Pulwama Encounter: ಪುಲ್ವಾಮಾದಲ್ಲಿ ಉಗ್ರರ ಜತೆ ಭದ್ರತಾ ಪಡೆಗಳ ಗುಂಡಿನ ಚಕಮಕಿ; ಮೂವರು ಉಗ್ರರು ಹತ

ಈ ಗುಂಡಿನ ಚಕಮಕಿಯಿಂದ ಎರಡರಿಂದ ಮೂವರು ಉಗ್ರರು ಭದ್ರತಾ ಪಡೆಗಳು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

Pulwama Encounter: ಪುಲ್ವಾಮಾದಲ್ಲಿ ಉಗ್ರರ ಜತೆ ಭದ್ರತಾ ಪಡೆಗಳ ಗುಂಡಿನ ಚಕಮಕಿ; ಮೂವರು ಉಗ್ರರು ಹತ
ಸಾಂದರ್ಭಿಕ ಚಿತ್ರ
Follow us
guruganesh bhat
|

Updated on:Apr 02, 2021 | 12:19 PM

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಭದ್ರತಾ ಪಡೆಗಳು ಮತ್ತು ಉಗ್ರಗಾಮಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಗುಂಡಿನ ಚಕಮಕಿಯಿಂದ ಎರಡರಿಂದ ಮೂವರು ಉಗ್ರರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ನಿನ್ನೆ ರಾತ್ರಿ ದೊರಕಿದ ಮಾಹಿತಿಯನ್ನು ಆಧಾರವಾಗಿಟ್ಟುಕೊಂಡು ಇಂದು ಬೆಳ್ಳಂಬೆಳಗ್ಗೆ ಭದ್ರತಾ ಪಡೆಗಳು ಕಾರ್ಯಾಚರಣೆಗೆ ಇಳಿದವು. ಪುಲ್ವಾಮಾ ಜಿಲ್ಲೆಯ ಕಕಾಪೊರಾ ಪ್ರದೇಶದ ಘಾಟ್ ಮೊಹಲ್ಲಾ ಎಂಬ ಸ್ಥಳದ ಬಳಿ ಈ ಗುಂಡಿನ ಚಕಮಕಿ ನಡೆದಿದೆ ಎಂದು ಆಂಗ್ಲ ಸುದ್ದಿ ಜಾಲತಾಣ ಡಿಎನ್​ಎ ವರದಿ ಮಾಡಿದೆ.

2019ರ ಪುಲ್ವಾಮಾ ದಾಳಿ

ಪಾಕಿಸ್ತಾನದ ಉಗ್ರ 2019ರ ಫೆಬ್ರವರಿ 14ರಂದು ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದ. ಹೆದ್ದಾರಿ ಮೇಲೆ ಸಾಗುತ್ತಿದ್ದ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ವಾಹನಗಳನ್ನು ಗುರಿಯಾಗಿಸಿ ಉಗ್ರ ದಾಳಿ ಮಾಡಿದ್ದ. ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಈ ದಾಳಿಯಲ್ಲಿ 40 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದರು. ಬಳಿಕ, ಉಗ್ರರ ಈ ದುಷ್ಕೃತ್ಯಕ್ಕೆ ತಿರುಗೇಟು ನೀಡಿದ ಭಾರತ, ಫೆ. 26ರಂದು ಪಾಕ್ ಆಕ್ರಮಿತ ಕಾಶ್ಮೀರ ಭಾಗಕ್ಕೆ ತೆರಳಿ ಉಗ್ರರ ಶಿಬಿರಗಳನ್ನು ಹೇಳಹೆಸರಿಲ್ಲದಂತೆ ಮಾಡಿತ್ತು. ಭಾರತೀಯ ವಾಯುಪಡೆ ಮತ್ತು ಭೂಸೇನೆಯ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರರ ಅಟ್ಟಹಾಸವನ್ನು ಹಿಮ್ಮೆಟ್ಟಿಸುವಂತೆ ಶಿಬಿರಗಳನ್ನು ಧ್ವಂಸಗೊಳಿಸಿತ್ತು. ಇಂದಿಗೆ ಪುಲ್ವಾಮ ಘಟನೆ ನಡೆದು 2 ವರ್ಷಗಳಾಗುತ್ತಿವೆ.

ಘಟನೆಯ ದಿನ ಏನಾಗಿತ್ತು? ಅಂದು 78 ವಾಹನಗಳಲ್ಲಿ 2500 ಸಿಆರ್​ಪಿಎಫ್ ಯೋಧರು ಜಮ್ಮುವಿನಿಂದ ಶ್ರೀನಗರಕ್ಕೆ ತೆರಳುತ್ತಿದ್ದರು. ಕೇಂದ್ರ ಪೊಲೀಸ್ ಮೀಸಲು ಪಡೆಯ ಸಿಬ್ಬಂದಿ ರಜೆ ಮುಗಿಸಿ ಕರ್ತವ್ಯಕ್ಕೆ ಪುನಃ ಕಣಿವೆಗೆ ಮರಳುತ್ತಿದ್ದರು. 78 ವಾಹನಗಳಿಗೆ ಬೆಂಗಾವಲಾಗಿದ್ದ CRPF ಯೋಧರ ಬಸ್ಸುಗಳು ಶ್ರೀನಗರ-ಜಮ್ಮು ಹೆದ್ದಾರಿಯಲ್ಲಿ ಆವಂತಿಪುರದ ಲಾಟೂಮೋಡೆ ಎಂಬಲ್ಲಿಗೆ ತಲುಪಿತ್ತು.

ಆ ವೇಳೆ, ಹೆದ್ದಾರಿಯ ಎಡ ಮಾರ್ಗದಲ್ಲಿ ಸ್ಪೋಟಕಗಳನ್ನು ಹೊಂದಿದ್ದ ಬಸ್ ಒಂದು ಆಗಮಿಸಿತು. ಭಾರತೀಯ ಸೇನೆ ಬೆಂಗಾವಲು ಪಡೆಯ ಬಸ್​ನ್ನು ಹಿಂದಿಕ್ಕಿ, ಢಿಕ್ಕಿ ಹೊಡೆದು ಸ್ಫೋಟಗೊಂಡಿತು. ಈ ಭೀಕರ ಆತ್ಮಾಹುತಿ ದಾಳಿಗೆ ಸೇನಾ ವಾಹನಗಳು ಭಸ್ಮಗೊಂಡವು. 40 ಯೋಧರು ಹುತಾತ್ಮರಾದರು. 35 ಮಂದಿ ಗಾಯಗೊಂಡರು.

ಪುಲ್ವಾಮದ ಅವಂತಿಪುರದ ಬಳಿ, ಮಧ್ಯಾಹ್ನ 3.15ರ ವೇಳೆಗೆ ವರದಿಯಾದ ಈ ದಾಳಿಯಲ್ಲಿ ಒಂದು ಬಸ್​ನಲ್ಲಿದ್ದ 40ರಷ್ಟು ಯೋಧರು ಮೃತಪಟ್ಟಿದ್ದರು. 80 ಕೆ.ಜಿ.ಯಷ್ಟು ಸ್ಫೋಟಕಗಳನ್ನು ದಾಳಿಗೆ ಬಳಸಲಾಗಿತ್ತು. 1989ರ ಬಳಿಕ ಯೋಧರನ್ನು ಗುರಿಯಾಗಿಸಿ, ಭಯೋತ್ಪಾದಕರು ನಡೆಸಿದ ಅತಿ ಭೀಕರ ದಾಳಿ ಇದಾಗಿತ್ತು.

ಇದನ್ನೂ ಓದಿ: ಬಾಲಾಕೋಟ್​ ದಾಳಿಗೆ 2 ವರ್ಷ: ವೈರಿ ನೆಲದಲ್ಲೂ ಮುಗುಳ್ನಗುತ್ತಿದ್ದ ಧೀರ ಅಭಿನಂದನ್​ ವರ್ಧಮಾನ್

ಬಾಲಾಕೋಟ್ ದಾಳಿಗೆ 2 ವರ್ಷ: ಭಾರತ-ಪಾಕ್ ನಡುವೆ ಹೊಸ ಕದನವಿರಾಮ ಒಪ್ಪಂದ; ಬದ್ಧವಾಗಿರುವುದೇ ಪಾಕ್?

(Jammu Kashmir Pulwama Encounter 2 to 3 terrorists trapped)

Published On - 12:12 pm, Fri, 2 April 21

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ