ಜಮ್ಮು ಕಾಶ್ಮೀರದಲ್ಲಿ ಸರಪಂಚ್​ ಮೇಲೆ ಗುಂಡು ಹಾರಿಸಿ ಹತ್ಯೆಗೈದ ಉಗ್ರರು

ಇಂದು ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗೋಶ್‌ಬುಗ್ ಪಟ್ಟನ್ ಪ್ರದೇಶದಲ್ಲಿ ಸರಪಂಚ್ ಮಂಜೂರ್ ಅಹ್ಮದ್ ಬಂಗ್ರೂ ಅವರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂಡಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಸರಪಂಚ್​ ಮೇಲೆ ಗುಂಡು ಹಾರಿಸಿ ಹತ್ಯೆಗೈದ ಉಗ್ರರು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Apr 15, 2022 | 8:39 PM

ಶ್ರೀನಗರ: ಜಮ್ಮು ಕಾಶ್ಮೀರದ (Jammu Kashmir) ಗೋಷ್‌ಬಗ್ ಪ್ರದೇಶದಲ್ಲಿ ಅಪರಿಚಿತ ಬಂದೂಕುಧಾರಿಗಳು ಗುಂಡು ಹಾರಿಸಿ, ಸರಪಂಚ್‌ನನ್ನು ಹತ್ಯೆ ಮಾಡಿದ್ದಾರೆ. ವರದಿಗಳ ಪ್ರಕಾರ, ಸರಪಂಚ್‌ನನ್ನು ದಿವಂಗತ ಮೊಹಮ್ಮದ್ ಸಾದಿಕ್ ಅವರ ಮಗ ಮಂಜೂರ್ ಅಹ್ಮದ್ ಬಾಂಗ್ರೂ ಎಂದು ಗುರುತಿಸಲಾಗಿದೆ. ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದರು.

ಕಳೆದ ಮಾರ್ಚ್‌ನಲ್ಲಿ ಸರಪಂಚ್‌ಗಳಾದ ಶಬೀರ್ ಅಹ್ಮದ್ ಮಿರ್, ಸಮೀರ್ ಅಹ್ಮದ್ ಭಟ್ ಮತ್ತು ಮೊಹಮ್ಮದ್ ಯಾಕೂಬ್ ದಾರ್ ಅವರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದರು. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಸರಪಂಚ್‌ನ ಹತ್ಯೆಯಲ್ಲಿ ಭಾಗಿಯಾಗಿರುವ ಹಿಜ್ಬುಲ್ ಮುಜಾಹಿದ್ದೀನ್ (ಎಚ್‌ಎಂ) ಮಾಡ್ಯೂಲ್ ಅನ್ನು ಭೇದಿಸಿದ ನಂತರ ಮೂವರು ಉಗ್ರಗಾಮಿ ಸಹಚರರನ್ನು ಸಹ ಬಂಧಿಸಲಾಗಿದೆ.

ಇಂದು ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗೋಶ್‌ಬುಗ್ ಪಟ್ಟನ್ ಪ್ರದೇಶದಲ್ಲಿ ಸರಪಂಚ್ ಮಂಜೂರ್ ಅಹ್ಮದ್ ಬಂಗ್ರೂ ಅವರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂಡಿದ್ದಾರೆ. ಸರಪಂಚ್‌ಗೆ ಬುಲೆಟ್​ನಿಂದ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

ಈ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು, ಭಯೋತ್ಪಾದಕರನ್ನು ಹಿಡಿಯಲು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Terrorists Encounter: ಕಾಶ್ಮೀರದಲ್ಲಿ ಜ. 1ರಿಂದ 7 ಪಾಕಿಸ್ತಾನಿ ಉಗ್ರರು ಸೇರಿ 14 ಭಯೋತ್ಪಾದಕರ ಎನ್​ಕೌಂಟರ್

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ