Japan G7 Summit: ಹಿರೋಷಿಮಾದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

ಜಪಾನ್‌ ಜಿ7 ಶೃಂಗಸಭೆಯಲ್ಲಿ (Japan G7 Summit) ಪಾಲ್ಗೊಂಡ ಪ್ರಧಾನಿ ಮೋದಿ ಅವರು ಜಪಾನ್‌ನ ಹಿರೋಷಿಮಾದಲ್ಲಿ ಇಂದು (ಮೇ20) ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಅನಾವರಣಗೊಳಿಸಿದರು.

Japan G7 Summit: ಹಿರೋಷಿಮಾದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ
ಜಪಾನ್‌ನ ಹಿರೋಷಿಮಾದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ಅನಾವರಣಗೊಳಿಸಿದ ಮೋದಿ
Follow us
ಅಕ್ಷಯ್​ ಪಲ್ಲಮಜಲು​​
|

Updated on: May 20, 2023 | 9:55 AM

ಹಿರೋಷಿಮಾ: ಜಪಾನ್‌ ಜಿ7 ಶೃಂಗಸಭೆಯಲ್ಲಿ (Japan G7 Summit) ಪಾಲ್ಗೊಂಡ ಪ್ರಧಾನಿ ಮೋದಿ ಅವರು ಜಪಾನ್‌ನ ಹಿರೋಷಿಮಾದಲ್ಲಿ ಇಂದು (ಮೇ20) ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಪ್ರತಿಮೆಯನ್ನು ಅನಾವರಣಗೊಳಿಸಿದ ನಂತರ, ಪ್ರಧಾನಿ ಮೋದಿ ಅವರು ಮಹಾತ್ಮ ಗಾಂಧಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು. ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರ ಜಿ7 ಶೃಂಗಸಭೆಗೆ ಪ್ರಧಾನಿ ಮೋದಿ ಅವರನ್ನು ಶುಕ್ರವಾರ (ಮೇ19) ಸ್ವಾಗತಿಸಿದರು. ಪ್ರಧಾನಿ ಮೋದಿ ಅವರಿಗೆ ಜಪಾನಿನ ಅಧ್ಯಕ್ಷರು ಉಡುಗೊರೆಯಾಗಿ ಬೋಧಿ ವೃಕ್ಷವನ್ನು ನೀಡಿದರು. ನನಗೆ ಇದು ಒಂದು ಉತ್ತಮ ಕ್ಷಣವಾಗಿದೆ, ನಾನು ಜಪಾನ್​​ಗೆ ಬಂದಾಗೆಲ್ಲ ಇಲ್ಲಿಯ ಜನರ ಶಾಂತಿ ಮಹತ್ವವನ್ನು ಅರ್ಥಮಾಡಿಕೊಳ್ಳಬಹುದು. ಜಪನ್​​​ನಲ್ಲಿ ನಾನು ಮಹಾತ್ಮ ಗಾಂಧಿಯವರಿಗೆ ನನ್ನ ಗೌರವವನ್ನು ಸಲ್ಲಿಸಿರುವುದು ಒಂದು ದೊಡ್ಡ ಗೌರವ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಮೇ 19-21ರವರೆಗೆ ಹಿರೋಷಿಮಾದಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬೇರೆರ ಬೇರೆ ದೇಶ ನಾಯಕರು ಜಪಾನ್‌ನಲ್ಲಿದ್ದಾರೆ. ಜಪಾನ್ 2023ರಲ್ಲಿ G7 ಅಧ್ಯಕ್ಷತೆಯನ್ನು ವಹಿಸಿಕೊಂಡಿದೆ. ಶೃಂಗಸಭೆಯು G7 ಸದಸ್ಯ ರಾಷ್ಟ್ರಗಳಾದ ಫ್ರಾನ್ಸ್, ಯುನೈಟೆಡ್ ಸ್ಟೇಟ್ಸ್, ಯುನೈಟೆಡ್ ಕಿಂಗ್‌ಡಮ್, ಜರ್ಮನಿ, ಜಪಾನ್, ಇಟಲಿ ಮತ್ತು ಕೆನಡಾ ಮತ್ತು ಯುರೋಪಿಯನ್ ಯೂನಿಯನ್ (EU) ನಾಯಕರಿಗೆ ಇದು ವಾರ್ಷಿಕವಾಗಿ ನಡೆಯುವ ಅಂತರರಾಷ್ಟ್ರೀಯ ವೇದಿಕೆಯಾಗಿದೆ.

ಪ್ರಧಾನಿ ಮೋದಿ ಶುಕ್ರವಾರ ನಗರಕ್ಕೆ ಆಗಮಿಸುತ್ತಿದ್ದಂತೆ ಜಪಾನ್‌ನಲ್ಲಿರುವ ಭಾರತೀಯ ವಲಸೆಗಾರರು ಹಿರೋಷಿಮಾದ ಹೋಟೆಲ್‌ನಲ್ಲಿ ಜಮಾಯಿಸಿದ್ದು. “ಭಾರತ್ ಮಾತಾ ಕಿ ಜೈ” ಮತ್ತು “ವಂದೇ ಮಾತರಂ” ಎಂದು ಹರ್ಷೋದ್ಗಾರ ಹಾಕಿದರು. ಅಲ್ಲದೇ ಪ್ರಧಾನಿ ಮೋದಿಗೂ ಅಭಿನಂದಿಸಿದರು.

ಇದನ್ನೂ ಓದಿ: PM Modi in Japan: ಜಪಾನ್‌ನಲ್ಲಿ ನೆಲೆಸಿರುವ ಭಾರತೀಯರನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

G7 ಸಭೆಯಲ್ಲಿ ಜಪಾನ್, ಇಟಲಿ, ಕೆನಡಾ, ಫ್ರಾನ್ಸ್, US, UK ಮತ್ತು ಜರ್ಮನಿಯನ್ನು ಒಳಗೊಂಡಿದೆ. ಜಪಾನ್ ತನ್ನ G7 ಅಧ್ಯಕ್ಷತೆಯಲ್ಲಿ ಆಸ್ಟ್ರೇಲಿಯಾ, ಬ್ರೆಜಿಲ್, ಕೊಮೊರೊಸ್, ಕುಕ್ ದ್ವೀಪಗಳು, ಭಾರತ, ಇಂಡೋನೇಷ್ಯಾ, ದಕ್ಷಿಣ ಕೊರಿಯಾ ಮತ್ತು ವಿಯೆಟ್ನಾಂನಿಂದ ನಾಯಕರನ್ನು ಆಹ್ವಾನಿಸಿದೆ.

ಜಿ7 ಶೃಂಗಸಭೆಗೆ ಭಾರತವನ್ನು ಅತಿಥಿ ರಾಷ್ಟ್ರವಾಗಿ ಆಹ್ವಾನಿಸಲಾಗಿದೆ. G7 ಶೃಂಗಸಭೆಯ ಪ್ರಾಶಸ್ತ್ಯಗಳ ವಿಶಾಲವಾದ ನಿಯಮಗಳೆಂದರೆ, ಆಹ್ವಾನಿತ ಅತಿಥಿ ರಾಷ್ಟ್ರಗಳೊಂದಿಗಿನ ಸಂಪರ್ಕಕ್ಕೆ ಸಂಬಂಧಿಸಿದಂತೆ ಪರಮಾಣು ನಿಶ್ಯಸ್ತ್ರೀಕರಣ, ಆರ್ಥಿಕ ಸ್ಥಿತಿಸ್ಥಾಪಕತ್ವ ಮತ್ತು ಆರ್ಥಿಕ ಭದ್ರತೆ, ಪ್ರಾದೇಶಿಕ ಸಮಸ್ಯೆಗಳು, ಹವಾಮಾನ ಮತ್ತು ಶಕ್ತಿ, ಆಹಾರ ಮತ್ತು ಆರೋಗ್ಯ ಮತ್ತು ಅಭಿವೃದ್ಧಿ ಬಗ್ಗೆ ಚರ್ಚಿಸಲಾಗುತ್ತದೆ.

156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ