ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಕಂದಕಕ್ಕೆ ಬಿದ್ದ ಕಾರು, ದಂಪತಿ, ಮಗು ಸಾವು

ಕಾರೊಂದು ಕಂದಕಕ್ಕೆ ಬಿದ್ದ ಪರಿಣಾಮ ದಂಪತಿ ಹಾಗೂ ಮಗು ಸಾವನ್ನಪ್ಪಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಶನಿವಾರ ಎಸ್‌ಯುವಿ 400 ಅಡಿ ಆಳದ ಕಮರಿಗೆ ಬಿದ್ದಿದ್ದರಿಂದ ದಂಪತಿ ಮತ್ತು ಅವರ ಮೂರು ತಿಂಗಳ ಮಗು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಓರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ ಎಂದು ಅವರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಕಂದಕಕ್ಕೆ ಬಿದ್ದ ಕಾರು, ದಂಪತಿ, ಮಗು ಸಾವು
ಕಾರು
Image Credit source: India TV

Updated on: Jan 07, 2024 | 8:40 AM

ಕಾರೊಂದು ಕಂದಕಕ್ಕೆ ಬಿದ್ದ ಪರಿಣಾಮ ದಂಪತಿ ಹಾಗೂ ಮಗು ಸಾವನ್ನಪ್ಪಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಶನಿವಾರ ಎಸ್‌ಯುವಿ 400 ಅಡಿ ಆಳದ ಕಮರಿಗೆ ಬಿದ್ದಿದ್ದರಿಂದ ದಂಪತಿ ಮತ್ತು ಅವರ ಮೂರು ತಿಂಗಳ ಮಗು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಓರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ ಎಂದು ಅವರು ತಿಳಿಸಿದ್ದಾರೆ.

ಮಧ್ಯಾಹ್ನ 12:45 ರ ಸುಮಾರಿಗೆ, ತುಲ್ಲಿಯಿಂದ ಚಸ್ಸಾನಾಗೆ ಹೋಗುತ್ತಿದ್ದ ಬೊಲೆರೋ ಕ್ಯಾಂಪರ್ ಝೀರೋ ಪಾಯಿಂಟ್ ಬಳಿ ಕಮರಿಗೆ ಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ ಎಂದು ಸ್ಟೇಷನ್ ಹೌಸ್ ಆಫೀಸರ್, ಚಸ್ಸಾನಾ, ಸುಮನ್ ಸಿಂಗ್ ತಿಳಿಸಿದ್ದಾರೆ.

ಶವಗಳನ್ನು ಕಾರಿನಿಂದ ಹೊರ ತೆಗೆಯಲು ರಕ್ಷಣಾ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಮೃತರನ್ನು ಮಹೋರ್‌ನ ಬಲ್ಮಟ್‌ಕೋಟೆ ಗ್ರಾಮದ ಜಾಹಿದ್ ಅಹ್ಮದ್ (27), ಅವರ ಪತ್ನಿ ಸೈರಾ ಅಖ್ತರ್ (26) ಮತ್ತು ಅವರ ಮೂರು ತಿಂಗಳ ಮಗು ಎಂದು ಗುರುತಿಸಲಾಗಿದೆ ಎಂದು ಸಿಂಗ್ ತಿಳಿಸಿದ್ದಾರೆ.

ಮತ್ತಷ್ಟು ಓದಿ: ತುಮಕೂರು: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಮೂವರು ಸಾವು

ಮಹೋರ್‌ನ ದೇವಲ್ ಗ್ರಾಮದ ನಿವಾಸಿ ಇರ್ಫಾನ್ ಅಹ್ಮದ್ ಗಾಯಗೊಂಡವರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಎಸ್‌ಎಚ್‌ಒ ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ