370ನೇ ವಿಧಿ ರದ್ದು ನಂತರ ಜಮ್ಮು ಕಾಶ್ಮೀರದಲ್ಲಿ ಮೊದಲ ಬಾರಿಗೆ ಚುನಾವಣೆ ಇಂದಿನಿಂದ ಆರಂಭ
370ನೇ ವಿಧಿ ರದ್ದತಿಯ ನಂತರ ಜಮ್ಮು ಕಾಶ್ಮೀರ ಮೊದಲ ಬಾರಿಗೆ ಚುನಾವಣೆಗೆ ಸಾಕ್ಷಿಯಾಗುತ್ತಿದೆ. ಇಂದು ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ 43 ಕ್ಷೇತ್ರಗಳಲ್ಲಿ ಪ್ರಾರಂಭವಾಗಿದೆ.
ಶ್ರೀನಗರ: 370ನೇ ವಿಧಿ ರದ್ದತಿಯ ನಂತರ ಜಮ್ಮು ಕಾಶ್ಮೀರ ಮೊದಲ ಬಾರಿಗೆ ಚುನಾವಣೆಗೆ ಸಾಕ್ಷಿಯಾಗುತ್ತಿದೆ. ಇಂದು ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ 43 ಕ್ಷೇತ್ರಗಳಲ್ಲಿ ಪ್ರಾರಂಭವಾಗಿದೆ. ಚುನಾವಣಾ ಆಯೋಗ ಮಧ್ಯಾಹ್ನ ಎರಡು ಘಂಟೆಯವರೆಗೆ ಮಾತ್ರ ಮತ ಚಲಾಯಿಸಲು ಅವಕಾಶ ನೀಡಿದೆ. ಒಟ್ಟು 8 ಹಂತಗಳಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 19ರಂದು ಎಲ್ಲಾ ಹಂತದ ಮತದಾನ ಪ್ರಕ್ರಿಯೆ ಮುಕ್ತಾಯವಾಗಲಿದೆ. ಡಿಸೆಂಬರ್ 22ರಂದು ಫಲಿತಾಂಶ ಹೊರಬರಲಿದೆ.
ಪಿಡಿಪಿ, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಸಿಪಿಐಎಂ ಮುಂತಾದ ಪಕ್ಷಗಳನ್ನು ಒಳಗೊಂಡ ಗುಫ್ಕಾರ್ ಕೂಟ ಚುನಾವಣೆಗೆ ಸ್ಪರ್ಧಿಗಳನ್ನು ಕಣಕ್ಕಿಳಿಸಿದೆ. ಅಲ್ಲದೇ, ಬಿಜೆಪಿ, ಕಾಂಗ್ರೆಸ್ ಸಹ ಸ್ಪರ್ಧೆಯಲ್ಲಿದ್ದಾರೆ. ಆರೋಗ್ಯ ಇಲಾಖೆಯ ಮುಂದಾಳತ್ವದಲ್ಲಿ ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಿ ಚುನಾವಣಾ ಪ್ರಕ್ರಿಯೆ ಜರುಗಲಿದೆ ಎಂದು ಜಮ್ಮು ಕಾಶ್ಮೀರ ಚುನಾವಣಾ ಆಯೋಗದ ಮುಖ್ಯಸ್ಥ ಕೆ ಕೆ ಶರ್ಮಾ ತಿಳಿಸಿದ್ದಾರೆ. ಮೊದಲ ಮತ್ತು ಎರಡನೇ ಹಂತಗಳಲ್ಲೇ ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳ ಚುನಾವಣೆಯನ್ನು ಆಯೋಗ ನಡೆಸಲಿದೆ.
ಮೆಹಬೂಬಾ ಮುಫ್ತಿಗೆ ಮತ್ತೆ ಗೃಹ ಬಂಧನ? ತನ್ನನ್ನು ಎರಡು ದಿನಗಳಿಂದ ಗೃಹ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಪಿಡಿಪಿ ಪಕ್ಷದ ನಾಯಕಿ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ. ಪುಲ್ವಾಮಾದಲ್ಲಿರುವ ಪಿಡಿಪಿ ಯುವ ಘಟಕದ ಅಧ್ಯಕ್ಷ ವಾಹಿದ್ ಉರ್ ರೆಹ್ಮಾನ್ರ ಕುಟುಂಬವನ್ನು ಭೇಟಿಯಾಗಲು ಅವಕಾಶ ನೀಡುತ್ತಿಲ್ಲ. ಅಲ್ಲದೇ, ಮಗಳು ಇಲ್ತಿಯಾಳಿಗೂ ಗೃಹ ಬಂಧನ ವಿಧಿಸಲಾಗಿದೆ ಎಂದು ಮುಫ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾಹಿದ್ಗೆ ಉಗ್ರ ಸಂಘಟನೆ ಜೊತೆ ಸಂಪರ್ಕವಿದೆ ಎಂಬ ಆರೋಪದಡಿ NIA ಬಂಧಿಸಿತ್ತು.
Ive been illegally detained yet again. Since two days, J&K admin has refused to allow me to visit @parawahid’s family in Pulwama. BJP Ministers & their puppets are allowed to move around in every corner of Kashmir but security is a problem only in my case. pic.twitter.com/U5KlWzW3FQ
— Mehbooba Mufti (@MehboobaMufti) November 27, 2020
ಪೊಲೀಸರಿಂದ ನಿರಾಕರಣೆ: ಮೆಹಬೂಬಾ ಮುಫ್ತಿ ಅವರಿಗೆ ಗೃಹಬಂದನ ವಿಧಿಸಿಲ್ಲ. ಸುರಕ್ಷತೆಯ ದೃಷ್ಟಿಯಿಂದ ಅವರ ಪುಲ್ವಾಮಾ ಭೇಟಿಯನ್ನು ಮುಂದೂಡಲು ಕೋರಿದ್ದೇವೆ ಎಂದು ಜಮ್ಮು ಕಾಶ್ಮೀರದ ಪೊಲೀಸ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
PDP leader Ms Mehbooba Mufti is not under house arrest. She was requested to #postpone her visit to #Pulwama purely due to #security reasons. @JmuKmrPolice
— Kashmir Zone Police (@KashmirPolice) November 27, 2020
Published On - 12:07 pm, Sat, 28 November 20