Breaking News: ಜಯಲಲಿತಾ ಸಾವು ಪ್ರಕರಣ; ಶಶಿಕಲಾ, ಮಾಜಿ ಸಚಿವರ ವಿರುದ್ಧ ತನಿಖೆಗೆ ಆರ್ಮುಗಸ್ವಾಮಿ ಆಯೋಗ ಆದೇಶ
ಜಯಲಲಿತಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿಕಲಾ ನಟರಾಜನ್, ಮಾಜಿ ಆರೋಗ್ಯ ಸಚಿವ ವಿಜಯಭಾಸ್ಕರ್, ಮಾಜಿ ಆರೋಗ್ಯ ಕಾರ್ಯದರ್ಶಿ ರಾಧಾಕೃಷ್ಣನ್ ಮತ್ತು ವೈದ್ಯ ಶಿವಕುಮಾರ್ ವಿರುದ್ಧ ತನಿಖೆ ನಡೆಸಲು ಆದೇಶಿಸಲಾಗಿದೆ.
ಚೆನ್ನೈ: ತಮಿಳುನಾಡು ಮಾಜಿ ಸಿಎಂ ಜೆ. ಜಯಲಲಿತಾ (J Jayalalithaa) ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನ್ಯಾ. ಆರ್ಮುಗಸ್ವಾಮಿ ವಿಚಾರಣಾ ಸಮಿತಿ ವರದಿ ಮಂಡನೆ ಮಾಡಿದೆ. ತಮಿಳುನಾಡು ಅಸೆಂಬ್ಲಿಯಲ್ಲಿ ಸಮಿತಿಯ ತನಿಖಾ ವರದಿಯನ್ನು ಮಂಡನೆ ಮಾಡಿದ್ದು, ಜಯಲಲಿತಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿಕಲಾ ನಟರಾಜನ್ (VK Sasikala), ಮಾಜಿ ಆರೋಗ್ಯ ಸಚಿವ ವಿಜಯಭಾಸ್ಕರ್, ಮಾಜಿ ಆರೋಗ್ಯ ಕಾರ್ಯದರ್ಶಿ ರಾಧಾಕೃಷ್ಣನ್ ಮತ್ತು ವೈದ್ಯ ಶಿವಕುಮಾರ್ ವಿರುದ್ಧ ತನಿಖೆ ನಡೆಸಲು ಆದೇಶಿಸಲಾಗಿದೆ.
ಜಯಲಲಿತಾ ಸಾವಿನ ಕುರಿತು ನ್ಯಾಯಮೂರ್ತಿ ಆರ್ಮುಗಸ್ವಾಮಿ ನೇತೃತ್ವದಲ್ಲಿ ಈ ವಿಚಾರಣಾ ಸಮಿತಿಯನ್ನು ನೇಮಿಸಲಾಗಿತ್ತು. ತಮಿಳುನಾಡು ಮಾಜಿ ಸಿಎಂ ಮತ್ತು ಎಐಎಡಿಎಂಕೆ ನಾಯಕಿ ಜೆ ಜಯಲಲಿತಾ ಅವರ ಸಾವಿನ ಕುರಿತು ತನಿಖೆ ನಡೆಸುತ್ತಿರುವ ನ್ಯಾಯಮೂರ್ತಿ ಆರುಮುಗಸ್ವಾಮಿ ತನಿಖಾ ಆಯೋಗವು ಇಂದು ತಮಿಳುನಾಡು ವಿಧಾನಸಭೆಯಲ್ಲಿ ತನ್ನ ತನಿಖಾ ವರದಿಯನ್ನು ಮಂಡಿಸಿದೆ.
ಇದನ್ನೂ ಓದಿ: ಶಶಿಕಲಾ ಮನಸಿಗೆ ಬಂದಂತೆ ಮನೆ ಬದಲಿಸಿದ್ದಾರೆ, ವಸ್ತುಗಳೂ ನಾಪತ್ತೆಯಾಗಿವೆ; ಜಯಲಲಿತಾ ಮನೆಯ ವಾರಸ್ದಾರರ ಆರೋಪ
ಎಐಎಡಿಎಂಕೆ ಮಾಜಿ ಪ್ರಧಾನ ಕಾರ್ಯದರ್ಶಿ ಶಶಿಕಲಾ, ಮಾಜಿ ಆರೋಗ್ಯ ಸಚಿವ ವಿಜಯಭಾಸ್ಕರ್ ಮತ್ತು ಮಾಜಿ ಆರೋಗ್ಯ ಕಾರ್ಯದರ್ಶಿ ರಾಧಾಕೃಷ್ಣನ್ ಮತ್ತು ವೈದ್ಯ ಶಿವಕುಮಾರ್ ಅವರನ್ನು ತನಿಖೆ ನಡೆಸಲು ಆದೇಶಿಸಲಾಗಿದೆ. ಇದಕ್ಕೂ ಮುನ್ನ ಸಮಿತಿ ವರದಿಯನ್ನು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರಿಗೆ ಸಲ್ಲಿಸಿತ್ತು. 2016ರ ಸೆಪ್ಟೆಂಬರ್ 22ರಿಂದ ದಿವಂಗತ ಮುಖ್ಯಮಂತ್ರಿ ಜಯಲಲಿತಾ ಆಸ್ಪತ್ರೆಗೆ ದಾಖಲಾಗಿದ್ದ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಈ ಸಮಿತಿಯನ್ನು ರಚಿಸಿತ್ತು.
Arumugasamy Inquiry Committee’s report tabled in Tamil Nadu assembly. The Committee was probing the death of former Tamil Nadu CM and AIADMK leader J Jayalalithaa.
(file pic) pic.twitter.com/GwNzODvH4j
— ANI (@ANI) October 18, 2022
ವಿಕೆ ಶಶಿಕಲಾ, ಶಿವಕುಮಾರ್, ಆಗಿನ ಆರೋಗ್ಯ ಸಚಿವ ಸಿ ವಿಜಯಭಾಸ್ಕರ್ ಮತ್ತು ಆಗಿನ ಮುಖ್ಯ ಕಾರ್ಯದರ್ಶಿ ರಾಮಮೋಹನ ರಾವ್ ಅವರ ವಿರುದ್ಧ ಸರ್ಕಾರಿ ತನಿಖೆಗೆ ಆದೇಶಿಸುವ (ಆಯೋಗ) ವರದಿಯ ಕುರಿತು ಕಾನೂನು ತಜ್ಞರ ಅಭಿಪ್ರಾಯವನ್ನು ತೆಗೆದುಕೊಂಡು ಸೂಕ್ತ ಕ್ರಮ ಕೈಗೊಳ್ಳಲು ಸಂಪುಟ ನಿರ್ಧರಿಸಿದೆ ಎನ್ನಲಾಗಿದೆ.
2017ರಲ್ಲಿ ಜಯಲಲಿತಾ ಅವರ ಪಕ್ಷವಾದ ಎಐಡಿಎಂಕೆ ತಮಿಳುನಾಡಿನಲ್ಲಿ ಆಡಳಿತ ನಡೆಸುತ್ತಿದ್ದಾಗ ಮದ್ರಾಸ್ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಎ. ಆರ್ಮುಗಸ್ವಾಮಿ ನೇತೃತ್ವದ ಆಯೋಗವನ್ನು ಸ್ಥಾಪಿಸಲಾಗಿತ್ತು. ಬಳಿಕ ಡಿಎಂಕೆ ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬಂದಾಗ, ಜಯಲಲತಾ ಅವರ ಸಾವಿನ ಬಗ್ಗೆ ವಿವರವಾದ ತನಿಖೆಯನ್ನು ನಡೆಸುವುದಾಗಿ ಭರವಸೆ ನೀಡಿತ್ತು. ನ್ಯಾಯಮೂರ್ತಿ ಎ ಆರ್ಮುಗಸ್ವಾಮಿ ಅವರ ವರದಿಯನ್ನು ಆಗಸ್ಟ್‌ನಲ್ಲಿ ಸರ್ಕಾರಕ್ಕೆ ಸಲ್ಲಿಸಲಾಗಿತ್ತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:14 pm, Tue, 18 October 22