Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಜಮ್ಮು ಕಾಶ್ಮೀರ ನಾಯಕರ ಸಭೆ ಅಂತ್ಯ: ರಾಜ್ಯದ ಸ್ಥಾನಮಾನ ಮರುಸ್ಥಾಪನೆಗೆ ಒತ್ತಾಯ

ಜಮ್ಮು ಕಾಶ್ಮೀರದಲ್ಲಿ ಸಂಘರ್ಷಗಳು ನಿಲ್ಲಬೇಕು, ಅದು ಶಾಂತಿವಲಯವಾಗಿ ಬದಲಾಗಬೇಕು ಎಂದು ಮೋದಿ ನುಡಿದರು. ಎಲ್ಲ ನಾಯಕರೂ ಜಮ್ಮು ಕಾಶ್ಮೀರಕ್ಕೆ ಮತ್ತೆ ರಾಜ್ಯದ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಜಮ್ಮು ಕಾಶ್ಮೀರ ನಾಯಕರ ಸಭೆ ಅಂತ್ಯ: ರಾಜ್ಯದ ಸ್ಥಾನಮಾನ ಮರುಸ್ಥಾಪನೆಗೆ ಒತ್ತಾಯ
ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಸಭೆಯಲ್ಲಿ ಪಾಲ್ಗೊಳ್ಳುವ ಮೊದಲು ಗುಪ್ಕಾರ್ ನಾಯಕರು.
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jun 24, 2021 | 9:22 PM

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಜಮ್ಮು ಕಾಶ್ಮೀರದ ರಾಜಕೀಯ ನಾಯಕರ ಜೊತೆಗಿನ ಸುದೀರ್ಘ ಮಾತುಕತೆ ಮುಕ್ತಾಯವಾಗಿದೆ. ಈ ವೇಳೆ ಪ್ರಧಾನಿ ಎದುರು ಐದು ಪ್ರಮುಖ ಬೇಡಿಕೆಗಳನ್ನು ಜಮ್ಮು ಕಾಶ್ಮೀರದ ನಾಯಕರು ಇಟ್ಟರು. ರಾಜ್ಯದ ಸ್ಥಾನಮಾನವನ್ನು ಮತ್ತೆ ನೀಡಬೇಕು, ಪ್ರಜಾಪ್ರಭುತ್ವ ಮರುಸ್ಥಾಪನೆಗಾಗಿ ವಿಧಾನಸಭೆ ಚುನಾವಣೆ ನಡೆಸಬೇಕು, ಕಾಶ್ಮೀರಿ ಪಂಡಿತರಿಗೆ ಕಾಶ್ಮೀರದಲ್ಲಿ ಪುನರ್ವಸತಿ ಕಲ್ಪಿಸಬೇಕು, ರಾಜಕೀಯ ಬಂಧಿಗಳನ್ನು ಬಿಡುಗಡೆ ಮಾಡಬೇಕು, ಸ್ಥಳೀಯ ಆಡಳಿತದ ಬಗ್ಗೆ ಚರ್ಚೆ ನಡೆಯಬೇಕು ಎಂದು ಪ್ರಧಾನಿಯೊಂದಿಗೆ ಗುರುವಾರ ನಡೆದ ಮಾತುಕತೆ ವೇಳೆ ರಾಜಕೀಯ ಮುಖಂಡರು ಮನವಿ ಮಾಡಿದರು.

ಪ್ರಧಾನಿಯೊಂದಿಗೆ ನಡೆದ ಸಭೆ ಸೌಹಾರ್ದಯುತವಾಗಿತ್ತು ಮತ್ತು ನಮ್ಮ ಆಶೋತ್ತರಗಳಿಗೆ ಅನುಗುಣವಾಗಿಯೇ ಇತ್ತು ಎಂದು ಪೀಪಲ್ಸ್​ ಕಾನ್ಫರೆನ್ಸ್​ ಪಕ್ಷದ ನಾಯಕ ಮುಖಾಫರ್ ಹುಸೇನ್ ಬೇಗ್ ಹೇಳಿದರು. ಮಾತುಕತೆಯ ವೇಳೆ ಜಮ್ಮು ಕಾಶ್ಮೀರದಲ್ಲಿ ಸಂಘರ್ಷಗಳು ನಿಲ್ಲಬೇಕು, ಅದು ಶಾಂತಿವಲಯವಾಗಿ ಬದಲಾಗಬೇಕು ಎಂದು ಮೋದಿ ನುಡಿದರು. ಎಲ್ಲ ನಾಯಕರೂ ಜಮ್ಮು ಕಾಶ್ಮೀರಕ್ಕೆ ಮತ್ತೆ ರಾಜ್ಯದ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿದರು. ಈ ಕುರಿತು ಸಭೆಯಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ, ಮೊದಲು ಕ್ಷೇತ್ರ ಪುನರ್​ ವಿಂಗಡಣೆ ನಿರ್ಧಾರ ಪ್ರಕ್ರಿಯೆ ಅಂತಿಮಗೊಳ್ಳಲಿ. ನಂತರ ಇತರ ವಿಚಾರಗಳನ್ನು ಪರಿಶೀಲಿಸಲಾಗುವುದು ಎಂದರು. ಈ ಸಭೆಯು ತೃಪ್ತಿದಾಯಕವಾಗಿತ್ತು. ಜಮ್ಮು ಕಾಶ್ಮೀರದಲ್ಲಿ ಶಾಂತಿ ಮರುಸ್ಥಾಪನೆ ಬಗ್ಗೆ ಒಮ್ಮತದ ಅಭಿಪ್ರಾಯ ವ್ಯಕ್ತವಾಯಿತು ಎಂದು ಬೇಗ್ ತಿಳಿಸಿದರು.

ಸಭೆಗೂ ಮೊದಲು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗುಲಾಮ್ ಅಹ್ಮದ್ ಮಿರ್, ಪ್ರಧಾನಿ ಸಮಕ್ಷಮ ಜಮ್ಮು ಕಾಶ್ಮೀರಕ್ಕೆ ಮತ್ತೆ ರಾಜ್ಯದ ಸ್ಥಾನಮಾನ ನೀಡುವ ಬಗ್ಗೆ ಎಲ್ಲರೂ ಪ್ರಸ್ತಾಪಿಸಲಿದ್ದಾರೆ ಎಂದು ಹೇಳಿದ್ದರು. ಜಮ್ಮು ಕಾಶ್ಮೀರದ ಜನರು 2019ರ ಬೆಳವಣಿಗೆಗಳಿಂದ ಆಘಾತ ಅನುಭವಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದಿನ ಸಭೆಯಲ್ಲಿ ಯಾವೆಲ್ಲಾ ವಿಷಯಗಳನ್ನು ಪ್ರಸ್ತಾಪಿಸಲಿದ್ದಾರೆ ಎಂಬುದನ್ನು ಗಮನಿಸಿ ಪ್ರತಿಕ್ರಿಯಿಸುತ್ತೇವೆ ಎಂದು ಹೇಳಿದ್ದರು.

ಪ್ರಧಾನಿ ನರೇಂದ್ರ ಮೋದಿ ಗುಪ್ಕರ್​ ಮೈತ್ರಿಕೂಟದ ರಾಜಕೀಯ ನಾಯಕರನ್ನು ಭೇಟಿಯಾಗಲು ಮುಂದಾದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು. 2019ರಲ್ಲಿ ಜಮ್ಮು ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನ ಹಿಂಪಡೆದ ನಂತರ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರವು ಅಲ್ಲಿನ ರಾಜಕೀಯ ಮುಖಂಡರ ಜೊತೆಗೆ ಮಾತುಕತೆ ನಡೆಸುತ್ತಿದೆ. ಜೂನ್ 2018ರಿಂದ ಜಾರಿಯಲ್ಲಿರುವ ಕೇಂದ್ರದ ಆಡಳಿತ ಕೊನೆಗಾಣಿಸುವ ನಿಟ್ಟಿನಲ್ಲಿ ಇದು ಮಹತ್ವದ ಕ್ರಮ ಎನಿಸಿದೆ. ಎರಡೂ ಕೇಂದ್ರಾಡಳಿತ ಪ್ರದೇಶಗಳಿಗೆ ವಿಧಾನಸಭೆ ಚುನಾವಣೆ ನಡೆಸಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ.

ಜಮ್ಮು ಕಾಶ್ಮೀರದಲ್ಲಿ ಚುನಾವಣಾ ಪ್ರಕ್ರಿಯೆ ಪುನರ್ ಆರಂಭಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಕ್ಷೇತ್ರ ಪುನರ್ ವಿಂಗಡಣೆ ಬಳಿಕ ವಿಧಾನಸಭೆ ಚುನಾವಣೆ ನಡೆಸಲು ಪ್ರಧಾನಿ ಒಲವು ತೋರಿದರು. ಸಂವಿಧಾನದ 370ನೇ ವಿಧಿ ಪುನರ್ ಸ್ಥಾಪನೆಗೆ ರಾಜಕೀಯ ಪಕ್ಷಗಳು ಒತ್ತಾಯಿಸಿದವು. ಈ ಕುರಿತು ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಲು ಪ್ರಧಾನಿ ಒಪ್ಪಲಿಲ್ಲ. ‘ಈ ಪ್ರಕರಣ ಸುಪ್ರೀಂಕೋರ್ಟ್​ನಲ್ಲಿದೆ. ಹೀಗಾಗಿ ಈ ಬಗ್ಗೆ ಚರ್ಚೆ ಬೇಡ’ ಎಂದು ಪ್ರಧಾನಿ ಅಭಿಪ್ರಾಯಪಟ್ಟರು.

ಶಾಂತಿ ವ್ಯವಸ್ಥೆ ಕಾಪಾಡಲು, ಕ್ಷೇತ್ರ ಪುನರ್ ವಿಂಗಡಣೆಗೆ ಸಹಕಾರ ಕೊಡಿ ಎಂದು ಪ್ರಧಾನಿ ಕೋರಿದರು. ಜಮ್ಮು ಕಾಶ್ಮೀರದಲ್ಲಿ ಪೂರ್ಣ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬದ್ಧ. ದೆಹಲಿ ದೂರ ಎಂಬ ಭಾವನೆ ಬಿಡಿ, ಚುನಾವಣೆ ನಡೆಸುವುದು ಸರ್ಕಾರದ ಆದ್ಯತೆ ಎಂದು ಭರವಸೆ ನೀಡಿದರು. ಸಭೆಯಲ್ಲಿ ಮಾತನಾಡಿದ ಗೃಹ ಸಚಿವ ಅಮಿತ್ ಸಾ, ಜಮ್ಮು ಕಾಶ್ಮೀರಕ್ಕೆ ರಾಜ್ಯದ ಪೂರ್ಣ ಸ್ಥಾನಮಾನ ನೀಡುವ ಭರವಸೆ ನೀಡಿದರು. ಚುನಾವಣೆಗೆ ಯಾವುದೇ ಕಾಲಮಿತಿ ಒಪ್ಪಿಕೊಳ್ಳಲು ಪ್ರಧಾನಿ ಮತ್ತು ಗೃಹ ಸಚಿವರು ಒಪ್ಪಲಿಲ್ಲ.

(Jammu Kashmir Leaders Meeting with PM Narendra Modi ends Gupkar says asked for restoration of statehood)

ಇದನ್ನೂ ಓದಿ: ಜಮ್ಮು ಕಾಶ್ಮೀರಕ್ಕೆ ಸದ್ಯದಲ್ಲೇ ರಾಜ್ಯದ ಸ್ಥಾನಮಾನ; ಯಾವುದೇ ಕಾರಣಕ್ಕೂ ವಿಶೇಷ ಸ್ಥಾನ ನೀಡಲ್ಲ- ಮೋದಿ ಲೆಕ್ಕಾಚಾರವೇನು?

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಸಭೆಯಲ್ಲಿ ಪಾಲ್ಗೊಳ್ಳುತ್ತೇವೆ ಎಂದ ಜಮ್ಮು-ಕಾಶ್ಮೀರ ಗುಪ್ಕಾರ್​ ಮೈತ್ರಿಕೂಟ

ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್