Jammu Kashmir Election: ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ನ್ಯಾಶನಲ್ ಕಾನ್ಫರೆನ್ಸ್, ಕಾಂಗ್ರೆಸ್ ಮೈತ್ರಿ: ಫಾರೂಕ್ ಅಬ್ದುಲ್ಲಾ

ಎನ್‌ಸಿ ನಾಯಕರೊಬ್ಬರ ಪ್ರಕಾರ, ಪಕ್ಷಗಳು ಮೈತ್ರಿ ಬಗ್ಗೆ ಮತ್ತು ಅವುಗಳ ನಡುವೆ ಸೀಟು ಹಂಚಿಕೆಯ ಬಗ್ಗೆ ಮೂರು ಸುತ್ತಿನ ಚರ್ಚೆಗಳನ್ನು ನಡೆಸಿವೆ. ಇಂಡಿಯಾ ಬ್ಲಾಕ್‌ನ ಭಾಗವಾಗಿ ಎರಡು ಪಕ್ಷಗಳು ಒಟ್ಟಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದವು. ಕಾಶ್ಮೀರ ಕಣಿವೆಯಲ್ಲಿ ಸ್ಪರ್ಧಿಸಿದ ಮೂರು ಸೀಟುಗಳಲ್ಲಿ ಎನ್‌ಸಿ ಒಂದನ್ನು ಕಳೆದುಕೊಂಡರೆ, ಜಮ್ಮುವಿನ ಎರಡೂ ಸ್ಥಾನಗಳಲ್ಲಿ ಕಾಂಗ್ರೆಸ್ ಸೋತಿತ್ತು.

Jammu Kashmir Election: ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ನ್ಯಾಶನಲ್ ಕಾನ್ಫರೆನ್ಸ್, ಕಾಂಗ್ರೆಸ್ ಮೈತ್ರಿ: ಫಾರೂಕ್ ಅಬ್ದುಲ್ಲಾ
ಫರೂಕ್ ಅಬ್ದುಲ್ಲಾ
Follow us
|

Updated on:Aug 22, 2024 | 4:22 PM

ಶ್ರೀನಗರ ಆಗಸ್ಟ್ 22: ಸೆಪ್ಟೆಂಬರ್ 18 ರಿಂದ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿರುವ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಎಲ್ಲಾ 90 ವಿಧಾನಸಭಾ ಕ್ಷೇತ್ರಗಳಲ್ಲಿ (Assembly  Election)ತಮ್ಮ ಪಕ್ಷವು ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ (NC) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ (Farooq Abdullah) ಗುರುವಾರ ಹೇಳಿದ್ದಾರೆ.  ಶ್ರೀನಗರದಲ್ಲಿ ಕಾಂಗ್ರೆಸ್ ನಾಯಕತ್ವದೊಂದಿಗಿನ ಮಾತುಕತೆಯ ನಂತರ ಮೈತ್ರಿಯನ್ನು ಘೋಷಿಸಿದ ಫಾರೂಕ್, “ನ್ಯಾಷನಲ್ ಕಾಂಗ್ರೆಸ್-ಕಾಂಗ್ರೆಸ್ ಮೈತ್ರಿಯು ದೇಶದಲ್ಲಿ ವಿಭಜಕ ಶಕ್ತಿಗಳನ್ನು ಸೋಲಿಸುವ ಗುರಿಯನ್ನು ಹೊಂದಿದೆ” ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಫಾರೂಕ್ ಮತ್ತು ಎನ್‌ಸಿ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರನ್ನು ಅವರ ಗುಪ್ಕರ್ ರಸ್ತೆಯ ನಿವಾಸದಲ್ಲಿ ಭೇಟಿ ಮಾಡಿದರು. ಎರಡು ಪಕ್ಷಗಳು ಮೈತ್ರಿಗಾಗಿ ಸ್ಥಳೀಯ ಮಟ್ಟದಲ್ಲಿ ಚರ್ಚೆ ನಡೆಸುತ್ತಿವೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ತಿಳಿಸಿದ್ದಾರೆ.

ಎನ್‌ಸಿ ನಾಯಕರೊಬ್ಬರ ಪ್ರಕಾರ, ಪಕ್ಷಗಳು ಮೈತ್ರಿ ಬಗ್ಗೆ ಮತ್ತು ಅವುಗಳ ನಡುವೆ ಸೀಟು ಹಂಚಿಕೆಯ ಬಗ್ಗೆ ಮೂರು ಸುತ್ತಿನ ಚರ್ಚೆಗಳನ್ನು ನಡೆಸಿವೆ. ಇಂಡಿಯಾ ಬ್ಲಾಕ್‌ನ ಭಾಗವಾಗಿ ಎರಡು ಪಕ್ಷಗಳು ಒಟ್ಟಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದವು. ಕಾಶ್ಮೀರ ಕಣಿವೆಯಲ್ಲಿ ಸ್ಪರ್ಧಿಸಿದ ಮೂರು ಸೀಟುಗಳಲ್ಲಿ ಎನ್‌ಸಿ ಒಂದನ್ನು ಕಳೆದುಕೊಂಡರೆ, ಜಮ್ಮುವಿನ ಎರಡೂ ಸ್ಥಾನಗಳಲ್ಲಿ ಕಾಂಗ್ರೆಸ್ ಸೋತಿತ್ತು.

ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತಗಳಲ್ಲಿ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 4 ರಂದು ಮತ ಎಣಿಕೆ ನಡೆಯಲಿದೆ.

ಗುರುವಾರ ಶ್ರೀನಗರದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್   ಗಾಂಧಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರ ಗೌರವವನ್ನು ಉಳಿಸಿಕೊಂಡಾಗ ಮೈತ್ರಿ ಸಂಭವಿಸುತ್ತದೆ. ವಿಧಾನಸಭಾ ಚುನಾವಣೆಗೆ ಮೈತ್ರಿ ಇರುತ್ತದೆ. ಅದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಗೌರವವನ್ನು ಉಳಿಸಿಕೊಳ್ಳುತ್ತದೆ ಎಂದು ಹೇಳಿದ್ದಾರೆ.

ನಾನು ಜಮ್ಮು ಮತ್ತು ಕಾಶ್ಮೀರದ ಜನರನ್ನು ಇಷ್ಟಪಡುತ್ತೇನೆ,  “ಮೈ ಆಪ್ಸೆ ಮೊಹಬ್ಬತ್ ಕರ್ತಾ ಹೂ.” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ದೇಶದ ವಿವಿಧ ರಾಜ್ಯಗಳಲ್ಲಿ ಚುನಾವಣೆ ಘೋಷಣೆಯಾದಾಗ ನಾನು ಖರ್ಗೆ ಅವರನ್ನು ಭೇಟಿಯಾಗಿದ್ದೆ.  ನಾವು ಮೊದಲು ಜಮ್ಮು ಮತ್ತು ಕಾಶ್ಮೀರಕ್ಕೆ ಹೋಗಬೇಕೆಂದು ನಿರ್ಧರಿಸಿದ್ದೇವೆ, ಏಕೆಂದರೆ ಜಮ್ಮು ಮತ್ತು ಕಾಶ್ಮೀರದ ಜನರ ಪ್ರಾತಿನಿಧ್ಯವು ನಮಗೆ ಅತ್ಯಂತ ಮುಖ್ಯವಾಗಿದೆ ಎಂಬ ಸಂದೇಶವನ್ನು ದೇಶದ ಜನರಿಗೆ ನೀಡಲು ನಾವು ಬಯಸುತ್ತೇವೆ. ಸ್ವಾತಂತ್ರ್ಯಾ ನಂತರ ಭಾರತದ ಇತಿಹಾಸದಲ್ಲಿ ಒಂದು ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿರುವುದು ಇದೇ ಮೊದಲು ಎಂದಿದ್ದಾರೆ ಲೋಕಸಭೆಯ ವಿಪಕ್ಷ ನಾಯಕ.

ಇದನ್ನೂ ಓದಿ: ಬದ್ಲಾಪುರ ಶಾಲೆಯಲ್ಲಿ ಲೈಂಗಿಕ ದೌರ್ಜನ್ಯ: ಮಹಾರಾಷ್ಟ್ರ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್

“ಪ್ರತಿ ಬಾರಿ ನಾನು ಇಲ್ಲಿಗೆ ಬಂದಾಗ, ನಾನು ನಿಮ್ಮೆಲ್ಲರೊಂದಿಗೆ ಹಳೆಯ ಮತ್ತು ರಕ್ತಸಂಬಂಧವನ್ನು ಹಂಚಿಕೊಳ್ಳುತ್ತೇನೆ ಎಂದು ನಾನು ಇನ್ನಷ್ಟು ಅರಿತುಕೊಳ್ಳುತ್ತೇನೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಆತ್ಮವಿಶ್ವಾಸ ಮತ್ತು ಧೈರ್ಯದಿಂದ ಕೆಲಸ ಮಾಡಿದವರು ಯಾರಾದರೂ ಇದ್ದರೆ, ಅದು ಕಾಂಗ್ರೆಸ್ ನಾಯಕರು, ನೀವೆಲ್ಲರೂ  ಏನು ಅನುಭವಿಸಿದ್ದೀರಿ ಎಂದು ನನಗೆ ತಿಳಿದಿದೆ.  ಕಾಂಗ್ರೆಸ್ ‘ನಫ್ರತ್’ ಅನ್ನು ‘ಮೊಹಬ್ಬತ್’ (ಪ್ರೀತಿ) ನಿಂದ ಸೋಲಿಸುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:00 pm, Thu, 22 August 24