ಜೀನ್ಸ್​, ಟೀ ಶರ್ಟ್​ ಧರಿಸಿ ಕಚೇರಿಗೆ ಬರಬೇಡಿ, ಸರ್ಕಾರಿ ನೌಕರರಿಗೆ ಸೂಚನೆ

ಬಿಹಾರದ ಸರನ್ ಜಿಲ್ಲೆಯಲ್ಲಿ ಎಲ್ಲಾ ಸರ್ಕಾರಿ ನೌಕರರು ಜೀನ್ಸ್ ಧರಿಸಿ ಕಚೇರಿಗೆ ಬರುವುದನ್ನು ಜಿಲ್ಲಾಧಿಕಾರಿಗಳು ನಿಷೇಧಿಸಿದ್ದಾರೆ.

ಜೀನ್ಸ್​, ಟೀ ಶರ್ಟ್​ ಧರಿಸಿ ಕಚೇರಿಗೆ ಬರಬೇಡಿ, ಸರ್ಕಾರಿ ನೌಕರರಿಗೆ ಸೂಚನೆ
ಜೀನ್ಸ್
Follow us
ನಯನಾ ರಾಜೀವ್
|

Updated on:Apr 19, 2023 | 11:38 AM

ಕಳೆದ ವರ್ಷ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಕೆಲಸ ಮಾಡುವ ಶಿಕ್ಷಕರು ಜೀನ್ಸ್(Jeans) ಮತ್ತು ಟೀ ಶರ್ಟ್ ಧರಿಸಿ ಕರ್ತವ್ಯಕ್ಕೆ ಬರಬಾರದು ಎಂದು ಆದೇಶ ಹೊರಡಿಸಲಾಗಿತ್ತು. ಈಗ ಬಿಹಾರದ ಸರನ್ ಜಿಲ್ಲೆಯಲ್ಲಿಯೂ ಇದೇ ನಿಯಮ ಜಾರಿಗೆ ಬರಲಿದೆ. ಎಲ್ಲಾ ಸರ್ಕಾರಿ ನೌಕರರು ಜೀನ್ಸ್ ಧರಿಸಿ ಕಚೇರಿಗೆ ಬರುವುದನ್ನು ಜಿಲ್ಲಾಧಿಕಾರಿಗಳು ನಿಷೇಧಿಸಿದ್ದಾರೆ.

ಅಲ್ಲದೆ ಟೀ ಶರ್ಟ್ ಧರಿಸದಂತೆ ಸೂಚಿಸಿದ್ದಾರೆ. ಈ ಸಂಬಂಧ ಮ್ಯಾಜಿಸ್ಟ್ರೇಟ್ ಅಮರ್ ಸಮೀರ್ ಸುತ್ತೋಲೆ ಹೊರಡಿಸಿದ್ದಾರೆ. ಕಚೇರಿಯಲ್ಲಿ ಕೆಲಸ ಮಾಡುವ ಎಲ್ಲಾ ನೌಕರರು ಫಾರ್ಮಲ್ಸ್ ಧರಿಸಬೇಕು ಎಂದು ಆದೇಶಿಸಿದೆ. ಪ್ರತಿದಿನ ಅನೇಕ ಜನರು ಬರುತ್ತಾರೆ ಮತ್ತು ಅಧಿಕಾರಿಗಳು ಯಾರು ಎಂಬುದನ್ನು ಸುಲಭವಾಗಿ ನೆನಪಿಟ್ಟುಕೊಳ್ಳಲು ಈ ಡ್ರೆಸ್ ಕೋಡ್ ಉಪಯುಕ್ತವಾಗಿದೆ ಎಂದು ಮ್ಯಾಜಿಸ್ಟ್ರೇಟ್ ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಅಧಿಕಾರಿಗಳನ್ನು ಕಂಡರೆ ಜನ ಗುರುತಿಸುವಂತಾಗಬೇಕು ಎಂದರು. ಉತ್ತಮ ಬಟ್ಟೆ ಧರಿಸಿ ಐಡಿ ಕಾರ್ಡ್​ ಕೂಡ ಧರಿಸುವಂತೆ ಸೂಚಿಸಲಾಗಿದೆ. ಅದಕ್ಕಾಗಿಯೇ ಎಲ್ಲ ನೌಕರರಿಗೂ ಗುರುತಿನ ಚೀಟಿ ನೀಡಲಾಗಿದೆ. ಎಲ್ಲಾ ನೌಕರರು ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ಕಚೇರಿಗಳಲ್ಲಿ ಔಪಚಾರಿಕ ಬಟ್ಟೆಗಳನ್ನು ಧರಿಸಬೇಕು ಎಂದು ಮ್ಯಾಜಿಸ್ಟ್ರೇಟ್ ಸಲಹೆ ನೀಡಿದರು.

ಮತ್ತಷ್ಟು ಓದಿ: Airbag Jeans: ವಿಶ್ವದ ಮೊದಲ ಏರ್​​ ಬ್ಯಾಗ್​​ ಜೀನ್ಸ್, ಇದರ ಬೆಲೆ ಹಾಗೂ ವಿಶೇಷತೆ ಇಲ್ಲಿದೆ

ನಿರ್ದಿಷ್ಟ ಇಲಾಖೆಗಳಲ್ಲಿ ಹಠಾತ್ ತಪಾಸಣೆ ನಡೆಸಲಾಗುವುದು ಮತ್ತು ವೀಡಿಯೊ ಕಾನ್ಫರೆನ್ಸ್ ಮತ್ತು ವೀಡಿಯೊ ಕರೆ ಮೂಲಕ ಆದೇಶಗಳ ಸ್ಥಿತಿಯನ್ನು ಸಹ ತಿಳಿಯಲಾಗುವುದು ಎಂದು ತಿಳಿಸಲಾಗಿದೆ. ಹೊಸ ಮಾರ್ಗಸೂಚಿಗಳನ್ನು ವಿಶೇಷವಾಗಿ ಡ್ರೆಸ್ ಕೋಡ್ ಅನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನೌಕರರಿಗೆ ಎಚ್ಚರಿಕೆ ನೀಡಿದ ಅವರು, ಏನಾದರೂ ತಪ್ಪು ಮಾಡಿದರೆ ದಂಡ ವಿಧಿಸಲಾಗುತ್ತದೆ. ಕಚೇರಿಗಳಲ್ಲಿನ ಕಾರ್ಯ ವೈಖರಿಯನ್ನು ಬದಲಾಯಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:54 am, Wed, 19 April 23

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!