Sanjay Jha: ಜೆಡಿಯು ಕಾರ್ಯಾಧ್ಯಕ್ಷರಾಗಿ ಸಂಜಯ್ ಝಾ ನೇಮಕ; ಬಿಹಾರಕ್ಕೆ ವಿಶೇಷ ಸ್ಥಾನಮಾನಕ್ಕಾಗಿ ಕರೆ ನೀಡಿದ ಕಾರ್ಯಕಾರಿ ಸಭೆ

ನಮ್ಮ ನಾಯಕ ಮತ್ತು ನಮ್ಮ ರಾಷ್ಟ್ರೀಯ ಅಧ್ಯಕ್ಷ, ಸಿಎಂ ನಿತೀಶ್ ಕುಮಾರ್ ಅವರು ನನಗೆ ದೊಡ್ಡ ಜವಾಬ್ದಾರಿಯನ್ನು ನೀಡಿದ್ದಾರೆ. ನಾನು ಅವರಿಗೆ ಆಭಾರಿಯಾಗಿದ್ದೇನೆ. ನಿತೀಶ್ ಕುಮಾರ್ ಬಿಹಾರವನ್ನು ಪರಿವರ್ತಿಸಿದ್ದಾರೆ ಎಂದು ಜೆಡಿಯು ಕಾರ್ಯಾಧ್ಯಕ್ಷರಾಗಿ ನೇಮಕವಾದ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಸಂಜಯ್ ಝಾ ಹೇಳಿದ್ದಾರೆ.

Sanjay Jha: ಜೆಡಿಯು ಕಾರ್ಯಾಧ್ಯಕ್ಷರಾಗಿ ಸಂಜಯ್ ಝಾ ನೇಮಕ; ಬಿಹಾರಕ್ಕೆ ವಿಶೇಷ ಸ್ಥಾನಮಾನಕ್ಕಾಗಿ ಕರೆ ನೀಡಿದ ಕಾರ್ಯಕಾರಿ ಸಭೆ
ಸಂಜಯ್ ಝಾ
Follow us
|

Updated on: Jun 29, 2024 | 3:57 PM

ದೆಹಲಿ ಜೂನ್ 29: ಜನತಾದಳ (ಯುನೈಟೆಡ್) (JDU) ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯು ರಾಜ್ಯಸಭಾ ಸಂಸದ ಸಂಜಯ್ ಕುಮಾರ್ ಝಾ (Sanjay Kumar Jha) ಅವರನ್ನು ಪಕ್ಷದ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲು ನಿರ್ಧರಿಸಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಅವರು ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಬಿಜೆಪಿ ನಾಯಕತ್ವದೊಂದಿಗಿನ ಉತ್ತಮ ಸಂಬಂಧದಿಂದಾಗಿ ಝಾ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಿಸುವುದು ಮಹತ್ವದ್ದಾಗಿದೆ ಎಂದು ಹೇಳಲಾಗಿದೆ. ಅವರು ರಾಜ್ಯಸಭೆಯಲ್ಲಿ ಪಕ್ಷದ ನಾಯಕರೂ ಆಗಿದ್ದಾರೆ.

ಬಿಜೆಪಿಯಿಂದ ಅನುಕೂಲಕರ ಒಪ್ಪಂದಗಳನ್ನು ಪಡೆಯಲು ಮತ್ತು ಎರಡು ಪಕ್ಷಗಳ ನಡುವೆ ಸೌಹಾರ್ದ ಸಂಬಂಧವನ್ನು ಕಾಪಾಡಿಕೊಳ್ಳಲು ಝಾ ಅವರು ಸೂಕ್ತರಾಗಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ ಎಂದು ಪಿಟಿಐ ವರದಿ ಮಾಡಿದೆ. ಸಭೆಯಲ್ಲಿ, ಪ್ರಸ್ತುತ ಲೋಕಸಭೆಯಲ್ಲಿ ಪ್ರಮುಖ ಕಿಂಗ್‌ಮೇಕರ್ ಆಗಿರುವ ಬಿಜೆಪಿ ಮಿತ್ರ ಪಕ್ಷವು ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಯಲು ಬಲವಾದ ಕಾನೂನನ್ನು ಬೇಕು ಎಂದು ಹೇಳಿದೆ.

ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯು ಬಿಹಾರಕ್ಕೆ ಕೇಂದ್ರ ಸರ್ಕಾರದಿಂದ ವಿಶೇಷ ವರ್ಗದ ಸ್ಥಾನಮಾನ ಅಥವಾ ವಿಶೇಷ ಆರ್ಥಿಕ ಪ್ಯಾಕೇಜ್ ಕೋರಿ ನಿರ್ಣಯವನ್ನು ಅಂಗೀಕರಿಸಿತು.

ದೆಹಲಿಯಲ್ಲಿ ನಡೆದ ಸಭೆಯಲ್ಲಿ ಬಿಹಾರ ಸಿಎಂ ಮತ್ತು ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್, ಕೇಂದ್ರ ಸಚಿವರಾದ ಲಲನ್ ಸಿಂಗ್ ಮತ್ತು ರಾಮ್ ನಾಥ್ ಠಾಕೂರ್ ಸೇರಿದಂತೆ ದೇಶಾದ್ಯಂತದ ಇತರ ಹಿರಿಯ ನಾಯಕರು ಭಾಗವಹಿಸಿದ್ದರು.

ಝಾ ಮಾತು

ಜೆಡಿಯು ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಝಾ, “ನಮ್ಮ ನಾಯಕ ಮತ್ತು ನಮ್ಮ ರಾಷ್ಟ್ರೀಯ ಅಧ್ಯಕ್ಷ, ಸಿಎಂ ನಿತೀಶ್ ಕುಮಾರ್ ಅವರು ನನಗೆ ದೊಡ್ಡ ಜವಾಬ್ದಾರಿಯನ್ನು ನೀಡಿದ್ದಾರೆ. ನಾನು ಅವರಿಗೆ ಆಭಾರಿಯಾಗಿದ್ದೇನೆ. ನಿತೀಶ್ ಕುಮಾರ್ ಬಿಹಾರವನ್ನು ಪರಿವರ್ತಿಸಿದ್ದಾರೆ. ಬಿಹಾರದಲ್ಲಿ ನಡೆದ ಚುನಾವಣೆಯು 40 ರಲ್ಲಿ 30 ಸ್ಥಾನಗಳನ್ನು ಗೆದ್ದು ತೋರಿಸಿದೆ. 243 ವಿಧಾನಸಭಾ ಕ್ಷೇತ್ರಗಳ ಪೈಕಿ 177 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದೇವೆ. NEET ವಿಚಾರದಲ್ಲಿ, “ಈ ಬಗ್ಗೆ ಕಠಿಣ ಕಾನೂನು ತರಬೇಕು, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು, ಇದರಿಂದ ಜನರ ವಿಶ್ವಾಸವನ್ನು ಮರಳಿ ಪಡೆಯಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆ; ಉದ್ಧವ್ ಠಾಕ್ರೆಯನ್ನು ಎಂವಿಎ ಸಿಎಂ ಅಭ್ಯರ್ಥಿಯಾಗಿ ಸ್ವೀಕರಿಸಲು ಶರದ್ ಪವಾರ್ ನಕಾರ

ಕುಮಾರ್ ಅವರ ಜೆಡಿಯು 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತ್ತು. ಬಿಜೆಪಿ ನೇತೃತ್ವದ ಎನ್‌ಡಿಎ 40 ಸ್ಥಾನಗಳಲ್ಲಿ 29 ಸ್ಥಾನಗಳನ್ನು ಗೆದ್ದು ಉತ್ತಮ ಪ್ರದರ್ಶನ ನೀಡಿದೆ. ಬಿಜೆಪಿ ಮತ್ತು ಜೆಡಿಯು ತಲಾ 12 ಸ್ಥಾನಗಳನ್ನು ಗೆದ್ದರೆ, ಎಲ್‌ಜೆಪಿ (ರಾಮ್ ವಿಲಾಸ್) ಸ್ಪರ್ಧಿಸಿದ ಎಲ್ಲಾ ಐದು ಸ್ಥಾನಗಳನ್ನು ಪಡೆದುಕೊಂಡಿದೆ. ಆರ್‌ಜೆಡಿ ಮತ್ತು ಕಾಂಗ್ರೆಸ್ ಕ್ರಮವಾಗಿ ನಾಲ್ಕು ಮತ್ತು ಮೂರು ಸ್ಥಾನಗಳನ್ನು ಗೆದ್ದಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ