ಶ್ರೀನಗರ, ನವೆಂಬರ್ 2: ಜಮ್ಮು ಮತ್ತು ಕಾಶ್ಮೀರದ ಎರಡು ಕಡೆಗಳಲ್ಲಿ ಭದ್ರತಾ ಸಿಬ್ಬಂದಿ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು ಈ ವೇಳೆ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹತ್ಯೆ ಮಾಡಿವೆ. ನಾಲ್ವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಶ್ರೀನಗರ ಜಿಲ್ಲೆಯ ಖನ್ಯಾರ್‌ನಲ್ಲಿ ಶನಿವಾರ ಮುಂಜಾನೆಯಿಂದ ಎನ್‌ಕೌಂಟರ್ ನಡೆಯುತ್ತಿದೆ. ಈ ವೇಳೆ ಓರ್ವ ಉಗ್ರನನ್ನು ಭದ್ರತಾ ಪಡೆ ಹತ್ಯೆ ಮಾಡಿದೆ. ಮೂಲಗಳ ಪ್ರಕಾರ ಈ ಪ್ರದೇಶದಲ್ಲಿ ಇಬ್ಬರು ಉಗ್ರರು ಅಡಗಿರುವ ಸಾಧ್ಯತೆ ಇದೆ. ಖನ್ಯಾರ್ ವಸತಿ ಪ್ರದೇಶವಾಗಿದೆ, ಭದ್ರತಾ ಪಡೆಗಳು ಹಾನಿಯನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿವೆ, ಇದರ ಪರಿಣಾಮವಾಗಿ ಕಾರ್ಯಾಚರಣೆ ನಿಧಾನವಾಗುತ್ತಿದೆ.
ದಕ್ಷಿಣ ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಲಾರ್ನುದಲ್ಲಿ ಮತ್ತೊಂದು ಎನ್‌ಕೌಂಟರ್ ನಡೆದಿದ್ದು, ಇದರಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆ ಖಚಿತಪಡಿಸಿದೆ. ಈ ಮೂಲಕ ಒಟ್ಟು ಮೂವರು ಉಗ್ರರನ್ನು ಭದ್ರತಾ ಪಡೆ ಹತ್ಯೆ ಮಾಡಿದಂತಾಗಿದೆ.
ಶುಕ್ರವಾರ ಸಂಜೆ ಮಧ್ಯ ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಸೇನಾ ವಾಹನದ ಮೇಲೆ ಗುಂಡಿನ ದಾಳಿಯ ಘಟನೆಯ ನಂತರ ಬಂಡಿಪೋರಾದಲ್ಲಿ ದೊಡ್ಡ ಪ್ರಮಾಣದ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈ ಮಧ್ಯೆ, ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಮಗಮ್‌ನಲ್ಲಿ ಕಳೆದ ರಾತ್ರಿ ಭಯೋತ್ಪಾದಕರು ಇಬ್ಬರು ವಲಸೆ ಕಾರ್ಮಿಕರ ಮೇಲೆ ದಾಳಿ ಮಾಡಿ ಗಾಯಗೊಳಿಸಿದ್ದಾರೆ. ಇದರ ಉಗ್ರರನ್ನು ಹುಡುಕಲು ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಶ್ರೀನಗರದಲ್ಲಿ ಶನಿವಾರ ಬೆಳಿಗ್ಗೆಯಿಂದ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ 4 ಮಂದಿ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಇದರಲ್ಲಿ ಜಮ್ಮು ಕಾಶ್ಮೀರ ಪೊಲೀಸ್ ವಿಶೇಷ ಕಾರ್ಯಾಚರಣೆ ಗುಂಪಿನ ಇಬ್ಬರು ಮತ್ತು ಸಿಆರ್‌ಪಿಎಫ್ ಕ್ವಿಕ್ ಆಕ್ಷನ್ ಟೀಮ್‌ನ ಇಬ್ಬರು ಯೋಧರು ಸೇರಿದ್ದಾರೆ. ಶ್ರೀನಗರದಲ್ಲಿ ಸುಮಾರು 7 ಗಂಟೆಗಳಿಂದ ಎನ್‌ಕೌಂಟರ್ ನಡೆಯುತ್ತಿದೆ.
ಇದನ್ನೂ ಓದಿ: ಅಮಿತ್ ಶಾ ವಿರುದ್ಧದ ಆರೋಪ: ಕೆನಡಾ ಹೈಕಮಿಷನರ್ ಕರೆಸಿ ಭಾರತ ತೀವ್ರ ಆಕ್ರೋಶ
ಈ ಪ್ರದೇಶದಲ್ಲಿ ಭಯೋತ್ಪಾದಕರ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಪಡೆದ ನಂತರ, ಭದ್ರತಾ ಪಡೆಗಳು ಬೆಳಿಗ್ಗೆ ಖನ್ಯಾರ್‌ನಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು ಎಂದು ಸೇನಾ ಮೂಲಗಳು ಹೇಳಿವೆ. ಶೋಧ ಕಾರ್ಯಾಚರಣೆಯು ಎನ್‌ಕೌಂಟರ್‌ಗೆ ತಿರುಗಿತು. ಭಯೋತ್ಪಾದಕರು ಸೇನಾ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದರು, ನಂತರ ಪ್ರತಿ ದಾಳಿ ನಡೆಸಲಾಯಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ