶಂಕೆ ಇದೆ.

ಸೋಮವಾರ ಬಾರಾಮುಲ್ಲಾ ಜಿಲ್ಲೆಯಲ್ಲಿ ಸರಪಂಚ್‌ನ ಹತ್ಯೆಗೆ ಕಾರಣರಾದ ಮೂವರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ತಾಂತ್ರಿಕ ಕಾರಣಗಳು ಮತ್ತು ಮಾನವ ಒಳಹರಿವಿನ ಆಧಾರದ ಮೇಲೆ ಪೊಲೀಸ್ ಮತ್ತು ಸೇನೆಯ ಜಂಟಿ ತಂಡವು ಅವರನ್ನು ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜಮ್ಮು ಕಾಶ್ಮೀರದ ಪೊಲೀಸ್ ವಕ್ತಾರರ ಪ್ರಕಾರ, ಬಂಧಿತರಾದ ಮೂವರಿಂದ ಮೂರು ಚೈನೀಸ್ ಪಿಸ್ತೂಲ್‌ಗಳು, ಮೂರು ಮ್ಯಾಗಜೀನ್‌ಗಳು, ಎರಡು ಗ್ರೆನೇಡ್‌ಗಳು ಮತ್ತು 32 ಪಿಸ್ತೂಲ್ ಸುತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us on

Related Stories

Most Read Stories

Click on your DTH Provider to Add TV9 Kannada