ಎನ್‌ಸಿ, ಕಾಂಗ್ರೆಸ್ ಮೈತ್ರಿ ನಮ್ಮ ಅಜೆಂಡಾಗೆ ಒಪ್ಪಿದರೆ ನಾವು ಸ್ಪರ್ಧಿಸುವುದಿಲ್ಲ; ಮೆಹಬೂಬಾ ಮುಫ್ತಿ

|

Updated on: Aug 24, 2024 | 6:21 PM

ಜಮ್ಮು ಕಾಶ್ಮೀರದ ವಿಧಾನಸಭಾ ಚುನಾವಣೆ ವೇಳೆ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಅವರು ವಿವರವಾದ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.

ಎನ್‌ಸಿ, ಕಾಂಗ್ರೆಸ್ ಮೈತ್ರಿ ನಮ್ಮ ಅಜೆಂಡಾಗೆ ಒಪ್ಪಿದರೆ ನಾವು ಸ್ಪರ್ಧಿಸುವುದಿಲ್ಲ; ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ
Follow us on

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಇಂದು ತಮ್ಮ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡುವ ಸಂದರ್ಭದಲ್ಲಿ ಬೃಹತ್ ಘೋಷಣೆ ಮಾಡಿದ್ದಾರೆ. ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ನಂತರ, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್‌ಗೆ ಇದು ಸ್ವೀಕಾರಾರ್ಹವಾಗಿದ್ದರೆ ಅವರೊಂದಿಗೆ ಮೈತ್ರಿಗೆ ನನ್ನ ಬೆಂಬಲವನ್ನು ನೀಡುವುದಾಗಿ ಹೇಳಿರುವ ಅವರು ಯಾವುದೇ ಸ್ಥಾನದಲ್ಲಿ ತಮ್ಮ ಪಕ್ಷ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.

ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ನಮ್ಮ ಪ್ರಣಾಳಿಕೆಯನ್ನು ಒಪ್ಪಿಕೊಳ್ಳಲು ಮತ್ತು ಕಾಶ್ಮೀರ ಸಮಸ್ಯೆಯ ಪರಿಹಾರವನ್ನು ಒಪ್ಪಿಕೊಳ್ಳಲು ಸಿದ್ಧವಾಗಿದ್ದರೆ, ನಾವು ಯಾವುದೇ ಸ್ಥಾನಕ್ಕಾಗಿ ಹೋರಾಡದೆ ಅವರನ್ನು ಬೆಂಬಲಿಸುತ್ತೇವೆ. ನಮಗೆ ಕಾಶ್ಮೀರದ ಸಮಸ್ಯೆ ಬಗೆಹರಿಯುವುದು ಮುಖ್ಯವೇ ವಿನಃ ಚುನಾವಣೆಗೆ ಸ್ಪರ್ಧಿಸುವುದಲ್ಲ ಎಂದು ಮೆಹಬೂಬಾ ಮುಫ್ತಿ ಹೇಳಿದ್ದಾರೆ.

ಇದನ್ನೂ ಓದಿ: Jammu Kashmir Election: ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ನ್ಯಾಶನಲ್ ಕಾನ್ಫರೆನ್ಸ್, ಕಾಂಗ್ರೆಸ್ ಮೈತ್ರಿ: ಫಾರೂಕ್ ಅಬ್ದುಲ್ಲಾ

ತನ್ನ ಪಕ್ಷದ ಪ್ರಣಾಳಿಕೆಯಲ್ಲಿ LOCಯಾದ್ಯಂತ ಭಾರತ ಮತ್ತು ಪಾಕಿಸ್ತಾನದ ನಡುವಿನ ವ್ಯಾಪಾರವನ್ನು ಮರುಸ್ಥಾಪಿಸಲು ಮೆಹಬೂಬಾ ಮುಫ್ತಿ ಒತ್ತಾಯಿಸಿದ್ದಾರೆ. ಇದೇ ಅಂಶವನ್ನು ನ್ಯಾಷನಲ್ ಕಾನ್ಫರೆನ್ಸ್ ತನ್ನ ಪ್ರಣಾಳಿಕೆಯ 12 ಖಾತರಿಗಳಲ್ಲಿ ಅಳವಡಿಸಿಕೊಂಡಿದೆ.


ಈ ಬಗ್ಗೆ ಮಾತನಾಡಿದ ಮುಫ್ತಿ ಅವರು, ನಾವು ಇಂದು ನಮ್ಮ ಪ್ರಣಾಳಿಕೆಯನ್ನು ಬಿಡುಗಡೆ ಮಾಡುತ್ತಿದ್ದೇವೆ. ನಾವು ಯಾವಾಗಲೂ ಪರಿಹಾರ ಮತ್ತು ಸಮನ್ವಯಕ್ಕಾಗಿ ಕೆಲಸ ಮಾಡಿದ್ದೇವೆ. ಆರ್ಟಿಕಲ್ 370 ರದ್ದಾದ ನಂತರ ಜಮ್ಮು ಕಾಶ್ಮೀರದಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಈ ಸಮಯದಲ್ಲಿ ಈಗ ಕಾಶ್ಮೀರದ ಸಮಸ್ಯೆಯನ್ನು ಸೀಟು ಹಂಚಿಕೆಗೆ ಬಳಸಲಾಗುತ್ತಿದೆ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:20 pm, Sat, 24 August 24