Baramulla: ಜಮ್ಮು ಕಾಶ್ಮೀರದ ಬರಾಮುಲ್ಲಾದಲ್ಲಿ ಇಬ್ಬರು ಎಲ್ಇಟಿ ಉಗ್ರರ ಬಂಧನ
ಉಗ್ರರು ಅಡಗಿರುವ ಖಚಿತ ಮಾಹಿತಿಯ ಮೇರೆಗೆ ತಕ್ಷಣವೇ ಕಾರ್ಯ ನಿರ್ವಹಿಸಿದ ಪೊಲೀಸರು, ನಿಷೇಧಿತ ಎಲ್ಇಟಿ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಬಂಧಿಸಿದ್ದಾರೆ.
ಬರಾಮುಲ್ಲಾ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಭಾರತೀಯ ಸೇನೆಯ ಜಂಟಿ ಕಾರ್ಯಾಚರಣೆಯಲ್ಲಿ ಬರಾಮುಲ್ಲಾದಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಜೊತೆ ನಂಟು ಹೊಂದಿದ್ದ ಇಬ್ಬರು ಉಗ್ರರನ್ನು (Terrorists) ಬಂಧಿಸಲಾಗಿದೆ. ಉಗ್ರರು ಅಡಗಿರುವ ಖಚಿತ ಮಾಹಿತಿಯ ಮೇರೆಗೆ ತಕ್ಷಣವೇ ಕಾರ್ಯ ನಿರ್ವಹಿಸಿದ ಪೊಲೀಸರು, ನಿಷೇಧಿತ ಎಲ್ಇಟಿ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಬಂಧಿಸಿದ್ದಾರೆ.
ಅಬ್ದುಲ್ ರೆಹಮಾನ್ ಮಿರ್ ಅವರ ಮಗ ಇರ್ಷಾದ್ ಅಹ್ಮದ್ ಮಿರ್ ಮತ್ತು ಬಶೀರ್ ಅಹ್ಮದ್ ಅವರ ಮಗ ಜಾಹಿದ್ ಬಶೀರ್ ಎಂಬ ಇಬ್ಬರನ್ನು ಬರಾಮುಲ್ಲಾದಲ್ಲಿ ಬಂಧಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಬಂಧನಕ್ಕೊಳಗಾದವರ ವಶದಿಂದ 2 ಚೈನೀಸ್ ಪಿಸ್ತೂಲ್‌ಗಳು, 18 ಕಾರ್ಟ್ರಿಡ್ಜ್‌ಗಳು ಮತ್ತು 2 ಮ್ಯಾಗಜೀನ್‌ಗಳು ಸೇರಿದಂತೆ ಹಲವು ಸಾಮಗ್ರಿಗಳು, ಮದ್ದುಗುಂಡುಗಳು, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ: ಜಮ್ಮು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನದ ಡ್ರೋನ್ ಹಾರಾಟ; ಬಿಎಸ್ಎಫ್ ಯೋಧರಿಂದ ಗುಂಡಿನ ದಾಳಿ
ಪೊಲೀಸರು ಕಾನೂನಿನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇನ್ನಷ್ಟು ಉಗ್ರರು ಅದೇ ಪ್ರದೇಶದಲ್ಲಿ ಅಡಗಿರುವ ಶಂಕೆಯಿದ್ದು, ಅವರನ್ನು ಕೂಡ ಸೆರೆಹಿಡಿಯಲು ಪೊಲೀಸರು ಕಾರ್ಯೋನ್ಮುಖರಾಗಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:20 am, Sat, 11 June 22