AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರ: ಭಾರತ ಒಳನುಸುಳಲು ಸಂಚು ರೂಪಿಸಿದ್ದ ಇಬ್ಬರು ಭಯೋತ್ಪಾದಕರ ಹತ್ಯೆ, ಮುಂದುವರಿದ ಕಾರ್ಯಚರಣೆ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಒಳನುಸುಳಲು ಯತ್ನಿಸಿದ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಭದ್ರತಾ ಪಡೆ ಗುಂಡಿಕ್ಕಿ ಕೊಂದಿದ್ದಾರೆ.

ಜಮ್ಮು-ಕಾಶ್ಮೀರ: ಭಾರತ ಒಳನುಸುಳಲು ಸಂಚು ರೂಪಿಸಿದ್ದ ಇಬ್ಬರು ಭಯೋತ್ಪಾದಕರ ಹತ್ಯೆ, ಮುಂದುವರಿದ ಕಾರ್ಯಚರಣೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Aug 07, 2023 | 10:15 AM

Share

ಶ್ರೀನಗರ, ಆ.7 : ಇಂದು (ಆ.7) ಮುಂಜಾನೆ ಜಮ್ಮು ಮತ್ತು ಕಾಶ್ಮೀರದ (Jammu-Kashmir) ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಒಳನುಸುಳಲು ಯತ್ನಿಸಿದ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಭದ್ರತಾ ಪಡೆ ಗುಂಡಿಕ್ಕಿ ಕೊಂದಿದ್ದಾರೆ. ಭದ್ರತಾ ಪಡೆ ಸಿಬ್ಬಂದಿಗಳು ಈ ಪ್ರದೇಶದಲ್ಲಿ ಭಯೋತ್ಪಾದಕರ ಜತೆಗೆ ಗುಂಡಿನ ಚಕಮಕಿಯನ್ನು ನಡೆಸಿದ್ದು, ಈ ಸಮಯದಲ್ಲಿ ಇಬ್ಬರು ಭಯೋತ್ಪಾದಕರ ಸಾವನ್ನಪ್ಪಿದ್ದಾರೆ. ಆದರೆ ಅವರ ದೇಹಗಳು ಇನ್ನೂ ಪತ್ತೆಯಾಗಿಲ್ಲ, ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಗಡಿ ಭದ್ರತಾ ಸಿಬ್ಬಂದಿ ತಿಳಿಸಿದ್ದಾರೆ.

ಭಾನುವಾರದಂದು(ಆ.6)ಭದ್ರತಾ ಪಡೆ ಮತ್ತು ಕುಪ್ವಾರ ಪೊಲೀಸರ ಜಂಟಿ ಕಾರ್ಯಾಚರಣೆ ಮೂಲಕ ಜಮ್ಮು ಮತ್ತು ಕಾಶ್ಮೀರದ ತಂಗ್‌ಧರ್ ಸೆಕ್ಟರ್‌ ಮೂಲಕ ಭಾರತಕ್ಕೆ ನುಸುಳಲು ಯತ್ನಿಸುತ್ತಿದ್ದ ಒಬ್ಬ ಭಯೋತ್ಪಾದಕನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌: ಓರ್ವ ಉಗ್ರನ ಹತ್ಯೆ

ಈ ಕಾರ್ಯಾಚರಣೆ ವೇಳೆ ಹತ್ಯೆಯಾದ ಭಯೋತ್ಪಾದಕನಿಂದ ದೋಷಾರೋಪಣೆಯ ಸಾಮಗ್ರಿಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದೀಗ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:14 am, Mon, 7 August 23

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್