ಜಮ್ಮು ಮತ್ತು ಕಾಶ್ಮೀರದ 30 RSS ಮುಖಂಡರಿಗೆ ಭಯೋತ್ಪಾದಕ ಗುಂಪಿನಿಂದ ಬೆದರಿಕೆ

ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖಂಡರು ಮತ್ತು ಕಾರ್ಯಕರ್ತರಿಗೆ ಭಯೋತ್ಪಾದಕ ಗುಂಪು 'ದಿ ರೆಸಿಸ್ಟೆನ್ಸ್ ಫ್ರಂಟ್' ಬೆದರಿಕೆ ಹಾಕಿದೆ.

ಜಮ್ಮು ಮತ್ತು ಕಾಶ್ಮೀರದ 30 RSS ಮುಖಂಡರಿಗೆ ಭಯೋತ್ಪಾದಕ ಗುಂಪಿನಿಂದ ಬೆದರಿಕೆ
ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್
Follow us
ಅಕ್ಷಯ್​ ಪಲ್ಲಮಜಲು​​
| Updated By: Digi Tech Desk

Updated on:Apr 04, 2023 | 1:06 PM

ಜಮ್ಮು, ಕಾಶ್ಮೀರ: ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS) ಮುಖಂಡರನ್ನು ಹಾಗೂ ಕಾರ್ಯಕರ್ತರ ರಕ್ತವನ್ನು ಚೆಲ್ಲುತ್ತೇವೆ ಎಂದು ಭಯೋತ್ಪಾದಕ ಗುಂಪು ‘ದಿ ರೆಸಿಸ್ಟೆನ್ಸ್ ಫ್ರಂಟ್’ (The Resistance Front) ಬೆದರಿಕೆ ಹಾಕಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖಂಡರು ಮತ್ತು ಕಾರ್ಯಕರ್ತರಿಗೆ ಭಯೋತ್ಪಾದಕ ಗುಂಪು ‘ದಿ ರೆಸಿಸ್ಟೆನ್ಸ್ ಫ್ರಂಟ್’ ಬೆದರಿಕೆ ಹಾಕಿದೆ. ವರದಿಗಳ ಪ್ರಕಾರ ಈ ಭಯೋತ್ಪಾದಕ ಗುಂಪು ತನ್ನ ಟಾರ್ಗೆಟ್​​ ಪಟ್ಟಿಯಲ್ಲಿ 30 ಆರ್‌ಎಸ್‌ಎಸ್ ನಾಯಕರು ಮತ್ತು ಕಾರ್ಯಕರ್ತರ ಗುರುತಿಸಿ ಪಟ್ಟಿ ಬಿಡುಗಡೆ ಮಾಡಿದೆ. ಪೋಸ್ಟರ್‌ನಲ್ಲಿ, ‘ದಿ ರೆಸಿಸ್ಟೆನ್ಸ್ ಫ್ರಂಟ್’ ಗುಂಪು ಜಮ್ಮು ಮತ್ತು ಕಾಶ್ಮೀರದ ಆರ್‌ಎಸ್‌ಎಸ್ ಕಾರ್ಯಕರ್ತರ ರಕ್ತವನ್ನು ಚೆಲ್ಲುತ್ತದೆ ಎಂದು ಹೇಳಿಕೊಂಡಿದೆ.

ಭಾರತದ ವಿಭಜನೆ ತಪ್ಪು, ಭಾರತ ಈಗ ಸಂತೋಷವಾಗಿದೆ : ಮೋಹನ್ ಭಾಗವತ್

ಏಪ್ರಿಲ್ 1 ರಂದು, ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಏಳು ದಶಕಗಳಿಗಿಂತಲೂ ಹೆಚ್ಚು ಸ್ವಾತಂತ್ರ್ಯದ ನಂತರವೂ ಪಾಕಿಸ್ತಾನದ ಜನರು ಅತೃಪ್ತರಾಗಿದ್ದಾರೆ ಮತ್ತು ಅವರು ಈಗ ಭಾರತದ ವಿಭಜನೆಯನ್ನು ತಪ್ಪು ಎಂದು ಹೇಳುತ್ತಿದ್ದಾರೆ. ಅಖಂಡ ಭಾರತ ನಿಜ ಆದರೆ ವಿಭಜಿತ ಭಾರತವು ದುಃಸ್ವಪ್ನ ಎಂದು ಅವರು ಹೇಳಿದರು. ಇದೀಗ ಈ ಹೇಳಿಕೆಯ ನಂತರ ಈ ಬೇದರಿಕೆ ಬಂದಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ:Mohan Bhagwat: ಅಖಂಡ ಭಾರತ ನಿರ್ಮಾಣ, ಹಿಂದೂರಾಷ್ಟ್ರದ ನಿಲುವು, ನೂತನ ಜನಸಂಖ್ಯಾ ನೀತಿಯ ಬಗ್ಗೆ ಮೋಹನ್ ಭಾಗವತ್ ಪ್ರಸ್ತಾಪ

ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಹೇಮು ಕಲಾನಿ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ನಡೆದ ಸಮಾರಂಭದಲ್ಲಿ ಮೋಹನ್ ಭಾಗವತ್ ಅವರು ಈ ಹೇಳಿಕೆ ನೀಡಿದ್ದಾರೆ. ಈ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳ ಸಿಂಧಿ ಸಮುದಾಯದವರೂ ಭಾಗವಹಿಸಿದ್ದರು.

ಹೊಸ ಭಾರತವನ್ನು ನಿರ್ಮಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ. ಮೋಹನ್ ಭಾಗವತ್ , ‘ಅಖಂಡ ಭಾರತ’ (ಪ್ರಸ್ತುತ ಆಧುನಿಕ ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಭಾರತ, ಮಾಲ್ಡೀವ್ಸ್, ಮ್ಯಾನ್ಮಾರ್, ನೇಪಾಳದಲ್ಲಿರುವ ಎಲ್ಲಾ ಪ್ರಾಚೀನ ಭಾಗಗಳೊಂದಿಗೆ ದೇಶದ ಪರಿಕಲ್ಪನೆ , ಪಾಕಿಸ್ತಾನ, ಶ್ರೀಲಂಕಾ ಮತ್ತು ಟಿಬೆಟ್ ಏಕೀಕೃತ) ನಿಜ ಆದರೆ ವಿಭಜಿತ ಭಾರತವು ದುಃಸ್ವಪ್ನವಾಗಿತ್ತು ಎಂದು ಹೇಳಿದ್ದಾರೆ.

ಇದು 1947 (ವಿಭಜನೆ) ಗಿಂತ ಮೊದಲು ಭಾರತವಾಗಿತ್ತು. ತಮ್ಮ ಹಠಮಾರಿತನದಿಂದ ಭಾರತದಿಂದ ಬೇರ್ಪಟ್ಟವರು ಇನ್ನೂ ಸಂತೋಷವಾಗಿದ್ದಾರೆಯೇ? ಅಲ್ಲಿ ನೋವು ಇದೆ, ಎಂದು ಅವರು ಪಾಕಿಸ್ತಾನದ ಸ್ಥಿತಿಯನ್ನು ವಿವರಿಸಿದ್ದಾರೆ. ಆದರೆ ಭಾರತದ ಈಗ ಸಂತೋಷವಿದೆ, ಹೀಗೆ ಇರಲಿ ಎಂದು ಹೇಳಿದರು.

Published On - 12:28 pm, Tue, 4 April 23

ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್