ಪಿಒಕೆ ಇಲ್ಲದೆ ಜಮ್ಮು ಕಾಶ್ಮೀರ ಅಪೂರ್ಣ; ಪಾಕ್​ಗೆ ಸಚಿವ ರಾಜನಾಥ್ ಸಿಂಗ್ ತಿರುಗೇಟು

ಪಿಒಕೆ (ಪಾಕ್ ಆಕ್ರಮಿತ ಕಾಶ್ಮೀರ) ಇಲ್ಲದೆ ಜಮ್ಮು ಮತ್ತು ಕಾಶ್ಮೀರ ಅಪೂರ್ಣ ಎಂದು ಪಿಒಕೆ ಪ್ರಧಾನಿ ಎಂಬ ಭಾರತ ವಿರೋಧಿ ಹೇಳಿಕೆಗಳ ವಿರುದ್ಧ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅಖ್ನೂರ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ರಾಜನಾಥ್ ಸಿಂಗ್, ಜಮ್ಮು ಕಾಶ್ಮೀರ ಹಾಗೂ ದೆಹಲಿಯ ಜನರ ಹೃದಯಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

ಪಿಒಕೆ ಇಲ್ಲದೆ ಜಮ್ಮು ಕಾಶ್ಮೀರ ಅಪೂರ್ಣ; ಪಾಕ್​ಗೆ ಸಚಿವ ರಾಜನಾಥ್ ಸಿಂಗ್ ತಿರುಗೇಟು
Rajnath Singh
Follow us
ಸುಷ್ಮಾ ಚಕ್ರೆ
|

Updated on: Jan 14, 2025 | 3:20 PM

ಶ್ರೀನಗರ: ಜಮ್ಮು ಮತ್ತು ಕಾಶ್ಮೀರವನ್ನು ಅಸ್ಥಿರಗೊಳಿಸಲು ನೆರೆಯ ದೇಶವಾದ ಪಾಕಿಸ್ತಾನ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ದೂಷಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅಖ್ನೂರ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ರಾಜನಾಥ್ ಸಿಂಗ್, ಜಮ್ಮು ಮತ್ತು ಕಾಶ್ಮೀರ ಹಾಗೂ ದೆಹಲಿಯ ಜನರ ಹೃದಯಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಪ್ರಯತ್ನಗಳು ನಡೆಯುತ್ತಿವೆ. ಪಾಕಿಸ್ತಾನವು ಪಿಒಕೆಯನ್ನು ಭಯೋತ್ಪಾದಕ ಕೇಂದ್ರವಾಗಿ ಬಳಸುತ್ತಿದೆ ಎಂದು ಆರೋಪಿಸಿದ ರಾಜನಾಥ್ ಸಿಂಗ್ ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದರು.

ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರವನ್ನು ಅಸ್ಥಿರಗೊಳಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಟೀಕಿಸಿದರು. ಭಾರತದ ಕುರಿತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಪ್ರಧಾನಿ ಚೌಧರಿ ಅನ್ವರುಲ್ ಹಕ್ ಅವರ ಹೇಳಿಕೆಗಳ ವಿರುದ್ಧವೂ ರಾಜನಾಥ್ ಸಿಂಗ್ ವಾಗ್ದಾಳಿ ನಡೆಸಿದರು. ಪಿಒಕೆ ಇಲ್ಲದೆ ಜಮ್ಮು ಮತ್ತು ಕಾಶ್ಮೀರ ಅಪೂರ್ಣ ಎಂದು ರಾಜನಾಥ್ ಸಿಂಗ್ ಹೇಳಿದರು.

ಇದನ್ನೂ ಓದಿ: ಜಮ್ಮು ಕಾಶ್ಮೀರ ಭಾರತದ ಕಿರೀಟ, ಭೂಮಿಯ ಸ್ವರ್ಗ; ಝಡ್-ಮೋಡ್ ಸುರಂಗ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಪಿಒಕೆ ಪ್ರಧಾನಿ ಚೌಧರಿ ಅನ್ವರುಲ್ ಹಕ್ ಇತ್ತೀಚೆಗೆ ಭಾರತದ ವಿರುದ್ಧ ಜಿಹಾದ್‌ಗೆ ಕರೆ ನೀಡಿದ್ದರು. ಜಮ್ಮು ಮತ್ತು ಕಾಶ್ಮೀರದಿಂದ ಭಾರತೀಯ ಪಡೆಗಳನ್ನು ಹೊರಹಾಕಲು ತಮ್ಮ ಸರ್ಕಾರ ಲಭ್ಯವಿರುವ ಎಲ್ಲಾ ಸಂಪನ್ಮೂಲಗಳನ್ನು ಸಜ್ಜುಗೊಳಿಸುವುದಾಗಿ ಘೋಷಿಸಿದ್ದರು.

ಇಂದು ರ‍್ಯಾಲಿಗೆ ಮುಂಚಿತವಾಗಿ, ರಾಜನಾಥ್ ಸಿಂಗ್ ಜಮ್ಮುವಿನ ಅಖ್ನೂರ್ ಗಡಿ ಪ್ರದೇಶದಲ್ಲಿ ಒಂದು ಪಾರಂಪರಿಕ ವಸ್ತುಸಂಗ್ರಹಾಲಯವನ್ನು ಉದ್ಘಾಟಿಸಿದರು. ಈ ವಸ್ತುಸಂಗ್ರಹಾಲಯವು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಯುದ್ಧಗಳಲ್ಲಿ ಬಳಸಲಾದ ವಿವಿಧ ಶಸ್ತ್ರಾಸ್ತ್ರಗಳು ಮತ್ತು ಯುದ್ಧ ವೀರರ ಶಿಲ್ಪಗಳನ್ನು ಪ್ರದರ್ಶಿಸುತ್ತದೆ. ರಾಜನಾಥ್ ಸಿಂಗ್ ಅವರು ಅಲ್ಲಿ 108 ಅಡಿ ಎತ್ತರದ ರಾಷ್ಟ್ರಧ್ವಜವನ್ನು ಹಾರಿಸಿದರು. ತಾಂಡಾ ಫಿರಂಗಿ ದಳದಲ್ಲಿ ಆಚರಿಸಲಾದ 9ನೇ ಸಶಸ್ತ್ರ ಪಡೆಗಳ ನಿವೃತ್ತರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಿಡ್ ವೀಕ್ ಎಲಿನಿಮೇಷನ್ ಟಾಸ್ಕ್, ಗೆದ್ದವರ್ಯಾರು? ಸೋತವರ್ಯಾರು?
ಮಿಡ್ ವೀಕ್ ಎಲಿನಿಮೇಷನ್ ಟಾಸ್ಕ್, ಗೆದ್ದವರ್ಯಾರು? ಸೋತವರ್ಯಾರು?
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ
ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ:ಶಶಿಕಲಾ
ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ:ಶಶಿಕಲಾ