ಭಾರತದ ಯುಪಿಐ ಪಾವತಿ ವ್ಯವಸ್ಥೆ ಅಳವಡಿಕೆಗೆ ಮುಂದಾದ ಜಪಾನ್; ಧನ್ಯವಾದ ಹೇಳಿದ ಅಶ್ವಿನಿ ವೈಷ್ಣವ್

ಭಾರತೀಯ ಯುಪಿಐ ಪಾವತಿ ವ್ಯವಸ್ಥೆಗೆ ಸೇರುವ ಬಗ್ಗೆ ದೇಶವು ಗಂಭೀರವಾಗಿ ಚಿಂತನೆ ನಡೆಸುತ್ತಿದೆ ಎಂದು ಜಪಾನಿನ ಡಿಜಿಟಲ್ ಸಚಿವ ಕೊನೊ ತಾರೊ ಅಲ್ಲಿನ ಮಾಧ್ಯಮ ‘ವಿಯಾನ್​​’ಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.

ಭಾರತದ ಯುಪಿಐ ಪಾವತಿ ವ್ಯವಸ್ಥೆ ಅಳವಡಿಕೆಗೆ ಮುಂದಾದ ಜಪಾನ್; ಧನ್ಯವಾದ ಹೇಳಿದ ಅಶ್ವಿನಿ ವೈಷ್ಣವ್
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: May 19, 2023 | 8:35 PM

ನವದೆಹಲಿ: ಜಿ 20, ಎಸ್‌ಸಿಒ ಅಥವಾ ಜಿ7 ಆಗಿರಲಿ, ಪ್ರತಿಯೊಂದು ಜಾಗತಿಕ ವೇದಿಕೆಯೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಡಿಜಿಟಲ್ ಇಂಡಿಯಾ (Digital India) ದೃಷ್ಟಿಕೋನದತ್ತ ಸೆಳೆತ ಹೊಂದಿವೆ ಎಂದು ಕೇಂದ್ರ ದೂರಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಹೇಳಿದರು. ಮೋದಿ ಅವರು ಡಿಜಿಟಲ್ ತಂತ್ರಜ್ಞಾನವನ್ನು ಹೇಗೆ ಪ್ರಜಾಪ್ರಭುತ್ವಗೊಳಿಸಿದ್ದಾರೆ ಎಂಬುದನ್ನು ಜನರು ಅರ್ಥಮಾಡಿಕೊಂಡಿದ್ದಾರೆ. ಮೋದಿಯವರ ‘ಡಿಜಿಟಲ್ ಇಂಡಿಯಾ’ದ ದೂರದೃಷ್ಟಿತ್ವದ ದೃಷ್ಟಿಕೋನವನ್ನು ಒಪ್ಪಿಕೊಂಡು ಯುಪಿಐ ಪಾವತಿ ವ್ಯವಸ್ಥೆಯನ್ನು (UPI) ಸ್ವೀಕರಿಸುತ್ತಿರುವುದಕ್ಕೆ ಜಪಾನಿನ ಡಿಜಿಟಲ್ ಸಚಿವ ಕೊನೊ ತಾರೊ ಅವರಿಗೆ ಧನ್ಯವಾದ ಹೇಳುತ್ತೇನೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಭಾರತದ ಯುಪಿಐ ಪಾವತಿ ವ್ಯವಸ್ಥೆ ಅಳವಡಿಸಿಕೊಳ್ಳುವ ಬಗ್ಗೆ ಜಪಾನಿನ ಡಿಜಿಟಲ್ ಸಚಿವ ಕೊನೊ ತಾರೊ ಅಲ್ಲಿನ ಮಾಧ್ಯಮ ‘ವಿಯಾನ್​​’ಗೆ ನೀಡಿರುವ ಹೇಳಿಕೆಯ ವಿಡಿಯೋ ತುಣುಕನ್ನೂ ವೈಷ್ಣವ್ ಟ್ವೀಟ್ ಮಾಡಿದ್ದಾರೆ. ಜತೆಗೆ, ಭಾರತವು ಜಗತ್ತಿಗೆ ನೀಡಿದ ಕೊಡುಗೆ ಇದು ಎಂದು ಉಲ್ಲೇಖಿಸಿದ್ದಾರೆ.

ಜಪಾನ್‌ನ ಹಿರೋಷಿಮಾದಲ್ಲಿ ಜಿ7 ಶೃಂಗಸಭೆಗೆ ಮುನ್ನ ಮಾತನಾಡಿದ ಕೊನೊ ತಾರೊ, ಭಾರತೀಯ ಯುಪಿಐ ಪಾವತಿ ವ್ಯವಸ್ಥೆಗೆ ಸೇರುವ ಬಗ್ಗೆ ದೇಶವು ಗಂಭೀರವಾಗಿ ಚಿಂತನೆ ನಡೆಸುತ್ತಿದೆ ಎಂದು ಹೇಳಿದ್ದಾರೆ. ಎರಡೂ ರಾಷ್ಟ್ರಗಳು ತಮ್ಮ ಡಿಜಿಟಲ್ ಸಂಬಂಧಗಳನ್ನು ವಿಸ್ತರಿಸಲು ಸಜ್ಜಾಗಿವೆ. ಯುಪಿಐ ವ್ಯವಸ್ಥೆಯು ಗಡಿಯಾಚೆಗಿನ ಪಾವತಿಗಳನ್ನು ಸಕ್ರಿಯಗೊಳಿಸುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: PLI scheme: ಮೋದಿ ಸರ್ಕಾರದಿಂದ ಐಟಿ ಕ್ಷೇತ್ರಕ್ಕೆ ಪಿಎಲ್​ಐ ಯೋಜನೆಯಡಿ 17,000 ಕೋಟಿ ರೂ; ಅಶ್ವಿನಿ ವೈಷ್ಣವ್

ಭಾರತೀಯ ಯುಪಿಐ ಪಾವತಿ ವ್ಯವಸ್ಥೆಗೆ ಸೇರಲು ಗಂಭೀರವಾಗಿ ಚಿಂತನೆ ಮಾಡಲಾಗುತ್ತಿದೆ. ಡಿಜಿಟಲ್ ಮಾಹಿತಿಯ ವಿನಿಮಯವನ್ನು ಹೆಚ್ಚಿಸಲು ರಾಷ್ಟ್ರವು ಇ-ಐಡಿಯನ್ನು ಪರಸ್ಪರ ಗುರುತಿಸುವ ಬಗ್ಗೆ ಯೋಚಿಸುತ್ತಿದೆ ಎಂದು ಜಪಾನ್ ಸಚಿವರು ಹೇಳಿದ್ದಾರೆ. ಕಳೆದ ತಿಂಗಳು ಸಚಿವ ಅಶ್ವಿನಿ ವೈಷ್ಣವ್ ಭಾಗವಹಿಸಿದ್ದ ಜಿ-7 ಡಿಜಿಟಲ್ ಸಚಿವರ ಸಭೆಯನ್ನು ಪ್ರಸ್ತಾಪಿಸಿದ ಕೊನೊ ತಾರೊ, ಡಿಜಿಟಲ್ ಸಹಕಾರವನ್ನು ಉತ್ತೇಜಿಸಲು ಉಭಯ ದೇಶಗಳು ಪ್ರಯತ್ನಿಸುತ್ತಿವೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ