ಜಮ್ಮು: ಮಸೀದಿಯ ಧ್ವನಿವರ್ಧಕಕ್ಕೆ ಪ್ರತಿಯಾಗಿ ಹನುಮಾನ್ ಚಾಲೀಸಾ ಪಠಿಸಿದ ವಿದ್ಯಾರ್ಥಿಗಳು

Jammu | Mosque Loudspeakers | Hanuman Chalisa: ಶುಕ್ರವಾರ ಸರ್ಕಾರಿ ಗಾಂಧಿ ಸ್ಮಾರಕ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಕೊಠಡಿಗಳಲ್ಲಿ ಓದುತ್ತಿದ್ದಾಗ ಸ್ಥಳೀಯ ಮಸೀದಿಯಲ್ಲಿ ಧ್ವನಿವರ್ಧಕವನ್ನು ಬಳಸಲಾಗುತ್ತಿತ್ತು. ಓದುವಾಗ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಧ್ವನಿವರ್ಧಕ ಬಳಕೆ ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಮ್ಮು: ಮಸೀದಿಯ ಧ್ವನಿವರ್ಧಕಕ್ಕೆ ಪ್ರತಿಯಾಗಿ ಹನುಮಾನ್ ಚಾಲೀಸಾ ಪಠಿಸಿದ ವಿದ್ಯಾರ್ಥಿಗಳು
ಪ್ರಾತಿನಿಧಿಕ ಚಿತ್ರ (ಪಿಟಿಐ)
Follow us
TV9 Web
| Updated By: shivaprasad.hs

Updated on:May 21, 2022 | 12:41 PM

ಜಮ್ಮುವಿನ (Jammu) ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳ ಗುಂಪೊಂದು ಸ್ಥಳೀಯ ಮಸೀದಿಯಲ್ಲಿ ಧ್ವನಿವರ್ಧಕ (Mosque Loudspeakers) ಬಳಕೆಯನ್ನು ವಿರೋಧಿಸಿ ಹನುಮಾನ್ ಚಾಲೀಸಾವನ್ನು ಪಠಿಸಿದೆ. ಅಧಿಕಾರಿಗಳ ಪ್ರಕಾರ, ಶುಕ್ರವಾರ ಸರ್ಕಾರಿ ಗಾಂಧಿ ಸ್ಮಾರಕ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಕೊಠಡಿಗಳಲ್ಲಿ ಓದುತ್ತಿದ್ದಾಗ ಸ್ಥಳೀಯ ಮಸೀದಿಯಲ್ಲಿ ಧ್ವನಿವರ್ಧಕವನ್ನು ಬಳಸಲಾಗುತ್ತಿತ್ತು. ಓದುವಾಗ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಧ್ವನಿವರ್ಧಕ ಬಳಕೆ ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು. ಮಸೀದಿಯಲ್ಲಿ ಧ್ವನಿವರ್ಧಕ ಬಳಕೆ ನಿಲ್ಲಿಸಲು ಅಧಿಕಾರಿಗಳು ವಿಫಲವಾದ ನಂತರ ವಿದ್ಯಾರ್ಥಿಗಳು ‘ಹನುಮಾನ್ ಚಾಲೀಸಾ’ (Hanuman Chalisa) ಪಠಣಕ್ಕೆ ಮುಂದಾದರು. ಆದರೆ, ನಂತರ ಪೊಲೀಸರು ಹನುಮಾನ್ ಚಾಲೀಸಾ ಪಠಿಸದಂತೆ ವಿದ್ಯಾರ್ಥಿಗಳನ್ನು ತಡೆದು ಕೆಲವರನ್ನು ವಶಕ್ಕೆ ಪಡೆದರು. ನಂತರ ಅವರನ್ನು ಬಿಡುಗಡೆ ಮಾಡಲಾಯಿತು ಎಂದು ಪಿಟಿಐ ವರದಿ ಮಾಡಿದೆ.

ಇತ್ತೀಚೆಗಷ್ಟೇ ಅನುಮತಿಯಿಲ್ಲದೆ ಕಾರ್ಯನಿರ್ವಹಿಸುವ ಧ್ವನಿವರ್ಧಕಗಳನ್ನು ತೆಗೆದುಹಾಕುವ ನಿರ್ಣಯ ಅಂಗೀಕರಿಸಿದ್ದ ಜೆಎಂಸಿ:

ಧಾರ್ಮಿಕ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿಯಿಲ್ಲದೆ ಕಾರ್ಯನಿರ್ವಹಿಸುವ ಧ್ವನಿವರ್ಧಕಗಳನ್ನು ತೆಗೆದುಹಾಕಲು ಜಮ್ಮು ಮುನ್ಸಿಪಲ್ ಕಾರ್ಪೊರೇಷನ್ (ಜೆಎಂಸಿ) ನಿರ್ಣಯ ಮಾಡಿದ ಕೆಲವು ದಿನಗಳ ನಂತರ ಈ ಘಟನೆ ನಡೆದಿದೆ. ಬಿಜೆಪಿ ಕೌನ್ಸಿಲರ್ ನರೋತಮ್ ಶರ್ಮಾ ಈ ನಿರ್ಣಯವನ್ನು ಮಂಡಿಸಿದ್ದರು. ತಮ್ಮ ನಿರ್ಣಯದಲ್ಲಿ ಅವರು ಶಬ್ದ ಮಾಲಿನ್ಯವನ್ನು ತಡೆಗಟ್ಟುವ ಸಲುವಾಗಿ ಜಮ್ಮುವಿನ ಎಲ್ಲಾ ಧಾರ್ಮಿಕ ಸ್ಥಳಗಳಿಂದ ಎಲ್ಲಾ ಅಕ್ರಮ ಧ್ವನಿವರ್ಧಕಗಳು ಮತ್ತು ಸಾರ್ವಜನಿಕ ಘೋಷಣಾ ವ್ಯವಸ್ಥೆಯನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿದ್ದರು.

ಇದನ್ನೂ ಓದಿ
Image
NSE co-location scam case: NSE ಕೋ ಲೋಕೇಷನ್ ಹಗರಣ; ಮುಂಬೈ, ಕೋಲ್ಕತಾ ಸೇರಿ 10 ಸ್ಥಳಗಳಲ್ಲಿ ಸಿಬಿಐ ಶೋಧ
Image
Rahul Gandhi: ‘ಮಾತುಗಳನ್ನು ಕೇಳಿಸಿಕೊಳ್ಳುವ ಮನೋಭಾವ ಪ್ರಧಾನಿಯವರಿಗಿಲ್ಲ’; ಲಂಡನ್​ನಲ್ಲಿ ರಾಹುಲ್ ಗಾಂಧಿ ವಾಗ್ದಾಳಿ 
Image
Ram Nath Kovind: ವಿಶ್ವಸಂಸ್ಥೆ ಭದ್ರತಾ ಮಂಡಳಿಯ ತುರ್ತು ಸುಧಾರಣೆಗೆ ಕರೆ ನೀಡಿದ ರಾಷ್ಟ್ರಪತಿ ರಾಮನಾಥ ಕೋವಿಂದ್
Image
PM Modi: ವಿದೇಶ ಪ್ರವಾಸಕ್ಕೆ ತೆರಳುವಾಗ ರಾತ್ರಿ ಪ್ರಯಾಣಕ್ಕೆ ಆದ್ಯತೆ ನೀಡುವ ಪ್ರಧಾನಿ ಮೋದಿ; ಕಾರಣವೇನು? 

ಜಮ್ಮು ಮಹಾನಗರ ಪಾಲಿಕೆಯ ಮೇಯರ್ ಚಂದರ್ ಮೋಹನ್ ಗುಪ್ತಾ ಈ ನಿರ್ಣಯದ ಬಗ್ಗೆ ಮಾಹಿತಿ ನೀಡಿ, ‘ಅನುಮತಿಯಿಲ್ಲದೇ ಧ್ವನಿವರ್ಧಕ ಬಳಸುವುದನ್ನು ತಡೆಗಟ್ಟುವ ನಿರ್ಣಯವನ್ನು ಬಹುಮತದೊಂದಿಗೆ ಅಂಗೀಕರಿಸಲಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪಿನಂತೆ ಅನುಷ್ಠಾನಗೊಳಿಸಲಾಗುವುದು’ ಎಂದು ಹೇಳಿದ್ದಾರೆ. ಮಸೀದಿಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯ ಬಗ್ಗೆ ತೀವ್ರ ಚರ್ಚೆಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರು ರಾಜ್ಯಾದ್ಯಂತ ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿದ ನಂತರ ಧ್ವನಿವರ್ಧಕಗಳ ಬಳಕೆಯ ವಿವಾದ ಭುಗಿಲೆದ್ದಿತ್ತು. ತಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ ಹನುಮಾನ್ ಚಾಲೀಸಾ ಪಠಿಸುವುದಾಗಿ ಅವರು ಬೆದರಿಕೆ ಹಾಕಿದ್ದರು. ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಸೇರಿದಂತೆ ಹಲವಾರು ರಾಜ್ಯಗಳು ಧಾರ್ಮಿಕ ಸ್ಥಳಗಳಲ್ಲಿ ಅನಧಿಕೃತ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:38 pm, Sat, 21 May 22

ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ