ಜಮ್ಮು ಕಾಶ್ಮೀರದ ಬಂಡಿಪೊರಾದಲ್ಲಿ ಸೇನಾ ವಾಹನ ಕಣಿವೆಗೆ ಬಿದ್ದು 4 ಯೋಧರ ಸಾವು; ಇಬ್ಬರಿಗೆ ಗಂಭೀರ ಗಾಯ
ಜಮ್ಮು ಕಾಶ್ಮೀರದ ಬಂಡಿಪೊರಾದಲ್ಲಿ ಸೇನಾ ವಾಹನ ಕಂದಕಕ್ಕೆ ಬಿದ್ದ ಹಿನ್ನೆಲೆಯಲ್ಲಿ 4 ಸೈನಿಕರು ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಂಡಿಪೋರಾದ ವುಲಾರ್ ವ್ಯೂಪಾಯಿಂಟ್ ಬಳಿ ಸೇನಾ ವಾಹನವೊಂದು ರಸ್ತೆಯಿಂದ ಕೆಳಗಿಳಿದು ಆಳವಾದ ಕಮರಿಗೆ ಉರುಳಿದ ಘಟನೆ ನಡೆದಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಶ್ರೀನಗರ: ಇಂದು (ಜನವರಿ 4) ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭಾರತೀಯ ಸೇನೆಯ ವಾಹನವು ಆಳವಾದ ಕಣಿವೆಗೆ ಬಿದ್ದ ಪರಿಣಾಮ 4 ಯೋಧರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಯೋಧರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಶ್ರೀನಗರಕ್ಕೆ ಸ್ಥಳಾಂತರಿಸಲಾಗಿದೆ.
ಉತ್ತರ ಕಾಶ್ಮೀರದ ಬಂಡಿಪೋರಾದಲ್ಲಿ ಸೇನಾ ವಾಹನ ಕಮರಿಗೆ ಬಿದ್ದು ನಾಲ್ವರು ಸೈನಿಕರ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿರುವುದನ್ನು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಬಂಡಿಪೋರಾ-ಶ್ರೀನಗರ ರಸ್ತೆಯ ಎಸ್‌ಕೆ ಪಯೀನ್ ಬಳಿ ವಾಹನ ಸ್ಕಿಡ್ ಆಗಿ ಆಳವಾದ ಕಮರಿಗೆ ಬಿದ್ದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
STORY | Two soldiers killed, three hurt as Army vehicle falls into gorge in J-K’s Bandipora
READ: https://t.co/ow8ktRi8xO pic.twitter.com/0xGGfY3mEo
— Press Trust of India (@PTI_News) January 4, 2025
ಇದನ್ನೂ ಓದಿ: ಹುತಾತ್ಮನಾದ ಕೊಡಗಿನ ಯೋಧನಿಗೆ ಭಾವಾಪೂರ್ಣ ಬೀಳ್ಕೊಡುಗೆ: ಕುಟುಂಬಸ್ಥರ ಕಣ್ಣೀರು, ಮುಗಿಲುಮುಟ್ಟಿದ ರೋಧನೆ
ಈ ಘಟನೆಯಲ್ಲಿ ಐವರು ಯೋಧರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ಬಂಡಿಪೋರಾಕ್ಕೆ ಕರೆದೊಯ್ಯಲಾಯಿತು, ಅಲ್ಲಿ ಇಬ್ಬರು ಬರುವಾಗಲೇ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ತೀವ್ರವಾಗಿ ಗಾಯಗೊಂಡ ಮೂವರು ಸೈನಿಕರನ್ನು ಚಿಕಿತ್ಸೆಗಾಗಿ ಶ್ರೀನಗರಕ್ಕೆ ಸ್ಥಳಾಂತರಿಸಲಾಗಿದೆ
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:37 pm, Sat, 4 January 25