AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರ: ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ಟ್ರಕ್​​, ಮೂವರು ಸಾವು

ಟ್ರಕ್​​ವೊಂದು ಸ್ಕಿಡ್ ಆಗಿ ಕಮರಿಗೆ ಬಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಮ್ಮು-ಕಾಶ್ಮೀರದ ಉಧಮ್‌ಪುರ ಜಿಲ್ಲೆಯ ದುಡು ಪ್ರದೇಶದಲ್ಲಿ ನಡೆದಿದೆ. ಈ ಘಟನೆಯಿಂದ ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಜಮ್ಮು-ಕಾಶ್ಮೀರ: ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ಟ್ರಕ್​​, ಮೂವರು ಸಾವು
ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ಟ್ರಕ್
ಅಕ್ಷಯ್​ ಪಲ್ಲಮಜಲು​​
|

Updated on: Aug 24, 2023 | 11:22 AM

Share

ಉಧಮ್‌ಪುರ, ಆ.24: ಟ್ರಕ್​​ವೊಂದು ಸ್ಕಿಡ್ ಆಗಿ ಕಮರಿಗೆ ಬಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಮ್ಮು-ಕಾಶ್ಮೀರದ (Jammu and Kashmir) ಉಧಮ್‌ಪುರ ಜಿಲ್ಲೆಯ ದುಡು ಪ್ರದೇಶದಲ್ಲಿ ನಡೆದಿದೆ. ಈ ಘಟನೆಯಿಂದ ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಟ್ರಕ್​ ಉಧಂಪುರದಿಂದ ದುಡು ಕಡೆಗೆ ಹೋಗುತ್ತಿದ್ದಾಗ ದುಡು ಸೆಕ್ಟರ್‌ನ ಬಟ್ಟು ನಾಲಾ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದಿದೆ ಎಂದು ಪೊಲೀಸರು ಹೇಳಿದ್ದಾರೆ.

ವರದಿಗಳ ಪ್ರಕಾರ, ಗಾಯಾಳು ಇನ್ನೂ ವಾಹನದ ಅಡಿಯಲ್ಲಿ ಸಿಲುಕಿಕೊಂಡಿದ್ದು, ಪೊಲೀಸರು ಮತ್ತು ಸ್ಥಳೀಯ ಜನರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ. ಕಳೆದ ವಾರ, ಉಧಂಪುರ ಜಿಲ್ಲೆಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಿನಿಬಸ್ ಕಮರಿಗೆ ಬಿದ್ದು,10 ಮಹಿಳೆಯರು ಸೇರಿದಂತೆ ಹದಿಮೂರು ಯಾತ್ರಿಕರು ಗಾಯಗೊಂಡಿದ್ದರು.

ಇದನ್ನೂ ಓದಿ:ಜಮ್ಮು-ಕಾಶ್ಮೀರದಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗ ಕುಸಿತ , 4 ಜನರಿಗೆ ಗಾಯ

ಮಿನಿಬಸ್ ಕಿಶ್ತ್ವಾರ್ ಜಿಲ್ಲೆಯ ಪದ್ದರ್ ಬೆಲ್ಟ್‌ನಿಂದ ಜಮ್ಮುವಿಗೆ ಮಚೈಲ್ ಮಾತಾ ಯಾತ್ರೆಯ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿತ್ತು ಎಂದು ಹೇಳಲಾಗಿತ್ತು. ಗಾಯಾಳುಗಳನ್ನು ಉಧಂಪುರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರನ್ನು ಜಮ್ಮುವಿನ ಜಿಎಂಸಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದರು.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ  

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ