AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ: 38ಕ್ಕೂ ಹೆಚ್ಚು ಮಂದಿ ದುರ್ಮರಣ; 200ಕ್ಕೂ ಹೆಚ್ಚು ಮಂದಿಗೆ ಗಾಯ

Cloudburst at Kisthwar, Jammu and Kashmir: ಜಮ್ಮು ಕಾಶ್ಮೀರ ರಾಜ್ಯದ ಕಿಶ್ತಾವಾರ್​ನಲ್ಲಿ ಭಾರೀ ಮೇಘ ಸ್ಫೋಟ ಸಂಭವಿಸಿ 38ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೇಘಸ್ಫೋಟದಿಂದ ಭಾರೀ ಪ್ರವಾಹ ಸೃಷ್ಟಿಯಾಗಿ ಈ ದುರಂತ ಸಂಭವಿಸಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಮೊದಲಾದವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ: 38ಕ್ಕೂ ಹೆಚ್ಚು ಮಂದಿ ದುರ್ಮರಣ; 200ಕ್ಕೂ ಹೆಚ್ಚು ಮಂದಿಗೆ ಗಾಯ
ಮೇಘಸ್ಫೋಟ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Aug 14, 2025 | 6:56 PM

Share

ಶ್ರೀನಗರ್, ಆಗಸ್ಟ್ 14: ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಗುರುವಾರ ಭಾರೀ ಮೇಘಸ್ಫೋಟ (cloudburst) ಘಟನೆ ಸಂಭವಿಸಿದ್ದು ಭಾರೀ ಸಾವು ನೋವುಗಳಾಗಿವೆ. ಕಿಶ್ತಾವಾರ್ ಜಿಲ್ಲೆಯ ಪದ್ದರ್ ಚಶೋತಿ (Paddar Chashoti) ಎಂಬಲ್ಲಿ ಭಾರೀ ಮಳೆಯಿಂದ ಪ್ರವಾಹ ಸಂಭವಿಸಿದೆ. ಈ ಪ್ರಕೃತಿ ವಿಕೋಪ ದುರ್ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ಇದೆ. 100ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ, 200ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದಾರೆ ಎಂದು ವರದಿಗಳು ಹೇಳುತ್ತಿವೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ (Narendra Modi), ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮೊದಲಾದವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

ಹಿಮಾಲಯದಲ್ಲಿರುವ ಮಚೇಲ್ ಮಾತಾ ಯಾತ್ರೆಯ ಮಾರ್ಗದಲ್ಲಿ ಈ ದುರಂತ ಸಂಭವಿಸಿದೆ. ರಕ್ಷಣಾ ತಂಡಗಳು ತತ್​ಕ್ಷಣನೇ ಕಾರ್ಯಪ್ರವೃತ್ತಗೊಂಡು, ಜನರನ್ನು ರಕ್ಷಿಸುವ ಕೆಲಸದಲ್ಲಿ ತೊಡಗಿದರು. ನಾಪತ್ತೆಯಾಗಿರುವವರನ್ನು ಶೋಧಿಸಲಾಗುತ್ತಿದೆ. ಗಾಯಾಳುಗಳನ್ನು ರಕ್ಷಿಸುವ ಕೆಲಸ ಮಾಡಲಾಗುತ್ತಿದೆ. ಗಾಬರಿಗೊಂಡ ಜನರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗುತ್ತಿದೆ.

ಇದನ್ನೂ ಓದಿ: ಬೀದಿ ನಾಯಿಗಳ ಹಾವಳಿ ಪ್ರಕರಣ: ಸುಪ್ರೀಂಕೋರ್ಟ್​​ನ 3 ನ್ಯಾಯಮೂರ್ತಿಗಳ ಪೀಠದಿಂದ ಹೊಸದಾಗಿ ವಿಚಾರಣೆ

ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಸ್ವಾತಂತ್ರ್ಯ ದಿನಾಚರಣೆಗೆ ಪೂರ್ವಭಾವಿಯಾಗಿ ಆಯೋಜಿಸಿದ್ದ ವಿವಿಧ ಕಾರ್ಯಕ್ರಮಗಳನ್ನು ಕೂಡಲೇ ರದ್ದು ಮಾಡಿದ್ದಾರೆ. ನಾಳೆಯ ಸ್ವಾತಂತ್ರ್ಯ ಚಿನಾಚರಣೆ ಕಾರ್ಯಕ್ರಮಗಳಲ್ಲೂ ಅವರು ಪಾಲ್ಗೊಳ್ಳಲು ನಿರ್ಧರಿಸಿದ್ದಾರೆ. ಆದರೆ, ನಾಳಿನ ಕಾರ್ಯಕ್ರಮಗಳು ರದ್ದಾಗದೇ ಮುಂದುವರಿಯಲಿವೆ.

ಕೇಂದ್ರ ಗೃಹ ಮಂತ್ತಿ ಅಮಿತ್ ಶಾ ಅವರಿಗೆ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದಾಗಿ ಹೇಳಿದ ಮುಖ್ಯಮಂತ್ರಿಗಳು, ಮೇಘಸ್ಫೋಟ ಸಂಭವಿಸಿದ ಸ್ಥಳದಿಂದ ಘಟನೆ ಬಗ್ಗೆ ಮಾಹಿತಿ ಬರುವುದು ನಿಧಾನವಾಯಿತು. ಆದರೂ ರಕ್ಷಣಾ ತಂಡಗಳನ್ನು ಕಲೆಹಾಕಿ ಸ್ಥಳಕ್ಕೆ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಆಪರೇಷನ್ ಸಿಂಧೂರ್ ಬಳಿಕ ಮೊದಲ ಬಾರಿಗೆ ಗಡಿ ನುಸುಳಲು ಉಗ್ರರ ಯತ್ನ, ಗುಂಡಿನ ಚಕಮಕಿ, ಸೈನಿಕ ಹುತಾತ್ಮ

ಮೇಘಸ್ಫೋಟ ದುರಂತ: ಪ್ರಧಾನಿ ಸಂತಾಪ

ಪ್ರಧಾನಿ ನರೇಂದ್ರ ಮೋದಿ ಅವರು ಕಿಶ್ತವಾರ್​ನಲ್ಲಿನ ಮೇಘಸ್ಫೋಟ ಮತ್ತು ಪ್ರವಾಹ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಸಂತ್ರಸ್ತರಿಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನಿಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:34 pm, Thu, 14 August 25