Jammu and Kashmir Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ 3.6 ತೀವ್ರತೆಯ ಭೂಕಂಪ

ಜಮ್ಮು ಮತ್ತು ಕಾಶ್ಮೀರದಲ್ಲಿ 3.6 ತೀವ್ರತೆಯ ಭೂಕಂಪ ಸಂಭವಿಸಿದೆ. ಜಮ್ಮು ಕಾಶ್ಮೀರದ ಕಿಶ್ತ್ವಾರದಲ್ಲಿ ಬೆಳಗ್ಗೆ 8.43ರ ಸುಮಾರಿಗೆ ಸಂಭವಿಸಿದೆ.

Jammu and Kashmir Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ 3.6 ತೀವ್ರತೆಯ ಭೂಕಂಪ
ಭೂಕಂಪ
Image Credit source: Mint

Updated on: Jan 16, 2024 | 9:52 AM

ಜಮ್ಮು ಮತ್ತು ಕಾಶ್ಮೀರದಲ್ಲಿ 3.6 ತೀವ್ರತೆಯ ಭೂಕಂಪ(Earthquake) ಸಂಭವಿಸಿದೆ. ಜಮ್ಮು ಕಾಶ್ಮೀರದ ಕಿಶ್ತ್ವಾರದಲ್ಲಿ ಬೆಳಗ್ಗೆ 8.43ರ ಸುಮಾರಿಗೆ ಕಂಪನ ಸಂಭವಿಸಿದೆ. ಈ ಭೂಕಂಪದಲ್ಲಿ ಇದುವರೆಗೆ ಯಾವುದೇ ಆಸ್ತಿಪಾಸ್ತಿ ನಷ್ಟವಾಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದರೆ, ಭೂಕಂಪನದಿಂದ ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿರುವುದು ಕಂಡು ಬಂದಿದೆ.

ಈ ಭೂಕಂಪದ ಆಳವನ್ನು 5 ಕಿಲೋಮೀಟರ್ ಎಂದು ಅಳೆಯಲಾಗಿದೆ. ಚೀನಾದ ಜಿಜಾಂಗ್ ಪ್ರಾಂತ್ಯದಲ್ಲೂ ಬೆಳಗ್ಗೆ ಏಳು ಗಂಟೆಗೆ ಭೂಕಂಪನದ ಅನುಭವವಾಗಿದೆ. ಆ ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 3.7 ಎಂದು ಅಳೆಯಲಾಗಿದೆ. ಸೋಮವಾರ ಸಂಜೆ ಅಸ್ಸಾಂನಲ್ಲಿ 3.6 ತೀವ್ರತೆಯ ಭೂಕಂಪನದ ಅನುಭವವಾಗಿದೆ.

ಇದರ ಕೇಂದ್ರಬಿಂದುವು ಬ್ರಹ್ಮಪುತ್ರದ ದಕ್ಷಿಣ ದಂಡೆಯಲ್ಲಿರುವ ಪೂರ್ವ ಕರ್ಬಿ ಆಂಗ್ಲಾಂಗ್ ಜಿಲ್ಲೆಯಲ್ಲಿ ಭೂಮಿಯಿಂದ 23 ಕಿಮೀ ಆಳದಲ್ಲಿದೆ.

ಪಶ್ಚಿಮ ಕರ್ಬಿ ಆಂಗ್ಲಾಂಗ್, ಹೊಜೈ, ದಿಮಾ ಹಸಾವೊ, ಗೋಲಾಘಾಟ್ ಮತ್ತು ನಾಗಾವ್ ಜಿಲ್ಲೆಗಳಲ್ಲಿ ಕೂಡ ಕಂಪನದ ಅನುಭವವಾಗಿದೆ. ನಾಗಾಲ್ಯಾಂಡ್ ಮತ್ತು ಮಣಿಪುರದ ಕೆಲವು ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ.

 

 

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:48 am, Tue, 16 January 24

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us