AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ ಪ್ರದೇಶ ಚುನಾವಣೆಯಲ್ಲಿ ಪಿಠಾಪುರಂನಿಂದ ಕಣಕ್ಕಿಳಿಯಲಿದ್ದಾರೆ ಪವನ್ ಕಲ್ಯಾಣ್

ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷವು ರಾಜ್ಯದಲ್ಲಿ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಮತ್ತು ಕೇಂದ್ರದಲ್ಲಿ ಬಿಜೆಪಿಯೊಂದಿಗೆ ರಾಜ್ಯ ಮತ್ತು ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಂಡಿದೆ. ಏತನ್ಮಧ್ಯೆ ಪವನ್ ಕಲ್ಯಾಣ್ ಅವರು ರಾಜ್ಯದಿಂದ ಸ್ಪರ್ಧಿಸಲು ಬಯಸುವುದಾಗಿ ಘೋಷಿಸಿದ್ದು, ಪಿಠಾಪುರಂನಿಂದ ಕಣಕ್ಕಿಳಿಯಲಿದ್ದಾರೆ.

ಆಂಧ್ರ ಪ್ರದೇಶ ಚುನಾವಣೆಯಲ್ಲಿ ಪಿಠಾಪುರಂನಿಂದ ಕಣಕ್ಕಿಳಿಯಲಿದ್ದಾರೆ ಪವನ್ ಕಲ್ಯಾಣ್
ಪವನ್ ಕಲ್ಯಾಣ್
ರಶ್ಮಿ ಕಲ್ಲಕಟ್ಟ
|

Updated on: Mar 14, 2024 | 4:59 PM

Share

ಹೈದರಾಬಾದ್ ಮಾರ್ಚ್ 14: ಜನ ಸೇನಾ ಪಕ್ಷದ (Jana Sena Party) ಮುಖ್ಯಸ್ಥ ಮತ್ತು ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ (Pawan Kalyan) , ಈ ವರ್ಷ ನಡೆಯಲಿರುವ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ (Andhra Pradesh assembly election) ಪಿಠಾಪುರಂನಿಂದ (Pithapuram) ಸ್ಪರ್ಧಿಸುವುದಾಗಿ ಗುರುವಾರ ಘೋಷಿಸಿದ್ದಾರೆ. ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷವು ರಾಜ್ಯದಲ್ಲಿ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಮತ್ತು ಕೇಂದ್ರದಲ್ಲಿ ಬಿಜೆಪಿಯೊಂದಿಗೆ ರಾಜ್ಯ ಮತ್ತು ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಂಡಿದೆ. ಆದರೆ ಪವನ್ ಕಲ್ಯಾಣ್ ಅವರು ರಾಜ್ಯದಿಂದ ಸ್ಪರ್ಧಿಸಲು ಬಯಸುವುದಾಗಿ ಘೋಷಿಸಿದರು. 2019 ರಲ್ಲಿ, ಪವನ್ ಕಲ್ಯಾಣ್ ಗಜುವಾಕ ಮತ್ತು ಭೀಮಾವರಂ ಎಂಬ ಎರಡು ಸ್ಥಾನಗಳಿಂದ ಸ್ಪರ್ಧಿಸಿದ್ದು, ವೈಎಸ್‌ಆರ್‌ಸಿ ಅಭ್ಯರ್ಥಿಗಳ ವಿರುದ್ಧ ಪರಾಭವಗೊಂಡಿದ್ದರು.

ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಸೀಟು ಹಂಚಿಕೆ ಒಪ್ಪಂದದಲ್ಲಿ, ಆಂಧ್ರಪ್ರದೇಶದಲ್ಲಿ ಬಿಜೆಪಿ 6 ಲೋಕಸಭಾ ಸ್ಥಾನಗಳು ಮತ್ತು 10 ವಿಧಾನಸಭಾ ಸ್ಥಾನಗಳನ್ನು ಪಡೆಯುತ್ತದೆ. ಟಿಡಿಪಿ 17 ಲೋಕಸಭಾ ಸೀಟು ಮತ್ತು 144 ವಿಧಾನಸಭಾ ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.ಪವನ್ ಕಲ್ಯಾಣ್ ಅವರ ಪಕ್ಷವು ಎರಡು ಲೋಕಸಭೆ ಮತ್ತು 21 ವಿಧಾನಸಭಾ ಸ್ಥಾನಗಳನ್ನು ಗೆದ್ದಿದೆ. ಆಂಧ್ರಪ್ರದೇಶವು 25 ಲೋಕಸಭೆ ಮತ್ತು 175 ವಿಧಾನಸಭಾ ಸ್ಥಾನಗಳನ್ನು ಹೊಂದಿದೆ.

ಸೀಟು ಹಂಚಿಕೆ ಒಪ್ಪಂದದ ನಂತರ, ಮೂರು ಪಕ್ಷಗಳು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿಯ ನಾಯಕತ್ವದಲ್ಲಿ ನಂಬಿಕೆ ಇರಿಸುವ ಜಂಟಿ ಹೇಳಿಕೆಯನ್ನು ನೀಡಿವೆ. “ನರೇಂದ್ರ ಮೋದಿ ಜಿ ಕಳೆದ 10 ವರ್ಷಗಳಿಂದ ರಾಷ್ಟ್ರದ ಅಭಿವೃದ್ಧಿ ಮತ್ತು ಪ್ರಗತಿಗಾಗಿ ಅವಿರತವಾಗಿ ಶ್ರಮಿಸುತ್ತಿದ್ದಾರೆ ಮತ್ತು ಟಿಡಿಪಿ ಮತ್ತು ಜೆಎಸ್‌ಪಿ ಜೊತೆಗೂಡುವುದರಿಂದ ಆಂಧ್ರಪ್ರದೇಶದ ಜನರ ಆಶೋತ್ತರಗಳನ್ನು ತಲುಪಲು ಸಹಾಯ ಮಾಡುತ್ತದೆ. ಬಿಜೆಪಿ ಮತ್ತು ಟಿಡಿಪಿ ನಡುವಿನ ಸಂಬಂಧ ಹಳೇದು. 1996 ರಲ್ಲಿ ಟಿಡಿಪಿ ಎನ್‌ಡಿಎಗೆ ಸೇರ್ಪಡೆಗೊಂಡಿತು. ಇದು ಅಟಲ್ ಜಿ ಮತ್ತು ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಒಟ್ಟಿಗೆ ಕೆಲಸ ಮಾಡಿದೆ. 2014 ರಲ್ಲಿ ಟಿಡಿಪಿ ಮತ್ತು ಬಿಜೆಪಿ ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಒಟ್ಟಿಗೆ ಸ್ಪರ್ಧಿಸಿದ್ದವು. ಆಂಧ್ರಪ್ರದೇಶದಲ್ಲಿ 2014 ರ ಸಾರ್ವತ್ರಿಕ ಜಾಹೀರಾತು ವಿಧಾನಸಭೆ ಚುನಾವಣೆಗೆ ಜೆಎಸ್‌ಪಿ ಬೆಂಬಲ ನೀಡಿತ್ತು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪವನ್ ಕಲ್ಯಾಣ್ ಟ್ವೀಟ್

ಪಿಠಾಪುರಂ ವಿಧಾನಸಭಾ ಕ್ಷೇತ್ರವು ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಅಡಿಯಲ್ಲಿ ಬರುತ್ತದೆ. ಇದನ್ನು ಪ್ರಸ್ತುತ ವೈಎಸ್‌ಆರ್‌ಸಿ ಪ್ರತಿನಿಧಿಸುತ್ತದೆ.

ಇದನ್ನೂ ಓದಿ: ಶರದ್ ಪವಾರ್ ಹೆಸರು, ಚಿತ್ರ ಬಳಸಿದ್ದಕ್ಕೆ ಅಜಿತ್ ಪವಾರ್ ಬಣವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್

ಚಿರಂಜೀವಿ ಅವರ ಸಹೋದರ ಪವನ್ ಕಲ್ಯಾಣ್ 2008 ರಲ್ಲಿ ಚಿರಂಜೀವಿ ಅವರ ಪ್ರಜಾರಾಜ್ಯಂ ಪಕ್ಷದ ಯುವ ಘಟಕದ ಅಧ್ಯಕ್ಷರಾಗಿ ರಾಜಕೀಯಕ್ಕೆ ಪ್ರವೇಶಿಸಿದರು. 2014 ರಲ್ಲಿ, ಪವನ್ ಕಲ್ಯಾಣ್ ಜನಸೇನಾ ಪಕ್ಷವನ್ನು ರಚಿಸಿದ್ದು, ಆ ವರ್ಷ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ. 2019 ರಲ್ಲಿ, ಜನಸೇನಾ ಚುನಾವಣೆಯಲ್ಲಿ ಸ್ಪರ್ಧಿಸಿ ಕೇವಲ ಒಂದು ಸ್ಥಾನವನ್ನು ಗೆದ್ದಿತು. ಪವನ್ ಕಲ್ಯಾಣ್ ಅವರು ಸ್ಪರ್ಧಿಸಿದ್ದ ಎರಡೂ ಸ್ಥಾನಗಳನ್ನು ಕಳೆದುಕೊಂಡರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!