
ಶ್ರೀನಗರ್, ಆಗಸ್ಟ್ 14: ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಗುರುವಾರ ಭಾರೀ ಮೇಘಸ್ಫೋಟ (cloudburst) ಘಟನೆ ಸಂಭವಿಸಿದ್ದು ಭಾರೀ ಸಾವು ನೋವುಗಳಾಗಿವೆ. ಕಿಶ್ತಾವಾರ್ ಜಿಲ್ಲೆಯ ಪದ್ದರ್ ಚಶೋತಿ (Paddar Chashoti) ಎಂಬಲ್ಲಿ ಭಾರೀ ಮಳೆಯಿಂದ ಪ್ರವಾಹ ಸಂಭವಿಸಿದೆ. ಈ ಪ್ರಕೃತಿ ವಿಕೋಪ ದುರ್ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ಇದೆ. 100ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ, 200ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದಾರೆ ಎಂದು ವರದಿಗಳು ಹೇಳುತ್ತಿವೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ (Narendra Modi), ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮೊದಲಾದವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
ಹಿಮಾಲಯದಲ್ಲಿರುವ ಮಚೇಲ್ ಮಾತಾ ಯಾತ್ರೆಯ ಮಾರ್ಗದಲ್ಲಿ ಈ ದುರಂತ ಸಂಭವಿಸಿದೆ. ರಕ್ಷಣಾ ತಂಡಗಳು ತತ್ಕ್ಷಣನೇ ಕಾರ್ಯಪ್ರವೃತ್ತಗೊಂಡು, ಜನರನ್ನು ರಕ್ಷಿಸುವ ಕೆಲಸದಲ್ಲಿ ತೊಡಗಿದರು. ನಾಪತ್ತೆಯಾಗಿರುವವರನ್ನು ಶೋಧಿಸಲಾಗುತ್ತಿದೆ. ಗಾಯಾಳುಗಳನ್ನು ರಕ್ಷಿಸುವ ಕೆಲಸ ಮಾಡಲಾಗುತ್ತಿದೆ. ಗಾಬರಿಗೊಂಡ ಜನರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗುತ್ತಿದೆ.
ಇದನ್ನೂ ಓದಿ: ಬೀದಿ ನಾಯಿಗಳ ಹಾವಳಿ ಪ್ರಕರಣ: ಸುಪ್ರೀಂಕೋರ್ಟ್ನ 3 ನ್ಯಾಯಮೂರ್ತಿಗಳ ಪೀಠದಿಂದ ಹೊಸದಾಗಿ ವಿಚಾರಣೆ
ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಸ್ವಾತಂತ್ರ್ಯ ದಿನಾಚರಣೆಗೆ ಪೂರ್ವಭಾವಿಯಾಗಿ ಆಯೋಜಿಸಿದ್ದ ವಿವಿಧ ಕಾರ್ಯಕ್ರಮಗಳನ್ನು ಕೂಡಲೇ ರದ್ದು ಮಾಡಿದ್ದಾರೆ. ನಾಳೆಯ ಸ್ವಾತಂತ್ರ್ಯ ಚಿನಾಚರಣೆ ಕಾರ್ಯಕ್ರಮಗಳಲ್ಲೂ ಅವರು ಪಾಲ್ಗೊಳ್ಳಲು ನಿರ್ಧರಿಸಿದ್ದಾರೆ. ಆದರೆ, ನಾಳಿನ ಕಾರ್ಯಕ್ರಮಗಳು ರದ್ದಾಗದೇ ಮುಂದುವರಿಯಲಿವೆ.
ಕೇಂದ್ರ ಗೃಹ ಮಂತ್ತಿ ಅಮಿತ್ ಶಾ ಅವರಿಗೆ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದಾಗಿ ಹೇಳಿದ ಮುಖ್ಯಮಂತ್ರಿಗಳು, ಮೇಘಸ್ಫೋಟ ಸಂಭವಿಸಿದ ಸ್ಥಳದಿಂದ ಘಟನೆ ಬಗ್ಗೆ ಮಾಹಿತಿ ಬರುವುದು ನಿಧಾನವಾಯಿತು. ಆದರೂ ರಕ್ಷಣಾ ತಂಡಗಳನ್ನು ಕಲೆಹಾಕಿ ಸ್ಥಳಕ್ಕೆ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಆಪರೇಷನ್ ಸಿಂಧೂರ್ ಬಳಿಕ ಮೊದಲ ಬಾರಿಗೆ ಗಡಿ ನುಸುಳಲು ಉಗ್ರರ ಯತ್ನ, ಗುಂಡಿನ ಚಕಮಕಿ, ಸೈನಿಕ ಹುತಾತ್ಮ
ಪ್ರಧಾನಿ ನರೇಂದ್ರ ಮೋದಿ ಅವರು ಕಿಶ್ತವಾರ್ನಲ್ಲಿನ ಮೇಘಸ್ಫೋಟ ಮತ್ತು ಪ್ರವಾಹ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಸಂತ್ರಸ್ತರಿಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನಿಡಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Published On - 6:34 pm, Thu, 14 August 25