ಜಮ್ಮು ಕಾಶ್ಮೀರ ಚುನಾವಣೆ ಅಬ್ದುಲ್ಲಾ, ಮುಫ್ತಿ, ಗಾಂಧಿ ಕುಟುಂಬದ ಆಡಳಿತವನ್ನು ಕೊನೆಗೊಳಿಸಲಿದೆ; ಅಮಿತ್ ಶಾ
ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 90ರ ದಶಕದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಹರಡುವ ಮತ್ತು ಉತ್ತೇಜಿಸುವ ಕೆಲಸವನ್ನು ಅಬ್ದುಲ್ಲಾ, ಮುಫ್ತಿ ಮತ್ತು ಕಾಂಗ್ರೆಸ್ ಪಕ್ಷದ ಗಾಂಧಿ ಕುಟುಂಬಗಳು ಮಾಡಿದೆ ಎಂದು ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.
ಶ್ರೀನಗರ: 2024ರ ಎರಡನೇ ಹಂತದ ವಿಧಾನಸಭಾ ಚುನಾವಣೆಗೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು (ಸೆಪ್ಟೆಂಬರ್ 21) ಜಮ್ಮು-ಕಾಶ್ಮೀರದ ಮೆಂಧರ್ ಕ್ಷೇತ್ರದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಮೆಂಧಾರ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ‘ಈ ಚುನಾವಣೆಯು ಜಮ್ಮು-ಕಾಶ್ಮೀರದಲ್ಲಿ 3 ಕುಟುಂಬಗಳ ಆಡಳಿತವನ್ನು ಕೊನೆಗೊಳಿಸಲಿದೆ. ಅಬ್ದುಲ್ಲಾ ಕುಟುಂಬ, ಮುಫ್ತಿ ಕುಟುಂಬ ಮತ್ತು ನೆಹರು-ಗಾಂಧಿ ಕುಟುಂಬದ ಆಡಳಿತ ಈ ಚುನಾವಣೆಯ ಮೂಲಕ ಕೊನೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಈ ಮೂರು ಕುಟುಂಬಗಳು ಜಮ್ಮು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸಿದ್ದವು. ಒಂದುವೇಳೆ 2014ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬರದೇ ಇರುತ್ತಿದ್ದರೆ ಆಗ ಪಂಚಾಯಿತಿ, ಬ್ಲಾಕ್ ಮತ್ತು ಜಿಲ್ಲಾ ಚುನಾವಣೆಗಳು ನಡೆಯುತ್ತಿರಲಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ.
जम्मू-कश्मीर के मेंढर की जनसभा में लोगों का उत्साह बता रहा है कि यहाँ भाजपा की जीत सुनिश्चित है। https://t.co/7gGuXRtocV
— Amit Shah (@AmitShah) September 21, 2024
ಇದನ್ನೂ ಓದಿ: ಆಯುಷ್ಮಾನ್ ಭಾರತ್ ಬಾಕಿ ಪಾವತಿಸಲು ಪಂಜಾಬ್ ಸರ್ಕಾರ ವಿಫಲ; ಆಪ್ ವಿರುದ್ಧ ಕೇಂದ್ರ ಸರ್ಕಾರ ಟೀಕೆ
1947ರಿಂದ ಪಾಕಿಸ್ತಾನದ ವಿರುದ್ಧ ಹೋರಾಡಿದ ಪ್ರತಿಯೊಂದು ಯುದ್ಧದಲ್ಲಿ, ಈ ನೆಲ, ಜಮ್ಮು ಮತ್ತು ಕಾಶ್ಮೀರದ ಸೈನಿಕರು ಭಾರತವನ್ನು ರಕ್ಷಿಸಿದ್ದಾರೆ. ಜಮ್ಮು-ಕಾಶ್ಮೀರದ ಈ ಚುನಾವಣೆ ಇಲ್ಲಿನ ಮೂರು ಕುಟುಂಬಗಳ ಆಡಳಿತವನ್ನು ಕೊನೆಗೊಳಿಸುವ ಚುನಾವಣೆಯಾಗಿದೆ. ಮೋದಿ ಸರ್ಕಾರವು ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಕೊನೆಗೊಳಿಸಿತು ಎಂದು ಅಮಿತ್ ಶಾ ಹೇಳಿದ್ದಾರೆ.
मोदी सरकार में गोली का जवाब गोले से दिया जाता है, इसलिए पकिस्तान मोदी जी से डरता है। pic.twitter.com/AELyEd20Hf
— Amit Shah (@AmitShah) September 21, 2024
ಇದನ್ನೂ ಓದಿ: Ladakh: ಲಡಾಖ್‌ನಲ್ಲಿ 5 ಹೊಸ ಜಿಲ್ಲೆಗಳ ರಚನೆ; ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ
ಇಂದು, ಮೋದಿ ಸರ್ಕಾರವು ಜಮ್ಮು ಮತ್ತು ಕಾಶ್ಮೀರದಿಂದ ಭಯೋತ್ಪಾದನೆಯನ್ನು ಕೊನೆಗೊಳಿಸಿದೆ ಮತ್ತು ಯುವಕರಿಗೆ ಕಲ್ಲುಗಳ ಬದಲಿಗೆ ಲ್ಯಾಪ್‌ಟಾಪ್‌ಗಳನ್ನು ನೀಡಿದೆ ಎಂದು ಗೃಹ ಸಚಿವರು ಹೇಳಿದ್ದಾರೆ. ಮೋದಿ ಅಧಿಕಾರಕ್ಕೆ ಬಂದ ನಂತರ ಒಬಿಸಿ, ಹಿಂದುಳಿದ ವರ್ಗಗಳು, ಗುಜ್ಜರ್ ಬಕರ್ವಾಲ್ ಮತ್ತು ಪಹಾರಿಗಳಿಗೆ ಮೀಸಲಾತಿ ಸಿಕ್ಕಿತು ಎಂದಿದ್ದಾರೆ.
कांग्रेस, JKNC और PDP ने जम्मू-कश्मीर में दहशतगर्दी को बढ़ावा देने का काम किया और मोदी जी ने यहाँ आतंकवाद को समाप्त कर युवाओं के हाथों में पत्थर की जगह लैपटॉप देने का काम किया। pic.twitter.com/GyGBQ3ZS1o
— Amit Shah (@AmitShah) September 21, 2024
ನಾನು ಸಂಸತ್ತಿನಲ್ಲಿ ಅದರ ಮಸೂದೆಯನ್ನು ಮಂಡಿಸಿದಾಗ ಫಾರೂಕ್ ಅಬ್ದುಲ್ಲಾ ಅವರ ಪಕ್ಷವು ಅದನ್ನು ವಿರೋಧಿಸಿತು ಮತ್ತು ಇಲ್ಲಿ ಗುಜ್ಜರ್ ಸಹೋದರರನ್ನು ಪ್ರಚೋದಿಸಲು ಪ್ರಾರಂಭಿಸಿತು. ಆಗ ನಾನು ಮೀಸಲಾತಿ ನೀಡುತ್ತೇವೆ ಎಂದು ಭರವಸೆ ನೀಡಿದ್ದೆ. ನಾವು ಆ ಭರವಸೆಯನ್ನು ಈಡೇರಿಸಿದ್ದೇವೆ ಎಂದು ಅಮಿತ್ ಶಾ ಘೋಷಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ