Article 370: ಸುಪ್ರೀಂಕೋರ್ಟ್​ನಲ್ಲಿ ಇಂದಿನಿಂದ ಜಮ್ಮು-ಕಾಶ್ಮೀರದ 370ನೇ ವಿಧಿ ರದ್ದು ವಿರುದ್ಧದ ಅರ್ಜಿಗಳ ವಿಚಾರಣೆ

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಇಂದಿನಿಂದ ಕೈಗೆತ್ತಿಕೊಳ್ಳಲಿದೆ.

Article 370: ಸುಪ್ರೀಂಕೋರ್ಟ್​ನಲ್ಲಿ ಇಂದಿನಿಂದ ಜಮ್ಮು-ಕಾಶ್ಮೀರದ 370ನೇ ವಿಧಿ ರದ್ದು ವಿರುದ್ಧದ ಅರ್ಜಿಗಳ ವಿಚಾರಣೆ
ಸುಪ್ರೀಂಕೋರ್ಟ್​
Follow us
ನಯನಾ ರಾಜೀವ್
|

Updated on: Aug 02, 2023 | 8:07 AM

ಜಮ್ಮು ಮತ್ತು ಕಾಶ್ಮೀರ(Jammu and Kashmir)ಕ್ಕೆ ವಿಶೇಷ ಸ್ಥಾನ ಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಇಂದಿನಿಂದ ಕೈಗೆತ್ತಿಕೊಳ್ಳಲಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ಬುಧವಾರದಿಂದ ಪ್ರತಿದಿನವೂ ವಿಚಾರಣೆ ನಡೆಸಲಿದೆ. ಪೀಠದಲ್ಲಿ ಮುಖ್ಯ ನ್ಯಾಯಮೂರ್ತಿಗಳಲ್ಲದೆ, ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್, ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್ ಕೂಡ ಸೇರಿದ್ದಾರೆ.

ಜುಲೈ 11 ರಂದು ಪೀಠವು, ಜುಲೈ 27 ರೊಳಗೆ ಎಲ್ಲಾ ದಾಖಲೆಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬೇಕು. ಜೊತೆಗೆ ಈ ದಾಖಲೆಗಳನ್ನು ನಿರ್ವಹಿಸಲು ಇಬ್ಬರು ವಕೀಲರನ್ನು ನೊಡೆಲ್ ಅಧಿಕಾರಿಗಳಾಗಿ ನೇಮಿಸಲಾಗುವುದು ಎಂದು ಪೀಠ ಈ ಮೊದಲು ಹೇಳಿತ್ತು. ಸೋಮವಾರ ಹಾಗೂ ಶುಕ್ರವಾರ ಎರಡು ದಿನಗಳನ್ನು ಹೊರತುಪಡಿಸಿ ಉಳಿದೆಲ್ಲಾ ದಿನವೂ ವಿಚಾರಣೆ ನಡೆಯಲಿದೆ.

ಈ ಮೊದಲು ಮುಖ್ಯ ಅರ್ಜಿದಾರರಾದ ಐಎಎಸ್ ಅಧಿಕಾರಿ ಶಾ ಫೈಸಲ್ ಮತ್ತು ಶೆಹ್ಲಾ ರಶೀದ್ ಪ್ರಕರಣದಿಂದ ಹಿಂದೆ ಸರಿಯುವುದಾಗಿ ಮತ್ತು ಅರ್ಜಿದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಲು ಮನವಿ ಮಾಡಿದರು. ಸುಪ್ರೀಂಕೋರ್ಟ್ ಅನುಮತಿ ನೀಡಿತ್ತು.

ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿ ಬರೋಬ್ಬರಿ ಸುಮಾರು ನಾಲ್ಕು ವರ್ಷಗಳ ಬಳಿಕ ಈಗ ವಿಚಾರಣೆ ನಡೆಯುತ್ತಿದೆ.

ಮತ್ತಷ್ಟು ಓದಿ: 370ನೇ ವಿಧಿ ರದ್ದುಗೊಳಿಸುವ ಮುನ್ನ ಅಮಿತ್ ಶಾ ಜತೆಗೆ ನಡೆದ ಸಭೆ ಹೇಗಿತ್ತು?; ತಮ್ಮ ಪುಸ್ತಕದಲ್ಲಿ ವಿವರಿಸಿದ ಕೆಜೆಎಸ್ ಧಿಲ್ಲೋನ್

ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿ ರದ್ದುಪಡಿಸಿದಾಗಿನಿಂದ, ಕಲ್ಲು ತೂರಾಟ, ಗಲಭೆಗಳು ಕಡಿಮೆಯಾಗಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಆಗಸ್ಟ್ 5, 2019 ರಂದು, ಕೇಂದ್ರ ಸರ್ಕಾರವು ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತು ಮತ್ತು ಅದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿತ್ತು – 1. ಜಮ್ಮು ಮತ್ತು ಕಾಶ್ಮೀರ, 2. ಲಡಾಖ್. ಕೇಂದ್ರದ ಈ ನಿರ್ಧಾರವನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಅರ್ಜಿಗಳನ್ನು ಸಲ್ಲಿಸಲಾಯಿತು, ಅದನ್ನು 2019 ರಲ್ಲಿ ಸಂವಿಧಾನ ಪೀಠಕ್ಕೆ ಕಳುಹಿಸಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್