ಕಾಶ್ಮೀರದಲ್ಲಿ ಉಗ್ರರ ಒಳನುಸುಳುವಿಕೆ ವಿರುದ್ಧ ಸೇನಾ ಕಾರ್ಯಾಚರಣೆ; ಎನ್​​ಕೌಂಟರ್​​​ನಲ್ಲಿ ಉಗ್ರನ ಹತ್ಯೆ, ಓರ್ವ ಯೋಧ ಹುತಾತ್ಮ

ಒಳನುಸುಳುವಿಕೆಗೆ ಯತ್ನಿಸುತ್ತಿದ್ದ ಒಬ್ಬ ಉಗ್ರನನ್ನು ಸೇನೆ ಹತ್ಯೆ ಮಾಡಿದೆ ಎಂದು ರಕ್ಷಣಾ ಪಡೆಯ ವಕ್ತಾರರು ಹೇಳಿದ್ದಾರೆ. ಭಾರೀ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಹೊತ್ತು ಉಗ್ರರು ಒಳನುಸುಳುತ್ತಿದ್ದರು.

ಕಾಶ್ಮೀರದಲ್ಲಿ ಉಗ್ರರ ಒಳನುಸುಳುವಿಕೆ ವಿರುದ್ಧ ಸೇನಾ ಕಾರ್ಯಾಚರಣೆ; ಎನ್​​ಕೌಂಟರ್​​​ನಲ್ಲಿ ಉಗ್ರನ ಹತ್ಯೆ, ಓರ್ವ ಯೋಧ ಹುತಾತ್ಮ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 08, 2022 | 3:41 PM

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir)ಗಡಿ ನಿಯಂತ್ರಣ ರೇಖೆಯ ತಾಂಗ್​​ಧಾರ್ ವಲಯದಲ್ಲಿ ಶುಕ್ರವಾರ ಒಳನುಸುಳುವಿಕೆ (Infiltration)ನಿಗ್ರಹ ಕಾರ್ಯಾಚರಣೆ ವೇಳೆ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಒಳನುಸುಳುವಿಕೆಗೆ ಯತ್ನಿಸುತ್ತಿದ್ದ ಒಬ್ಬ ಉಗ್ರನನ್ನು ಸೇನೆ ಹತ್ಯೆ ಮಾಡಿದೆ ಎಂದು ರಕ್ಷಣಾ ಪಡೆಯ ವಕ್ತಾರರು ಹೇಳಿದ್ದಾರೆ. ಭಾರೀ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಹೊತ್ತು ಉಗ್ರರು ಒಳನುಸುಳುತ್ತಿದ್ದರು. ಒಂದು ರೈಫಲ್, ನಾಲ್ಕು ಪಿಸ್ತೂಲ್ ಮತ್ತು ಇತರ ಆಯುಧಗಳನ್ನು ಎನ್​​ಕೌಂಟರ್ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಮುಂದುವರಿದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಕಳೆದ ರಾತ್ರಿ ಹಲವು ಉಗ್ರರು ಭಾರತದೊಳಗೆ ನುಸುಳಲು ಯತ್ನಿಸಿದ್ದಾರೆ. ನೈಟ್ ವಿಷನ್ ಸಾಧನ ಮತ್ತು ಇತರ ಉಪಕರಣಗಳ ಸಹಾಯದಿಂದ ಉಗ್ರರ ಈ ಚಟುವಟಿಕೆಗನ್ನು ಸೇಸಾಪಡೆ ಗಮನಿಸಿದೆ. ಉಗ್ರರು ತಾಂಗ್​​ಧಾರ್ ವಲಯದಲ್ಲಿ ಒಳನುಸುಳುವಿಕೆಗೆ ಯತ್ನಿಸಿದಾಗ ಸೇನಾಪಡೆ ಕಾರ್ಯಾಚರಣೆ ನಡೆಸಿದೆ. ಎನ್​​ಕೌಂಟರ್ ವೇಳೆ ಉಗ್ರನೊಬ್ಬನನ್ನು ಹತ್ಯೆ ಮಾಡಿದ್ದು, ಯೋಧ ಹುತಾತ್ಮರಾಗಿದ್ದಾರೆ ಎಂದು ಸೇನಾಪಡೆ ಹೇಳಿದೆ.

ಕಳೆದ ಕೆಲವು ವರ್ಷಗಳಲ್ಲಿ ಒಳನುಸುಳಿವಿಕೆ ಕಡಿಮೆ ಆಗಿದ್ದರೂ ಇತ್ತೀಚಿಗೆ ಏಕಾಏಕಿ ಏರಿಕೆಯಾಗತೊಡಗಿದೆ. ಕಳೆದ ವರ್ಷ ಫೆಬ್ರವರಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಅಂತರಾಷ್ಟ್ರೀಯ ಗಡಿಯಲ್ಲಿ ಕದನ ವಿರಾಮ ಸೇರಿದಂತೆ ಎಲ್ಲ ಒಪ್ಪಂದಗಳ ಕಟ್ಟುನಿಟ್ಟಿನ ಪಾಲನೆ ಬಗ್ಗೆ ಗಮನವಹಿಸುವುದಾಗಿ ಒಪ್ಪಿಕೊಂಡಿತ್ತು. ಇದಾದ ನಂತರ ಕ್ರಾಸ್ ಬಾರ್ಡರ್ ಫೈರಿಂಗ್ ಸೇರಿದಂತೆ ಯಾವುದೇ ಪ್ರಮುಖ ಘಟನೆಗಳು ನಡೆದಿರಲಿಲ್ಲ.

Published On - 3:27 pm, Fri, 8 July 22

ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ