Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್​​ ಉದ್ಘಾಟನೆಗೆ ಹಾಜರಾಗಿದ್ದ ರಾಜ್ಯಸಭಾ ಉಪ ಸಭಾಪತಿ ನಡೆಗೆ ಜೆಡಿಯು ಅಸಮಾಧಾನ

ಬಿಜೆಪಿಯನ್ನು ವಿರೋಧಿಸುವ 20 ಕ್ಕೂ ಹೆಚ್ಚು ಪಕ್ಷಗಳು ಭಾನುವಾರದ ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದು, ಹೊಸ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಅಲ್ಲ, ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸಬೇಕು ಎಂದು ಒತ್ತಾಯಿಸಿದರು.

ಸಂಸತ್​​ ಉದ್ಘಾಟನೆಗೆ ಹಾಜರಾಗಿದ್ದ ರಾಜ್ಯಸಭಾ ಉಪ ಸಭಾಪತಿ ನಡೆಗೆ ಜೆಡಿಯು ಅಸಮಾಧಾನ
ಹರಿವಂಶ್
Follow us
ರಶ್ಮಿ ಕಲ್ಲಕಟ್ಟ
|

Updated on: May 29, 2023 | 6:34 PM

ಪಾಟ್ನಾ: ಪಕ್ಷ ಕಾರ್ಯಕ್ರಮವನ್ನು ಬಹಿಷ್ಕರಿಸಿದರೂ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದಕ್ಕಾಗಿ ರಾಜ್ಯಸಭಾ (Rajya Sabha) ಉಪ ಸಭಾಪತಿ ಹರಿವಂಶ್ (Harivansh)ವಿರುದ್ಧ ಜೆಡಿಯು(JDU) ಮುಖ್ಯ ವಕ್ತಾರ ನೀರಜ್ ಕುಮಾರ್ ಸೋಮವಾರ ವಾಗ್ದಾಳಿ ನಡೆಸಿದ್ದಾರೆ. ನಿಮ್ಮ ಅಧ್ಯಕ್ಷರು, ಗೌರವಾನ್ವಿತ ಉಪಾಧ್ಯಕ್ಷರೂ ಸಹ ಗೈರುಹಾಜರಾದ ಸಮಾರಂಭದಲ್ಲಿ ಪತ್ರಕರ್ತ-ರಾಜಕಾರಣಿ ಹರಿವಂಶ್ ಭಾಗವಹಿಸುವಿಕೆಯನ್ನು ಕುಮಾರ್ ಖಂಡಿಸಿದ್ದಾರೆ. ಪತ್ರಿಕೋದ್ಯಮಕ್ಕೆ ನಿಮ್ಮ ಕೊಡುಗೆಯನ್ನು ಗುರುತಿಸಿ ಪಕ್ಷವು ನಿಮ್ಮನ್ನು ರಾಜ್ಯಸಭೆಗೆ ಕಳುಹಿಸಿದೆ. ಆದರೆ ದೇಶದ ಸಂಸದೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಕರಾಳ ಅಧ್ಯಾಯ ನಡೆದಾಗ ನಿಮ್ಮ ಉನ್ನತ ಹುದ್ದೆಗಾಗಿ ನೀವು ಬೌದ್ಧಿಕ ಸಮಗ್ರತೆಯನ್ನು ಮಾರಿಕೊಂಡಿದ್ದೀರಿ ಎಂದು ಜೆಡಿಯು ವಕ್ತಾರರು ಹೇಳಿದ್ದಾರೆ.

ಪಕ್ಷದ ವರಿಷ್ಠ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಮಾರಂಭದ ಬಹಿಷ್ಕಾರವನ್ನು ಸಮರ್ಥಿಸಿಕೊಂಡಿದ್ದು, ಸ್ವಾತಂತ್ರ್ಯ ಹೋರಾಟಕ್ಕೆ ಯಾವುದೇ ಕೊಡುಗೆ ನೀಡದವರ ಇತಿಹಾಸವನ್ನು ಬದಲಾಯಿಸುವ ಪ್ರಯತ್ನ ಇದು ಎಂದು ಬಣ್ಣಿಸಿದ್ದಾರೆ.

ಬಿಜೆಪಿಯನ್ನು ವಿರೋಧಿಸುವ 20 ಕ್ಕೂ ಹೆಚ್ಚು ಪಕ್ಷಗಳು ಭಾನುವಾರದ ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದು, ಹೊಸ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಅಲ್ಲ, ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸಬೇಕು ಎಂದು ಒತ್ತಾಯಿಸಿದರು.

ಪಕ್ಷ ಬಹಿಷ್ಕರಿಸಲು ನಿರ್ಧರಿಸಿದ್ದರೂ ನಿಮ್ಮ ಭಾಗವಹಿಸುವಿಕೆಯ ದೃಷ್ಟಿಯಿಂದ ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಉನ್ನತ ನಾಯಕತ್ವ ನಿರ್ಧರಿಸುತ್ತದೆ. ಆದರೆ ಭವಿಷ್ಯದ ಪೀಳಿಗೆಯು ಒಬ್ಬ ನಿಮ್ಮ ನಿಲುವಿಗೆ ಯೋಗ್ಯವಲ್ಲದ ನಿಮ್ಮ ನಡೆ ಬಗ್ಗೆ ಕ್ರಮವನ್ನು ನಿರ್ಧರಿಸುತ್ತದೆ ಎಂದಿದ್ದಾರೆ ಕುಮಾರ್.

ಮುಂದಿನ ವರ್ಷ ಕೊನೆಗೊಳ್ಳಲಿರುವ ರಾಜ್ಯಸಭೆಯಲ್ಲಿ ಅವರ ಸತತ ಎರಡನೇ ಅಧಿಕಾರಾವಧಿಯನ್ನು ಪೂರೈಸುತ್ತಿರುವ ಹರಿವಂಶ್ ಅವರು 2018 ರಿಂದ ಉಪ ಸಭಾಪತಿಯಾಗಿದ್ದಾರೆ, ಅವರು ಈ ಸ್ಥಾನವನ್ನು ಆಕ್ರಮಿಸಿಕೊಂಡ ಮೂರನೇ ಕಾಂಗ್ರೆಸ್ಸೇತರ ಸಂಸದರಾಗಿದ್ದಾರೆ. 66 ವರ್ಷ ಹರೆಯದ ಹರಿವಂಶ್ ಜಾರ್ಖಂಡ್ ಮತ್ತು ಬಿಹಾರದ ಪ್ರಮುಖ ಹಿಂದಿ ಪತ್ರಿಕೆಗಳಲ್ಲಿ ಒಂದಾದ ಪ್ರಭಾತ್ ಖಬರ್‌ನ ಸಂಪಾದಕರಾಗಿ ಸೇವೆ ಸಲ್ಲಿಸುವ ಮೊದಲು ಆಗಿನ ಪ್ರಧಾನಿ ಚಂದ್ರಶೇಖರ್ ಅವರ ಮಾಧ್ಯಮ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: Delhi murder: ದೆಹಲಿಯಲ್ಲಿ 16ರ ಹರೆಯದ ಬಾಲಕಿಯ ಬರ್ಬರ ಕೊಲೆ ಮಾಡಿದ ಆರೋಪಿ ಸಾಹಿಲ್ ಬಂಧನ

ಜೆಡಿಯು ಕಳೆದ ವರ್ಷ ಬಿಜೆಪಿ ನೇತೃತ್ವದ ಎನ್ ಡಿಎಯಿಂದ ಹೊರಬಂದು ನಂತರ ಆರ್ ಜೆಡಿ, ಕಾಂಗ್ರೆಸ್ ಮತ್ತು ಎಡಪಕ್ಷಗಳನ್ನು ಒಳಗೊಂಡಿರುವ ‘ಮಹಾಘಟಬಂಧನ್’ ಭಾಗವಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು